AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಇಂದು ಕರ್ನಾಟಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದು, ಇಂದು ಕೆಎಲ್‌ಇ ನೂತನ ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಮತ್ತು ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಬಳಿಕ ಕೊಲ್ಲಾಪುರ ಮೂಲಕ ಚಿಕ್ಕೋಡಿ ತಾಲೂಕಿನ ಎಕ್ಸಂಬಾಗೆ ತೆರಳಿ ಬಿರೇಶ್ವರ ಕೋಆಪರೇಟಿವ್ ಕ್ರೆಡಿಟ್ ಸೊಸೈಟಿ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ.

ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ: ಇಂದು ಕರ್ನಾಟಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಅಮಿತ್ ಶಾImage Credit source: PTI
ಸಂಜಯ್ಯಾ ಚಿಕ್ಕಮಠ
| Edited By: |

Updated on: Sep 19, 2026 | 6:42 AM

Share

ಮುಖ್ಯಾಂಶಗಳು

  • ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ಅಮಿತ್ ಶಾ
  • ಕೆಎಲ್‌ಇ ವೈದ್ಯಕೀಯ ಕಾಲೇಜು ಆಸ್ಪತ್ರೆ ಉದ್ಘಾಟನೆ
  • ಎಕ್ಸಂಬಾದಲ್ಲಿ ಬಿರೇಶ್ವರ ಸೊಸೈಟಿ ಕಟ್ಟಡ ಉದ್ಘಾಟನೆ

ಹುಬ್ಬಳ್ಳಿ, ಸೆಪ್ಟೆಂಬರ್ 19: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದು, ಇಂದು ಕರ್ನಾಟಕದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿರುವ ಅಮಿತ್ ಶಾ, ಬೆಳಗ್ಗೆಯಿಂದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಕೆಎಲ್‌ಇ ನೂತನ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡ ಮತ್ತು ಆಸ್ಪತ್ರೆಯನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಕೆಎಲ್‌ಇ ಕಾಲೇಜಿನಲ್ಲಿ ಮಧ್ಯಾಹ್ನದ ಊಟ ಮಾಡಲಿದ್ದಾರೆ.

ಊಟದ ನಂತರ ಅಮಿತ್ ಶಾ ಅವರು ವಿಶೇಷ ವಿಮಾನದ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ತೆರಳಲಿದ್ದಾರೆ. ಬಳಿಕ ಕೊಲ್ಲಾಪುರದಿಂದ ರಸ್ತೆ ಮಾರ್ಗವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮಕ್ಕೆ ಆಗಮಿಸಲಿದ್ದಾರೆ.

ಎಕ್ಸಂಬಾದಲ್ಲಿ ಬಿರೇಶ್ವರ ಕೋಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ಕಟ್ಟಡವನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಅಮಿತ್ ಶಾ ಅವರ ಕರ್ನಾಟಕ ಪ್ರವಾಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಹಲವು ಬಿಜೆಪಿ ನಾಯಕರು ಕೂಡ ಆಗಮಿಸಿದ್ದಾರೆ. ಕರ್ನಾಟಕ ಪ್ರವಾಸದ ಬಗ್ಗೆ ಅಮಿತ್ ಶಾ ಅವರ ಕಚೇರಿಯ ಅಧಿಕೃತ ಎಕ್ಸ್​​ ತಾಣದ ಮೂಲಕ ಶುಕ್ರವಾರ ಮಾಹಿತಿ ಹಂಚಿಕೊಳ್ಳಲಾಗಿದೆ.

ಅಮಿತ್ ಶಾ ಎಕ್ಸ್​​ ಸಂದೇಶ

ಅಮಿತ್ ಶಾ ಅವರ ಈ ಪ್ರವಾಸದಲ್ಲಿ ಹುಬ್ಬಳ್ಳಿ ಹಾಗೂ ಚಿಕ್ಕೋಡಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎರಡೂ ಕಾರ್ಯಕ್ರಮಗಳತ್ತ ಗಮನ ಸೆಳೆಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ