
ಹುಬ್ಬಳ್ಳಿ, ಸೆಪ್ಟೆಂಬರ್ 19: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದು, ಇಂದು ಕರ್ನಾಟಕದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಮಾಡಿರುವ ಅಮಿತ್ ಶಾ, ಬೆಳಗ್ಗೆಯಿಂದ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಕೆಎಲ್‌ಇ ನೂತನ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡ ಮತ್ತು ಆಸ್ಪತ್ರೆಯನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಕೆಎಲ್‌ಇ ಕಾಲೇಜಿನಲ್ಲಿ ಮಧ್ಯಾಹ್ನದ ಊಟ ಮಾಡಲಿದ್ದಾರೆ.
ಊಟದ ನಂತರ ಅಮಿತ್ ಶಾ ಅವರು ವಿಶೇಷ ವಿಮಾನದ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ತೆರಳಲಿದ್ದಾರೆ. ಬಳಿಕ ಕೊಲ್ಲಾಪುರದಿಂದ ರಸ್ತೆ ಮಾರ್ಗವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಎಕ್ಸಂಬಾ ಗ್ರಾಮಕ್ಕೆ ಆಗಮಿಸಲಿದ್ದಾರೆ.
ಎಕ್ಸಂಬಾದಲ್ಲಿ ಬಿರೇಶ್ವರ ಕೋಆಪರೇಟಿವ್ ಕ್ರೆಡಿಟ್ ಸೊಸೈಟಿಯ ನೂತನ ಕಟ್ಟಡವನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಅಮಿತ್ ಶಾ ಅವರ ಕರ್ನಾಟಕ ಪ್ರವಾಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಹಲವು ಬಿಜೆಪಿ ನಾಯಕರು ಕೂಡ ಆಗಮಿಸಿದ್ದಾರೆ. ಕರ್ನಾಟಕ ಪ್ರವಾಸದ ಬಗ್ಗೆ ಅಮಿತ್ ಶಾ ಅವರ ಕಚೇರಿಯ ಅಧಿಕೃತ ಎಕ್ಸ್ ತಾಣದ ಮೂಲಕ ಶುಕ್ರವಾರ ಮಾಹಿತಿ ಹಂಚಿಕೊಳ್ಳಲಾಗಿದೆ.
Union Home Minister and Minister of Cooperation Shri @AmitShah Ji’s programs in Karnataka.
ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಕಾರ್ಯಕ್ರಮದ ವಿವರಗಳು. pic.twitter.com/0ignphlIOx
— Office of Amit Shah (@AmitShahOffice) September 18, 2026
ಅಮಿತ್ ಶಾ ಅವರ ಈ ಪ್ರವಾಸದಲ್ಲಿ ಹುಬ್ಬಳ್ಳಿ ಹಾಗೂ ಚಿಕ್ಕೋಡಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎರಡೂ ಕಾರ್ಯಕ್ರಮಗಳತ್ತ ಗಮನ ಸೆಳೆಯಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ