AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಲೈಫ್​ಲೈನ್​ ಆಸ್ಪತ್ರೆಯಲ್ಲಿ ಐದು ಜನರ ನಿಗೂಢ ಸಾವು ಪ್ರಕರಣ; ತನಿಖೆಗೆ ಆದೇಶ

ಮೊನ್ನೆ ರಾತ್ರಿ ಮೇ 4ನೇ ತಾರೀಕಿನಂದು ಹುಬ್ಬಳ್ಳಿಯ ಲೈಫ್​ಲೈನ್​ ಆಸ್ಪತ್ರೆಯಲ್ಲಿ ಐದು ಜನ ನಿಗೂಢ ಸಾವು ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯಿಂದ ತನಿಖೆಗೆ ಆದೇಶ ಹೊರಡಿಸಲಾಗಿದೆ.

ಹುಬ್ಬಳ್ಳಿಯ ಲೈಫ್​ಲೈನ್​ ಆಸ್ಪತ್ರೆಯಲ್ಲಿ ಐದು ಜನರ ನಿಗೂಢ ಸಾವು ಪ್ರಕರಣ; ತನಿಖೆಗೆ ಆದೇಶ
ಪ್ರಾತಿನಿಧಿಕ ಚಿತ್ರ
shruti hegde
|

Updated on: May 06, 2021 | 11:41 AM

Share

ಹುಬ್ಬಳ್ಳಿ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಉಲ್ಬಣಗೊಳ್ಳುತ್ತಿದೆ. ಮೊನ್ನೆ ರಾತ್ರಿ ಮೇ 4ನೇ ತಾರೀಕಿನಂದು ಲೈಫ್​ಲೈನ್​ ಆಸ್ಪತ್ರೆಯಲ್ಲಿ ಐದು ಜನ ನಿಗೂಢ ಸಾವು ಸಂಭವಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯಿಂದ ತನಿಖೆಗೆ ಆದೇಶ ಹೊರಡಿಸಲಾಗಿದೆ. ಆಕ್ಸಿಜನ್​ ಕೊರತೆಯಿಂದಾಗಿ ಸಾವಿಗೀಡಾಗಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ಜಿಲ್ಲಾ ಆರ್​ಸಿಹೆಚ್ ಡಾ.ಎಸ್​.ಎಂ ಹೊನಕೇರಿ ನೈತೃತ್ವದಲ್ಲಿ ತನಿಖೆ ನಡೆಸುವಂತೆ ಡಿಹೆಚ್​ಓ ಯಶವಂತ ಮದೀನಕರ್ ಅವರು ಆದೇಶ ಹೊರಡಿಸಿದ್ದು, ಮೂರು ದಿನಗಳೊಳಗೆ ವಿಚಾರಣೆ ಮುಗಿಸಿ ವರದಿ ನೀಡಿವಂತೆ ಸೂಚನೆ ನೀಡಲಾಗಿದೆ.

ವಿಜಯಪುರ ಇಂಡಿ ತಾಲೂಕು ಆಸ್ಪತ್ರೆ ವೈದ್ಯರ ನಿರ್ಲಕ್ಷ; ರೋಗಿ ಸಾವು ಎಂದು ಆರೋಪ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರನ್ನು ಹೆದರಿಸುತ್ತಿದ್ದಾರೆ. ರೋಗಿ ತುಂಬಾ ಗಂಭೀರ ಸ್ಥಿತಿಯಲ್ಲಿದ್ದಾರೆ. ಇನ್ನು, ಅವರು ಬದುಕುವುದಿಲ್ಲ ಎಂದು ವೈದ್ಯರು ಕುಡುಂಬಸ್ಥರನ್ನು ಹೆದರಿಸುತ್ತಿದ್ದಾರೆ.  ಸಂಬಂಧಿಕರಲ್ಲಿ ಅಧೈರ್ಯ ತುಂಬುತ್ತಿದ್ದಾರೆ ಎಂದು ಆರೋಪದ ಮಾತು ಕೇಳಿ ಬರುತ್ತಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಧೈರ್ಯ ತುಂಬುವ ಮಾತನ್ನಾಡುವುದನ್ನು ಬಿಟ್ಟು, ಧೈರ್ಯಗೆಡಿಸುತ್ತಿದ್ದಾರೆ. ಇಂಡಿ ತಾಲೂಕು ಆಸ್ಪತ್ರೆಯ ವೈದ್ಯರ ನಿರ್ಲಕ್ಷಕ್ಕೆ ರೋಗಿಗಳು ಬಲಿಯಾಗುತ್ತಿದ್ದಾರೆ ಎಂದು ಆರೋಪ‌ ಮಾಡಲಾಗುತ್ತಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ದಾಖಲಾಗಿದ್ದರೂ ಇಂಡಿ ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ನೀಡದ ಕಾರಣ ಕಳೆದ ರಾತ್ರಿ ರೋಗಿ ಸಾವಿಗೀಡಾಗಿದ್ದರು. ಹೀಗಾಗಿ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ರೋಗಿ ಸಂಬಂಧಿಕರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಕೊವಿಡ್ ಭಯ; ದಾವಣಗೆರೆಯಲ್ಲಿ ರೈಲಿಗೆ ತಲೆಕೊಟ್ಟ ಪತ್ರಕರ್ತ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ