AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?

ನೇಹಾ ಭೀಕರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಇಂದು(ಮೇ.15) ಬೆಳಿಗ್ಗೆ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ(Anjali) ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಮಾತನಾಡಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಸುಕುಮಾರ ಅವರು ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ ಎಂದಿದ್ದಾರೆ.

ಹುಬ್ಬಳ್ಳಿ ಅಂಜಲಿ ಹಂತಕನ ಪತ್ತೆಗೆ ಎರಡು ವಿಶೇಷ ತಂಡ ರಚನೆ, ಪೊಲೀಸ್ ಆಯುಕ್ತೆ ಹೇಳಿದ್ದೇನು?
ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಸುಕುಮಾರ
ಶಿವಕುಮಾರ್ ಪತ್ತಾರ್
| Edited By: |

Updated on: May 15, 2024 | 7:46 PM

Share

ಹುಬ್ಬಳ್ಳಿ, ಮೇ.15: ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಇಂದು(ಮೇ.15) ಬೆಳಿಗ್ಗೆ ಅಂಜಲಿ(Anjali) ಅಂಬಿಗೇರ ಎಂಬ 21 ವರ್ಷದ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಹಿನ್ನಲೆ ರಜೆಯಲ್ಲಿದ್ದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಸುಕುಮಾರ(Renuka Sukumar) ಅವರು, ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ‘ಅಂಜಲಿ ಕೊಲೆ ಮಾಡಿದ ವಿಶ್ವ ಅಲಿಯಾಸ್ ಗಿರೀಶ್ ಪರಿಚಯಸ್ಥ. ಇಂದು ಮುಂಜಾನೆ ಅಂಜಲಿ ಅಂಬಿಗೇರಗೆ 4 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ

‘ಅವರ ಮನೆಯವರ ದೂರಿನ ಪ್ರಕಾರ ಪ್ರೀತಿಸುವಂತೆ ಪೀಡಿಸುತ್ತಿದ್ದ. ಅಂಜಲಿ ಪ್ರೀತಿ ನಿರಾಕರಣೆ ಮಾಡಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಜೊತೆಗೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ವಿರುದ್ಧ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳಿವೆ. ಎಲ್ಲಾ ಆಯಾಮದಲ್ಲಿ‌ ತನಿಖೆ ಮಾಡುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಯ ಹಿಂದಿನ ಹಿಸ್ಟರಿ ಭಯಾನಕ!

ಇನ್ನು ಅಂಜಲಿ ಕುಟುಂಬ ಬೆಂಡಿಗೇರಿ‌ ಠಾಣೆಗೆ ಬಂದಿರುವುದು ನಿಜ, ಈ ಕುರಿತು ಪೊಲೀಸ್​ ಠಾಣೆಯ ಸಿಸಿಕ್ಯಾಮರಾ ದೃಶ್ಯಗಳಿವೆ. ಆದ್ರೆ, ಯಾವ ಕಾರಣಕ್ಕೆ ಬಂದಿದ್ದಾರೆ ಎನ್ನುವುದು ಸ್ಪಷ್ಟತೆ ಇಲ್ಲ. ಈ ಕುರಿತು ಸಿಬ್ಬಂದಿ ಅವರು ಬೇರೆ ಪ್ರಕರಣಕ್ಕೆ ಬಂದಿದ್ದರು ಎಂದು ಹೇಳುತ್ತಿದ್ದಾರೆ. ಈ ಬಗ್ಗೆಯೂ ತನಿಖೆ ಆರಂಭಿಸಿದ್ದೇವೆ. ಬೆಂಡಿಗೇರಿ ಠಾಣೆ ಸಿಬ್ಬಂದಿ ಲೋಪದೋಷವಿದ್ರೆ ಕ್ರಮ ಕೈಗೊಳ್ಳುತ್ತೆವೆ ಎಂದು ಹು-ಧಾ ನಗರ ಪೊಲೀಸ್ ಆಯುಕ್ತೆ​ ರೇಣುಕಾ ಸುಕುಮಾರ ಖಡಕ್​ ಉತ್ತರ ನೀಡಿದರು.

ಇದೇ ವೇಳೆ ಹುಬ್ಬಳ್ಳಿ-ಧಾರವಾಡದಲ್ಲಿ ದೌರ್ಜನ್ಯ ಪ್ರಕರಣ ಹೆಚ್ಚುತ್ತಿರುವ ವಿಚಾರ, ‘ ಶಾಲಾ-ಕಾಲೇಜು, ಮಹಿಳೆಯರು ಸೇರುವ ಸ್ಥಳಗಳಲ್ಲಿ ಸೇರಿದಂತೆ ವಿವಿಧ ಕಡೆಗಳಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಹಲವು ಸಂಘ-ಸಂಸ್ಥೆಗಳ ಮುಖ್ಯಸ್ಥರ ಜೊತೆಯೂ ಸಭೆ ನಡೆಸಲಾಗುತ್ತಿದ್ದು, ಮಕ್ಕಳ ಪಾಲಕರ ಜೊತೆಗೂ ಚರ್ಚಿಸಿ ಅರಿವು ಮೂಡಿಸಲಾಗುತ್ತಿದೆ. ನಗರದಲ್ಲಿ ಮಹಿಳೆಯರ‌ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ