ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ; 98 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ

ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 98 ದಿನಗಳ ಬಳಿಕ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ 494 ಪುಟಗಳ ಚಾರ್ಜ್​ಶೀಟ್​ನ್ನು ಹುಬ್ಬಳ್ಳಿಯ ಜೆಎಂಎಫ್​​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಹಾಗಾದರೆ, ಚಾರ್ಜ್​ಶೀಟ್​ನಲ್ಲಿ ಏನಿದೆ? ಈ ಕುರಿತು ಒಂದು ವರದಿ ಇಲ್ಲಿದೆ.

ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ; 98 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ
ಹುಬ್ಬಳ್ಳಿಯಲ್ಲಿ ಅಂಜಲಿ ಹತ್ಯೆ ಪ್ರಕರಣ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 24, 2024 | 2:54 PM

ಹುಬ್ಬಳ್ಳಿ, ಆ.24: ಮೇ. 15ರಂದು ಹುಬ್ಬಳ್ಳಿ(Hubballi)ಯ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿ ಗಿರೀಶ್ ಅಲಿಯಾಸ್ ವಿಶ್ವ ಎಂಬಾತ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ  ಸಿಐಡಿ ಅಧಿಕಾರಿಗಳು ತನಿಖೆ ನಡೆಸಿ 494 ಪುಟಗಳ ಚಾರ್ಜ್​ಶೀಟ್​ನ್ನು ಹುಬ್ಬಳ್ಳಿಯ ಜೆಎಂಎಫ್​​ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಮುಖ್ಯವಾಗಿ ಸಿಸಿಟಿವಿ, ಪ್ರತ್ಯಕ್ಷ ಸಾಕ್ಷಿ, ಹಂತಕನ ತಾಯಿ, ಗಿರೀಶ್ ಕೆಲಸ ಮಾಡ್ತಿದ್ದ ಹೊಟೆಲ್ ಸಿಬ್ಬಂದಿ ಸೇರಿ 85 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ. ಗಿರೀಶ್​ನಿಂದ ಅಂಜಲಿ ದೂರವಾಗಿದ್ದಕ್ಕೆ ಕೊಲೆ ಎಂದು ಉಲ್ಲೇಖ ಮಾಡಲಾಗಿದೆ.

ಆರೋಪಿ ಗಿರೀಶ್ ಮೈಸೂರಿನ ಮಹಾರಾಜ ಹೋಟೆಲ್ ಆವರಣದ ಎಂಎಸ್ಸಿ ಪಬ್ ಆ್ಯಂಡ್ ಬಾರ್​ನಲ್ಲಿ ಕೆಲಸ ಮಾಡುತ್ತಿದ್ದ. ಗಿರೀಶ್ ಕೆಲಸ ಮಾಡುವ ಸಮಯದಲ್ಲಿಯೇ 3 ರಿಂದ 4 ಬಾರಿ ಅಂಜಲಿ, ಗಿರೀಶ್ ಭೇಟಿಗೆ ತೆರಳಿದ್ದರು. 2024 ರ ಎಪ್ರೀಲ್​ನಲ್ಲಿ ಇಬ್ಬರ ನಡುವೆ ಮನಸ್ತಾಪವಾಗಿದೆ. ಈ ವೇಳೆ ಗಿರೀಶ್ ಕರೆಯನ್ನು ಅಂಜಲಿ ಸ್ವೀಕರಿಸಿಲ್ಲ. ಇದಲ್ಲದೆ ಅಂಜಲಿ ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು. ಹೀಗಾಗಿ ಅಂಜಲಿ ಮನೆಗೆ ಬಂದು ಕೊಲೆ ಮಾಡಿದ್ದಾನೆಂದು ದೋಷಾರೋಪ ಪಟ್ಟಿಯಲ್ಲಿ ನಮೂದಿಸಲಾಗಿದೆ.

ಇದನ್ನೂ ಓದಿ:ಅಂಜಲಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಕೊಲೆಯಲ್ಲಿ ನೇಹಾ ತಂದೆ ನಿರಂಜನ ಆಪ್ತ ಸಹಾಯಕನ ಕೈವಾಡ ಆರೋಪ

ಮೈಸೂರಿನಿಂದಲೇ ಚಾಕು ತಂದಿದ್ದ ಗಿರೀಶ್

ಮೈಸೂರಿನಿಂದಲೇ ಚಾಕು ತಂದಿದ್ದ ಹಂತಕ ಗಿರೀಶ್, ಮೈಸೂರಿನ ಬಸ್ ನಿಲ್ದಾಣದ ಪಕ್ಕ ಗುರುತು ಸಿಗಬಾರದು ಎನ್ನುವ ಕಾರಣಕ್ಕೆ ಮಾಸ್ಕ್ ಖರೀದಿ ಮಾಡಿದ್ದ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಗಿರೀಶ್​, ಮೇ. 17 ರಂದು ಮೈಸೂರಿನಿಂದ ಬೆಳಗಾವಿಗೆ ವಿಶ್ವ ಮಾನವ ರೈಲಿನಲ್ಲಿ ಪ್ರಯಾಣ ಮಾಡುವಾಗ ರೈಲ್ವೆ ಪೊಲೀಸರು ಕೈಗೆ ಸಿಕ್ಕಿ ಬಿದ್ದಿದ್ದ. ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಜೊತೆ ಕಿರಿಕ್ ಮಾಡಿಕೊಂಡು, ದಾವಣಗೆರೆ ಬಳಿ ರೈಲಿನಿಂದ ಬಿದ್ದು ಗಾಯ ಮಾಡಿಕೊಂಡಿದ್ದ. ಇನ್ನು ಅಂಜಲಿ ಕೊಲೆ ಪ್ರಕರಣದ ಹಿನ್ನಲೆ ನಾಲ್ಕು ಜನ ಪೊಲೀಸ್ ಅಧಿಕಾರಿಗಳ ತಲೆದಂಡವೂ ಆಗಿತ್ತು. ಇದೀಗ ಕೊಲೆ ನಡೆದ 98 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್