ಅಣ್ಣಿಗೇರಿ ಪೊಲೀಸರ ರೇಡ್, ಸರ್ಕಾರಿ ಜಮೀನಿನಲ್ಲಿ ಹೂತಿಟ್ಟಿದ್ದ ಕಳ್ಳಭಟ್ಟಿ ಸೀಜ್
ಧಾರವಾಡ: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಅಣ್ಣಿಗೇರಿ ಬಳಿ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿ ವಿನಾಯಕ್ ಹರಿನಶಿಕಾರಿ ಎಂಬುವನನ್ನು ಬಂಧಿಸಿದ್ದಾರೆ. ಸರ್ಕಾರಿ ಜಮೀನಿನಲ್ಲಿಯೇ ಕಳ್ಳಭಟ್ಟಿ ದಂಧೆ ನಡೆಯುತ್ತಿದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಮೂವರು ಪರಾರಿಯಾಗಿದ್ದಾರೆ. ಈ ಹಿಂದೆ ಮಾಹಿತಿ ಇದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದರು. ಇದೀಗ ಅಣ್ಣಿಗೇರಿ ಠಾಣೆ ಪೊಲೀಸರೇ ರೇಡ್ ಮಾಡಿ ನೆಲದಲ್ಲಿ ಕಳ್ಳಭಟ್ಟಿ ಸಂಗ್ರಹಿಸಿದ್ದ ಬ್ಯಾರಲ್ಗಳನ್ನ ವಶಕ್ಕೆ ಪಡೆದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ: ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಅಣ್ಣಿಗೇರಿ ಬಳಿ ಕಳ್ಳಭಟ್ಟಿ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿ ವಿನಾಯಕ್ ಹರಿನಶಿಕಾರಿ ಎಂಬುವನನ್ನು ಬಂಧಿಸಿದ್ದಾರೆ. ಸರ್ಕಾರಿ ಜಮೀನಿನಲ್ಲಿಯೇ ಕಳ್ಳಭಟ್ಟಿ ದಂಧೆ ನಡೆಯುತ್ತಿದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಮೂವರು ಪರಾರಿಯಾಗಿದ್ದಾರೆ.
ಈ ಹಿಂದೆ ಮಾಹಿತಿ ಇದ್ದರೂ ಅಬಕಾರಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಹಿಸಿದ್ದರು. ಇದೀಗ ಅಣ್ಣಿಗೇರಿ ಠಾಣೆ ಪೊಲೀಸರೇ ರೇಡ್ ಮಾಡಿ ನೆಲದಲ್ಲಿ ಕಳ್ಳಭಟ್ಟಿ ಸಂಗ್ರಹಿಸಿದ್ದ ಬ್ಯಾರಲ್ಗಳನ್ನ ವಶಕ್ಕೆ ಪಡೆದಿದ್ದಾರೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.