ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ; ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ

ಇತ್ತೀಚೆಗೆ ಅವಳಿನಗರದಲ್ಲಿ ಗಾಂಜಾ ವಾಸನೆ ಜೋರಾಗಿದ್ದು, ನಶೆಯಲ್ಲಿ ಅಪರಾಧ ಕೃತ್ಯ ಎಸಗಲಾಗುತ್ತಿರುವ ಕುರಿತು ಸಾರ್ವಜನಿಕರು ಕಿಡಿಕಾರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು(Bendigeri Police) ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ; ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ
ಹುಬ್ಬಳ್ಳಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಐವರ ಬಂಧನ
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 28, 2024 | 8:30 PM

ಹುಬ್ಬಳ್ಳಿ, ಜೂ.28:  ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು(Bendigeri Police) ಭರ್ಜರಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿ(Hubli)ಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್​, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಅರೆಸ್ಟ್ ಆಗಿದ್ದು, ಬಂಧಿತರಿಂದ ಮೂರು ಲಕ್ಷ ಮೌಲ್ಯದ ಮೂರು ಕೆಜಿ ಗಾಂಜಾ ಹಾಗೂ ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು

ಅಂತರಾಜ್ಯದಿಂದ ಗಾಂಜಾ ತಂದು ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಇನ್ಸೆಕ್ಟರ್ ಅಲಿಶೇಕ್, ಪಿಎಸ್‌ಐ ಶರಣ ದೇಸಾಯಿ ಹಾಗೂ ತಂಡದವರು, ದಕ್ಷಿಣ ವಿಭಾಗದ ಎಸಿಪಿ ಚಿಕ್ಕಮಠ ಮಾರ್ಗದರ್ಶನದಲ್ಲಿ ದಾಳಿ ನಡೆಸಿ, ನಗರದ ಮಂಟೂರ ರಸ್ತೆಯ ಬಳಿಯ ರೈಲ್ವೆ ಗೇಟ್ ಬಳಿ ಬಂಧಿಸಿದ್ದಾರೆ. ಐದು ಜನ ಆರೋಪಿಗಳ ಮೇಲೆ NDPS ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ರಿಮ್ಯಾಂಡ್ ಹೋಮ್ ಹಾಗೂ ಇನ್ನುಳಿದ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ರಾಡ್​ನಿಂದ ಹೊಡೆದು 17 ವರ್ಷದ ಯುವಕನ ಹತ್ಯೆ; ಕೊಲೆ ಹಿಂದೆ ಪ್ರೀತಿ, ಗಾಂಜಾ ಕರಿನೆರಳು

ಇತ್ತೀಚೆಗೆ ಅವಳಿನಗರದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ ಗಾಂಜಾ ಸೇವನೆ ಮಾಡಿ ಹತ್ಯೆ ಮಾಡಲಾಗಿದೆ ಎಂಬ ವಿಷಯ ತಿಳಿದು ಬಂದಿತ್ತು. ಅದರಂತೆ ಹುಬ್ಬಳ್ಳಿಯಲ್ಲಿ ಗಾಂಜಾ ವಾಸನೆ ಜೋರಾಗಿದ್ದು, ನಶೆಯಲ್ಲಿ ಅಪರಾಧ ಕೃತ್ಯ ಎಸಗಲಾಗುತ್ತಿರುವ ಕುರಿತು ಸಾರ್ವಜನಿಕರು ಕಿಡಿಕಾರಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಹುಬ್ಬಳ್ಳಿ ಪೊಲೀಸರು, ಇದೀಗ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us