AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟಕ ಅಂಶ ಬಾಯ್ಬಿಟ್ಟ ಬಂಧಿತ ಆರೋಪಿ: ಉಗ್ರರ ಚಟುವಟಿಕೆಗಳಿಗೆ ಪ್ರಶಸ್ತ ತಾಣವಾಯಿತೇ ಹುಬ್ಬಳ್ಳಿ-ಧಾರವಾಡ?

ದೆಹಲಿಯಲ್ಲಿ ನಿನ್ನೆ ಬಂಧಿತರಾಗಿರುವ ಮೂವರು ಉಗ್ರರ ಪೈಕಿ ಓರ್ವ ಹುಬ್ಬಳ್ಳಿ-ಧಾರವಾಡದಲ್ಲಿ ಓಡಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಜೊತೆಗೆ ಬಂದೂಕು ಬಳಕೆ, ಬಾಂಬ್ ಸ್ಫೋಟದ ತರಬೇತಿಗೆ ಪ್ರಶಸ್ತ ತಾಣ ಎಂಬುವುದು ಬಂಧಿತ ಶಹನವಾಜ್‌ನಿಂದ ಸದ್ಯ ವಿಷಯ ಬಯಲಾಗಿದೆ. ಆ ಮೂಲಕ ಹುಬ್ಬಳ್ಳಿ-ಧಾರವಾಡ, ಪಶ್ಚಿಮಘಟ್ಟ ಪ್ರದೇಶ ಉಗ್ರರ ತಾಣವಾಗಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ಸ್ಫೋಟಕ ಅಂಶ ಬಾಯ್ಬಿಟ್ಟ ಬಂಧಿತ ಆರೋಪಿ: ಉಗ್ರರ ಚಟುವಟಿಕೆಗಳಿಗೆ ಪ್ರಶಸ್ತ ತಾಣವಾಯಿತೇ ಹುಬ್ಬಳ್ಳಿ-ಧಾರವಾಡ?
ಬಂಧಿತ ಉಗ್ರರು
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Oct 04, 2023 | 9:12 AM

Share

ಧಾರವಾಡ, ಅಕ್ಟೋಬರ್​ 04: ಶಾಂತಿಯ ತೋಟ ಎನ್ನುವ ಹೆಸರು ಹೊಂದಿರುವ ಜಿಲ್ಲೆಯಲ್ಲಿ ಕೆಲ ವರ್ಷಗಳ ಹಿಂದೆ ಸಿಮಿ ಉಗ್ರ ಸಂಘಟನೆ ಕಾರ್ಯಕರ್ತರು ಬಂಧಿತರಾಗಿದ್ದರು. ಅದಾದ ಬಳಿಕ ಐಸಿಸ್ ಉಗ್ರನೊಬ್ಬ ಧಾರವಾಡ (Dharwad) ದಲ್ಲಿ ಆರು ತಿಂಗಳ ಕಾಲ ನೆಲಸಿದ್ದ ಎನ್ನುವುದು ಕೂಡ ಬಹಿರಂಗವಾಗಿತ್ತು. ಇದೀಗ ಅಂಥದ್ದೇ ಮತ್ತೊಂದು ಪ್ರಕರಣ ಬಯಲಿಗೆ ಬಂದಿದೆ. ದೆಹಲಿಯಲ್ಲಿ ನಿನ್ನೆ ಬಂಧಿತರಾಗಿರುವ ಮೂವರು ಉಗ್ರರ ಪೈಕಿ ಓರ್ವ ಹುಬ್ಬಳ್ಳಿ-ಧಾರವಾಡದಲ್ಲಿ ಓಡಾಡಿರುವ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಜೊತೆಗೆ ಬಂದೂಕು ಬಳಕೆ, ಬಾಂಬ್ ಸ್ಫೋಟದ ತರಬೇತಿಗೆ ಪ್ರಶಸ್ತ ತಾಣ ಎಂಬುವುದು ಬಂಧಿತ ಶಹನವಾಜ್‌ನಿಂದ ಸದ್ಯ ವಿಷಯ ಬಯಲಾಗಿದೆ.

ಈ ಮುಂಚೆಯೂ ನಡೆದಿವೆ ಹಲವು ಉಗ್ರರ ಪ್ರಕರಣಗಳು

ಈ ಮುಂಚೆಯೂ ಹಲವು ಉಗ್ರರ ಪ್ರಕರಣಗಳು ಜಿಲ್ಲೆಯಲ್ಲಿ ನಡೆದಿವೆ. 2008ರಲ್ಲಿ ಸಿಮಿ ಸಂಘಟನೆ ಶಂಕಿತರು ಬಂಧಿತರಾಗಿದ್ದರು. ಸಿಮಿ ಉಗ್ರರೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿತ್ತು. ಜೊತೆಗೆ ಜಿಲ್ಲೆಯ ಕಲಘಟಗಿಯಲ್ಲಿ ಉಗ್ರರು ತರಬೇತಿ ಪಡೆಯುತ್ತಿದ್ದರು. ಆ ಮೂಲಕ ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ಭಯೋತ್ಪಾದನಾ ನಿಗ್ರಹ ಪೊಲೀಸರಿಂದ 17 ಜನರ ಬಂಧನ ಮಾಡಲಾಗಿತ್ತು. ಈ ವೇಳೆ ಸ್ಫೋಟಕ ವಸ್ತುಗಳು ಮತ್ತು ಜಿಹಾದಿ ಸಾಹಿತ್ಯ ವಶಕ್ಕೆ ಪಡೆಯಲಾಗಿತ್ತು. ಸೂಕ್ತ ಸಾಕ್ಷಾಧಾರ ಇಲ್ಲದ ಹಿನ್ನೆಲೆ 2015ರಲ್ಲಿ ಆರೋಪ‌ಮುಕ್ತರಾಗಿದ್ದರು.

ಇದನ್ನೂ ಓದಿ: ಬಂಧಿತ ಉಗ್ರನಿಗಿದೆ ಧಾರವಾಡದ ನಂಟು, ದೆಹಲಿ ಪೊಲೀಸರ ಮಾಹಿತಿಯಿಂದ ಜನರಲ್ಲಿ ಆತಂಕ

ಇದೀಗ ದೆಹಲಿ ಪೊಲೀಸರಿಗೆ ಮೂವರು ಶಂಕಿತ ಉಗ್ರರು ಸೆರೆ ಸಿಕ್ಕಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೇರಿ ಪಶ್ಚಿಮಘಟ್ಟದ ಕಾಡನ್ನು ಉಗ್ರರು ತರಬೇತಿಗೆ ಬಳಸಿಕೊಳ್ಳುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ. ಎನ್ಐಎ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿದ್ದ ಶಂಕಿತ ಐಸಿಸ್‌ ಉಗ್ರ ಮೊಹಮ್ಮದ್ ಶಹನವಾಜ್​ ಈ ಭಾಗದಲ್ಲಿ ತರಬೇತಿ ಕ್ಯಾಂಪ್ ಮಾಡಲು ಓಡಾಡಿರುವ ಮಾಹಿತಿ ನೀಡಲಾಗಿದೆ. ಆ ಮೂಲಕ ಇದೀಗ ಮತ್ತೆ ಬಂಧಿತ ಉಗ್ರರಿಂದ ಅವಳಿ ನಗರದ ಬಗ್ಗೆ ಪ್ರಸ್ತಾಪ ಮಾಡಲಾಗಿದೆ.

ಇದನ್ನೂ ಓದಿ: ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ -ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಸಮಾಧಾನ

ಈ ಘಟನೆಯ ಬಳಿಕ ಜಿಲ್ಲೆಯಲ್ಲಿ ಸಾಕಷ್ಟು ಆತಂಕ ಸೃಷ್ಟಿಯಾಗಿದೆ. ಏಕೆಂದರೆ ಮೊದಲಿನಿಂದಲೂ ಧಾರವಾಡ ಶಾಂತಿಯ ಜಿಲ್ಲೆ. ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಉಗ್ರರು ಇಲ್ಲಿಯೇ ನೆಲೆಸಿ, ಉಗ್ರ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ಈ ಪ್ರಕರಣದ ಬಳಿಕ ಧಾರವಾಡದಲ್ಲಿರುವ ಸ್ಲೀಪಿಂಗ್ ಸೆಲ್​ಗಳ ಬಗ್ಗೆಯೂ ಅನುಮಾನ ಶುರುವಾಗಿದೆ. ಅಂಥ ಸ್ಲೀಪಿಂಗ್ ಸೆಲ್​ಗಳನ್ನು ಪತ್ತೆ ಹಚ್ಚಿ, ಬಯಲಿಗೆ ತರಬೇಕಾದ ಜವಾಬ್ದಾರಿ ಇದೀಗ ಪೊಲೀಸರ ಮೇಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ದೊಡ್ಮನೆಯಲ್ಲಿ ಅದ್ದೂರಿ ಸ್ವಾಗತ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ