AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಇನ್ನಿಲ್ಲ, ದೇಶದಲ್ಲಿ ಎಲ್ಲ ರಾಜ್ಯಗಳಿಗೂ ಒಂದೇ ಕಾನೂನು – ಸಚಿವ ಜೋಶಿ ಸಂತಸ

ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಕಾನೂನನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ರದ್ದುಗೊಳಿಸಿದ್ದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಕೇಂದ್ರದ ಮಹತ್ವದ ನಿರ್ಧಾರಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ -ಸಚಿವ ಪ್ರಲ್ಹಾದ್​ ಜೋಶಿ

ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಇನ್ನಿಲ್ಲ, ದೇಶದಲ್ಲಿ ಎಲ್ಲ ರಾಜ್ಯಗಳಿಗೂ ಒಂದೇ ಕಾನೂನು - ಸಚಿವ ಜೋಶಿ ಸಂತಸ
ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಇನ್ನಿಲ್ಲ - ಸಚಿವ ಜೋಷಿ ಸಂತಸ
ಸಾಧು ಶ್ರೀನಾಥ್​
|

Updated on:Dec 11, 2023 | 4:52 PM

Share

ನವ ದೆಹಲಿ, ಡಿಸೆಂಬರ್ 11: ಭಾರತದ ಸುಪ್ರೀಂ ಕೋರ್ಟ್ (Supreme Court) 370 ನೇ ವಿಧಿಯನ್ನು ರದ್ದುಗೊಳಿಸಿ ಸೋಮವಾರದಂದು ನೀಡಿರುವ ದೂರಗಾಮಿ, ಮಹತ್ವದ ತೀರ್ಪಿನ ಬಗ್ಗೆ ಕೇಂದ್ರ ಸಂದದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಜಮ್ಮು ಕಾಶ್ಮೀರಕ್ಕೆ (Jammu and Kashmir) ಕಳಂಕವಾಗಿದ್ದ ಆರ್ಟಿಕಲ್ 370 (Article 370) ಕಾನೂನನ್ನು ಪ್ರಧಾನಮಂತ್ರಿ @narendramodi ನೇತೃತ್ವದ ಕೇಂದ್ರ ಸರಕಾರ ರದ್ದುಗೊಳಿಸಿದ್ದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಕೇಂದ್ರ ಸರಕಾರದ ಮಹತ್ವದ ನಿರ್ಧಾರಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ದೇಶದೊಳಗೆ ಎಲ್ಲಾ ರಾಜ್ಯಗಳಿಗೂ ಒಂದೇ ಕಾನೂನು ಇರಬೇಕೆಂಬ ನಮ್ಮ ನಿಲುವಿಗೆ ನ್ಯಾಯಾಲಯ ಸಮ್ಮತಿ ಸೂಚಿಸಿದ್ದು ಸಂತಸದ ವಿಷಯ ಎಂದು ಕೇಂದ್ರ ಸಂದದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಸಂತಸ ವ್ಯಕ್ತಪಡಿಸಿದ್ದಾರೆ.

ಆಗಸ್ಟ್ 5, 2019 ರಂದು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ. ಮುಂದಿನ ವರ್ಷ ಸೆಪ್ಟೆಂಬರ್ 30 ರೊಳಗೆ ಕೇಂದ್ರಾಡಳಿತ ಪ್ರದೇಶದ ಅಸೆಂಬ್ಲಿಗೆ ಚುನಾವಣೆ ನಡೆಸುವ ಅಗತ್ಯವನ್ನು ನ್ಯಾಯಾಲಯ ಒತ್ತಿಹೇಳಿದೆ. ಮತ್ತು ರಾಜ್ಯ ಸ್ಥಾನಮಾನವನ್ನು ಶೀಘ್ರವಾಗಿ ಮರುಸ್ಥಾಪಿಸುವಂತೆ ನಿರ್ದೇಶಿಸಿದೆ.

ಆರ್ಟಿಕಲ್ 370 – ಸಚಿವ ಜೋಶಿ ಟ್ವೀಟ್ ಸಾರಾಂಶ ಹೀಗಿದೆ:

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ಪ್ರಲ್ಹಾದ್​ ಜೋಶಿ,  ಜಮ್ಮು ಕಾಶ್ಮೀರಕ್ಕೆ ಕಳಂಕವಾಗಿದ್ದ ಆರ್ಟಿಕಲ್ 370 ಕಾನೂನನ್ನು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ರದ್ದುಗೊಳಿಸಿದ್ದ ನಿರ್ಧಾರವನ್ನು ಸರ್ವೋಚ್ಚ ನ್ಯಾಯಾಲಯ ಎತ್ತಿ ಹಿಡಿದಿದ್ದು, ಕೇಂದ್ರದ ಮಹತ್ವದ ನಿರ್ಧಾರಕ್ಕೆ ನ್ಯಾಯಾಲಯದಲ್ಲಿ ಜಯ ಸಿಕ್ಕಿದೆ. ದೇಶದೊಳಗೆ ಎಲ್ಲಾ ರಾಜ್ಯಗಳಿಗೂ ಒಂದೇ ಕಾನೂನು ಇರಬೇಕೆಂಬ ನಮ್ಮ ನಿಲುವಿಗೆ ನ್ಯಾಯಾಲಯ ಸಮ್ಮತಿ ಸೂಚಿಸಿದ್ದು ಸಂತಸದ ವಿಷಯ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Mon, 11 December 23

Follow Us
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ