ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣ; ಓರ್ವ ಶ್ರೀರಾಮ ಸೇನೆ ಕಾರ್ಯಕರ್ತನನ್ನು ಬಂಧಿಸಿದ ಧಾರವಾಡ ಪೊಲೀಸ್

ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಮೇಲೆ  ದುಷ್ಕರ್ಮಿಗಳು ದಾಳಿಮಾಡಿದ್ದರು. ಯುವ ಕಾಂಗ್ರೆಸ್‌ನಿಂದ ಹಾನಿಗೀಡಾದ ಕಲ್ಲಂಗಡಿ ಹಣ್ಣಿನ ಅಂಗಡಿಕಾರ ವ್ಯಾಪಾರಿ ನಬಿಸಾಬ್‌ಗೆ 25 ಸಾವಿರ ರೂ. ನೆರವು ನೀಡಲಾಗಿದೆ.

ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣ; ಓರ್ವ ಶ್ರೀರಾಮ ಸೇನೆ ಕಾರ್ಯಕರ್ತನನ್ನು ಬಂಧಿಸಿದ ಧಾರವಾಡ ಪೊಲೀಸ್
ಶ್ರೀರಾಮ ಸೇನೆಯ ಕಾರ್ಯಕರ್ತ ಮಹಾಲಿಂಗ ಐಗಳಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Apr 10, 2022 | 7:18 PM

ಧಾರವಾಡ: ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ (Srirama Sena) ಯ ಓರ್ವ ಕಾರ್ಯಕರ್ತನನ್ನು ಧಾರವಾಡ ಗ್ರಾಮೀಣ ಪೊಲೀಸರು ಮಹಾಲಿಂಗ ಐಗಳಿಯನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ನುಗ್ಗಿಕೇರಿ ಆಂಜನೇಯ ದೇವಸ್ಥಾನದ ಬಳಿ ನಿನ್ನೆ ದೌರ್ಜನ್ಯ ನಡೆದಿದ್ದು, ವ್ಯಾಪಾರಿ ನಬಿಸಾಬ್ ದೂರಿನ ಮೇರೆಗೆ ಮಹಾಲಿಂಗ ವಶಕ್ಕೆ ಪಡೆಯಲಾಗಿದೆ. ಕಲ್ಲಂಗಡಿ ಹಣ್ಣಿನ ವ್ಯಾಪಾರಿ ಮೇಲೆ  ದುಷ್ಕರ್ಮಿಗಳು ದಾಳಿಮಾಡಿದ್ದರು. ಯುವ ಕಾಂಗ್ರೆಸ್‌ನಿಂದ ಹಾನಿಗೀಡಾದ ಕಲ್ಲಂಗಡಿ ಹಣ್ಣಿನ ಅಂಗಡಿಕಾರ ವ್ಯಾಪಾರಿ ನಬಿಸಾಬ್‌ಗೆ 25 ಸಾವಿರ ರೂ. ನೆರವು ನೀಡಲಾಗಿದೆ. ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಶ್ರೀನಿವಾಸ, ರಾಜ್ಯಾಧ್ಯಕ್ಷ ಹ್ಯಾರೀಸ್ ನಲಪಾಡ್‌ರಿಂದ ಹಣ ವಿತರಣೆ ಮಾಡಲಾಗಿದೆ. ಬಳಿಕ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ ಹೇಳಿಕೆ ನೀಡಿದ್ದು, ಮೊದಲಿಗೆ ಹಿಜಾಬ್ ಗಲಾಟೆ ಆಯ್ತು. ಅದು ಕೋರ್ಟ್‌ಗೆ ಹೋಯ್ತು. ಬಳಿಕ ಹಿಂದೂಯೇತರ ವ್ಯಾಪಾರ ವಿಷಯ ಬಂದಿದೆ. ಹಣ್ಣಿನ ವ್ಯಾಪಾರಿಗಳ ಮೇಲೆ ಬಂದಿದ್ದಾರೆ. ಮಾವು, ಕಲ್ಲಂಗಡಿ ಹಣ್ಣು ಯಾವುದೇ ಇರಲಿ ಅದು ನೇರವಾಗಿ ರೈತರ ಮೇಲೆ ಮಾಡುವ ದಾಳಿಯಾಗಿದೆ. ಸರ್ಕಾರ ಇದಕ್ಕೆಲ್ಲ‌ ಕುಮ್ಮಕ್ಕು ಕೊಡುತ್ತಿದೆ. ಇವರ ಪಕ್ಷದ ನಾಯಕರು ಅದೇ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಇದರಿಂದ ನೇರವಾಗಿ ರೈತರಿಗೆ ಹೊಡೆತ ಬೀಳುತ್ತದೆ. ಇದನ್ನು ಸರ್ಕಾರ ಮತ್ತು ವಿವಾದ ಮಾಡುವವರು ಗಮನಿಸಬೇಕು ಎಂದು ಹೇಳಿದ್ದಾರೆ.

ಇದು ಹೇಯ ಮತ್ತು ಹೀನ ಕೃತ್ಯ. ಬಡ ಮು‌ಸ್ಲಿಮನೊಬ್ಬನ ಅಂಗಡಿ ನಾಶಪಡಿಸಿ, ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿದ ಶ್ರೀರಾಮಸೇನೆಯವರು ಸಾಧಿಸಿದ್ದೇನು? ಅನ್ನಕ್ಕೆ ಕಲ್ಲು ಹಾಕುವುದು ಯಾವ ಧರ್ಮ? ಶ್ರೀರಾಮಸೇನೆಯವರು ನಡೆಸಿದ ದಾಂದಲೆ ಭಯೋತ್ಪಾದನೆಗೆ ಸಮ. ಶ್ರೀರಾಮನ ತತ್ವಾದರ್ಶಗಳನ್ನು ನಿಜವಾಗಿ ಪಾಲಿಸುವವರು ಇಂತಹ ಕಿರಾತಕ ಕೆಲಸ ಮಾಡುವುದಿಲ್ಲ.‌ ಶ್ರೀರಾಮಸೇನೆಯ ಕೃತ್ಯ ರಾಮನ ಹೆಸರಿಗೆ ಕಳಂಕ ತರುವ ಯತ್ನ. ದಾಂದಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲೇಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ:

‘ಹೆಚ್ಚೆಚ್ಚು ಹೆಮ್ಮೆ ಪಡುವಂತೆ ಮಾಡುತ್ತಿದ್ದೀಯ’; ಮಗಳು ಸಿತಾರಾ ಬಗ್ಗೆ ಮಹೇಶ್​ ಬಾಬು ವಿಶೇಷ ಮಾತು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಮಲ್ಲಿಕಾರ್ಜುನ ಶ್ರೀಗಳ ಕಾರು; ಸ್ಥಳದಲ್ಲೇ ಚಾಲಕ ದುರ್ಮರಣ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?