ಧಾರವಾಡ: ಯುವಕನ ಮರ್ಮಾಂಗವನ್ನು ಕತ್ತರಿಸಿ ಮತಾಂತರಕ್ಕೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ. ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಅವರ ಮರ್ಮಾಂಗವನ್ನು ಕತ್ತರಿಸಿ ಮತಾಂತರ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಂಡ್ಯದ ಅತ್ತಾವರ ರೆಹಮಾನ್, ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ವಿರುದ್ಧ ದೂರು ದಾಖಲಾಗಿದೆ.
Published On - 11:12 pm, Sat, 24 September 22