AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ, ಧಾರವಾಡದಲ್ಲಿ ಭುಗಿಲೆದ್ದ ಆಕ್ರೋಶ

ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ಬೈಕ್‌ನಲ್ಲಿ ಬರುವಾಗ ದಾರಿಯುದ್ದಕ್ಕೂ ಮೈಮುಟ್ಟಿ ಅಸಭ್ಯ ವರ್ತಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾನೆ. ಮತ್ತೊಂದೆಡೆ ಧಾರವಾಡದಲ್ಲೂ ಸಹ ಜಿಮ್ ಟ್ರೈನರ್ ಓರ್ವ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅಸಭ್ಯವಾಗಿ ವರ್ತಿಸಿದ ಆರೋಪ ಕೇಳಿಬಂದಿದೆ. ಈ ಪ್ರತ್ಯೇಕ ಘಟನೆ ವಿವರ ಈ ಕೆಳಗಿನಂತಿದೆ.

ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಜಿಮ್ ಟ್ರೈನರ್ ಅನುಚಿತ ವರ್ತನೆ, ಧಾರವಾಡದಲ್ಲಿ ಭುಗಿಲೆದ್ದ ಆಕ್ರೋಶ
ಜಿಮ್ ಟ್ರೈನರ್ ಸಾಬಿರ್
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Mar 30, 2026 | 10:37 PM

Share

ಧಾರವಾಡ, (ಮಾರ್ಚ್ 30): ಹಿಂದೂ ಯುವತಿಯರನ್ನು (hindu Young Women) ಟಾರ್ಗೆಟ್ ಮಾಡಿ ಅನುಚಿತವಾಗಿ ವರ್ತಿಸಿದ ಆರೋಪ ಮುಸ್ಲಿಂ ಜಿಮ್ ಟ್ರೈನರ್ ವಿರುದ್ಧ ಕೇಳಿಬಂದಿದೆ. ಧಾರವಾಡದ (Dharwad)  ನಗರದ ಮರಾಠಾ ಕಾಲನಿಯಲ್ಲಿರುವ ಫಿಟ್ನೆಸ್ ಫಸ್ಟ್ ಜಿಮ್​ ಟ್ರೈನರ್ ಸಾಬಿರ್, ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತ ವರ್ತನೆ ಮಾಡುತ್ತಾನೆಂದು ಆರೋಪಿಸಲಾಗಿದೆ. ವರ್ಕೌಟ್ ಮಾಡಲು ಬರುವ ಹಿಂದೂ ಯುವತಿಯರಿಗೆ ಟ್ರೈನಿಂಗ್ ವೇಳೆ ಬೇಕಂತಲೇ ಮೈಮುಟ್ಟಿ ಅನುಚಿತವಾಗಿ ವರ್ತಿಸುವುದಲ್ಲದೇ ಯುವತಿಯರ ಬಾತ್ ರೂಮ್​ಗೆ ಹೋಗಿ ಬರುತ್ತಿದ್ದ ಎಂದು ಆರೋಪಿಸಿದ್ದು, ಈ ಸಂಬಂಧ ಬಜರಂಗದಳ ಕಾರ್ಯಕರ್ತರು ಜಿಮ್​ಗೆ ಬೀಗ ಹಾಕಿ ಜಿಮ್ ಟ್ರೈನರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಹೀಗೆ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರೊಂದಿಗೆ ಅಸಭ್ಯವಾಗಿ ವರ್ತನೆ ಮಾಡಿದ ಆರೋಪ ಸಂಬಂಧ ಈ ಹಿಂದೆಯೇ ಟ್ರೈನರ್ ಸಾಬಿರ್​ಗೆ ಬಜರಂಗದಳ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದರು. ಆದರೂ ವರ್ತನೆ ಸರಿಪಡಿಸಿಕೊಳ್ಳದ ಸಾಬಿರ್ ವಿರುದ್ಧ ಮತ್ತೆ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಇದೀಗ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅನುಚಿತ ವರ್ತನೆ ಮಾಡುವ ಜಿಮ್ ನಲ್ಲಿ ಟ್ರೈನರ್ ಸಾಬಿರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮದ್ವೆಯಾದ ಒಂದೇ ತಿಂಗಳಲ್ಲಿ ವಿರಸ:ಮೇಕಪ್ ಆರ್ಟಿಸ್ಟ್​​ನ ವಿವಾಹವಾಗಿದ್ದ ಉದ್ಯಮಿ ದುರಂತ ಸಾವು

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಪ ನಗರ ಠಾಣೆ ಪೊಲೀಸರು, ದೌಡಾಯಿಸಿ ಪ್ರತಿಭಟನೆಕಾರರ ಮನವೊಲಿಸಲು ಯತ್ನಿಸಿದ್ದಾರೆ. ಆದರೂ ಪಟ್ಟು ಬಿಡಿದ ಪ್ರತಿಭಟನೆಕಾರರು, ಸ್ಥಳಕ್ಕೆ ಸಾಬಿರ್ ಕರೆಸುವಂತೆ ಒತ್ತಾಯಿಸಿದ್ದಾರೆ.

ರ್ಯಾಪಿಡೋ ಚಾಲಕನಿಂದ ಯುವತಿಗೆ ಕಿರುಕುಳ

ಬೆಂಗಳೂರು: ಇನ್ನೊಂದೆಡೆ ರ್ಯಾಪಿಡೋ ಚಾಲಕನೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿಯೋರ್ವಳು ಬಿಟಿಎಂ ಲೇಔಟ್‌ನಿಂದ ಇಂದಿರಾನಗರಕ್ಕೆ ಬೈಕ್ ಬುಕ್‌ ಮಾಡಿದ್ದಳು. ಬಳಿಕ ಬೈಕ್‌ನಲ್ಲಿ ಬರುವಾಗ ಚಾಲಕ ಮೊಹಮ್ಮದ್ ಖಾಜಾ, ದಾರಿಯುದ್ದಕ್ಕೂ ಮೈಮುಟ್ಟಿ ಅಸಭ್ಯ ವರ್ತಿಸಿದ್ದಾನೆಂದು ಯುವತಿ ಆರೋಪಿಸಿದ್ದು, ಈ ಸಂಬಂಧ ಯುವತಿ ದೂರು ನೀಡಿದ್ದಾಳೆ. ಇದರ ಮೇರೆಗೆ ಇದೀಗ ಇಂದಿರಾನಗರ ಠಾಣೆ ಪೊಲೀಸರು ರ್ಯಾಪಿಡೋ ಚಾಲಕ ಮೊಹಮ್ಮದ್ ಖಾಜಾ ಎನ್ನುವಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:34 pm, Mon, 30 March 26

Follow Us