ಹುಬ್ಬಳ್ಳಿ, ಜನವರಿ 14: ಹಾವೇರಿ (Haveri) ಜಿಲ್ಲೆ ಹಾನಗಲ್ನಲ್ಲಿ (Hangal) ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಮುಚ್ಚಿ ಹಾಕುವ ಪೊಲೀಸರ ಪ್ರಯತ್ನ ವಿಫಲವಾಗಿದೆ. ಸಂತ್ರಸ್ತೆಗೆ ಹಣ ಕೊಟ್ಟು ಪ್ರಕರಣವನ್ನು ಹಿಂಪಡೆಯುವಂತೆ ಹೇಳಿದ್ದರು. ಇದೀಗ ಸಂತ್ರಸ್ತೆ ಪ್ರಕರಣ ವಾಪಸ್ ತೆಗೆದುಕೊಳ್ಳುವಂತೆ ಹೇಳಿದ್ದು ಬಹಿರಂಗವಾಗಿದೆ. ಪ್ರಕರಣವನ್ನು ಸ್ಥಳೀಯ ಪೊಲೀಸರು ಮುಚ್ಚಿ ಹಾಕುತ್ತಾರೆ. ಪ್ರಕರಣದ ತನಿಖೆಗೆ SIT ರಚನೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಹಾವೇರಿಗೆ ಬಂದಾಗ ಎಸ್ಐಟಿಗೆ ವಹಿಸುವ ನಿರೀಕ್ಷೆ ಇದೆ. ಪೊಲೀಸರಿಂದ ನಾವೇನು ನಿರೀಕ್ಷೆ ಮಾಡಲು ಆಗಲ್ಲ. ತನಿಖೆ ನೆಪದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.
ಇದನ್ನೂ ಓದಿ: ಹಾನಗಲ್ ಗ್ಯಾಂಗ್ ರೇಪ್ ಕೇಸ್ SIT ತನಿಕೆಗೆ ಬೊಮ್ಮಾಯಿ ಆಗ್ರಹ
ಇನ್ನೂ ಜನವರಿ 22ರ ನಂತರ ರಾಮಮಂದಿರಕ್ಕೆ ಹೋಗುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ರಾಮಮಂದಿರ ವಿಚಾರವಾಗಿ ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ. ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದೆ. ರಾಜಕೀಯಕ್ಕಾಗಿ ಅವರ ಹೆಸರಲ್ಲಿರುವ ರಾಮನನ್ನೇ ಕಡೆಗಣಿಸಿದರು. ಅಧಿಕಾರದ ರಾಜಕಾರಣಕ್ಕಾಗಿ ರಾಮನನ್ನು ಕಡೆಗಣನೆ ಮಾಡಿದ್ದಾರೆ. ತಡವಾದರೂ ಸಿದ್ದರಾಮಯ್ಯ ಅವರಿಗೆ ಜ್ಞಾನೋದಯ ಆಗಿದೆ. ಜನವರಿ 22ರ ನಂತರ ನಾನ ಹೋಗುತ್ತೇನೆ ಅಂತಾರೆ, ಮತ್ತೆ ಇಲ್ಲ ಅಂತಾರೆ. ಅವರ ಆತ್ಮಸಾಕ್ಷಿ ಅಯೋಧ್ಯೆಗೆ ಹೋಗಬೇಕು ಅಂತಿದೆ. ಆದರೆ ವರಿಷ್ಠರು ಬೇಡಾ ಅಂತಾರೆ. ಹೀಗಾಗಿ ಸಿದ್ದರಾಮಯ್ಯ ಗೊಂದಲದಲ್ಲಿದಾರೆ ಎಂದರು.
ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಮತ್ತಿಬ್ಬರು ಆರೋಪಿಗಳನ್ನು ಹಾನಗಲ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಇದುವರೆಗೆ 6 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ