ದೇಶ ಅಭಿವೃದ್ಧಿಯಾಗಬೇಕಾದರೆ ಶಾಂತಿ ಮುಖ್ಯ: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತು

ಆನ್ ಲೈನ್ ಗೇಮ್​ನಿಂದ ಯುವಕರು ಹಾಳಾಗುತ್ತಿದ್ದರು. ಸಾಕಷ್ಟು ಜನ ಸಾಲಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಅದನ್ನ ಮಟ್ಡ ಹಾಕೋಕೆ ಹೊಸ ಕಾನೂನು ತಂದಿದ್ದೇವೆ.

ದೇಶ ಅಭಿವೃದ್ಧಿಯಾಗಬೇಕಾದರೆ ಶಾಂತಿ ಮುಖ್ಯ: ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತು
ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮನ ಸಲ್ಲಿಸಿದರು
Follow us
TV9 Web
| Updated By: sandhya thejappa

Updated on: Oct 21, 2021 | 10:10 AM

ಹುಬ್ಬಳ್ಳಿ: ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಭಾಗಿಯಾದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಸಿಎಂ, ದೇಶ ಅಭಿವೃದ್ಧಿಯಾಗಬೇಕಾದರೆ ಶಾಂತಿ ಮುಖ್ಯ. ಎಲ್ಲಿ ಶಾಂತಿ ಇರಲ್ಲವೋ ಅಲ್ಲಿ ಪ್ರಗತಿಯಾಗುವುದಿಲ್ಲ. ಕೆಲ ದೇಶಗಳು ಭಯೋತ್ಪಾದನೆಯಿಂದ ನಲುಗುತ್ತಿವೆ. ದೇಶದ ಭದ್ರತೆಗೆ ಪೊಲೀಸರು ಹೋರಾಡುತ್ತಿದ್ದಾರೆ. ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಪೊಲೀಸರಿಗೆ ನೀಡಬೇಕಾದ ಎಲ್ಲ ಸವಲತ್ತು ನೀಡುತ್ತೇವೆ. ಪೊಲೀಸರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಆನ್ ಲೈನ್ ಗೇಮ್​ನಿಂದ ಯುವಕರು ಹಾಳಾಗುತ್ತಿದ್ದರು. ಸಾಕಷ್ಟು ಜನ ಸಾಲಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರು. ಅದನ್ನ ಮಟ್ಡ ಹಾಕೋಕೆ ಹೊಸ ಕಾನೂನು ತಂದಿದ್ದೇವೆ. ಇನ್ಮುಂದೆ ಎಲ್ಲಾ ಕಾಲೇಜುಗಳಲ್ಲಿ ಮಹಿಳಾ ರಕ್ಷಣಾ ಎನ್ನುವ ಹೆಸರಿನಲ್ಲಿ ಹಿರಿಯ ನುರಿತ ಅಧಿಕಾರಿಗಳಿಂದ ಸೆಲ್ಪ್ ಡಿಫೆನ್ಸ್ ಬಗ್ಗೆ ತರಬೇತಿ ನೀಡುವ ಕಾರ್ಯ ಆರಂಭ ಮಾಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಲು ಸಲಹೆ ನೀಡುತ್ತಿದ್ದೇವೆ ಎಂದು ಮಾತನಾಡಿದ ಬೊಮ್ಮಾಯಿ, ಮಹಿಳೆಯರ ಸ್ವಯಂ ರಕ್ಷಣೆಗೆ ತರಬೇತಿ ನೀಡುತ್ತೇವೆ. ಉತ್ತರಾಖಂಡ್ ರಾಜ್ಯಕ್ಕೆ ಅಗತ್ಯ ನೆರವು ನೀಡುತ್ತೇವೆ. ಈಗಾಗಲೇ ತುಷಾರ್ ಗಿರಿನಾಥ್​ಗೆ ಜವಾಬ್ದಾರಿ ನೀಡಿದ್ದೇವೆ. ಕನ್ನಡಿಗರ ರಕ್ಷಣೆಗೆ ಎಲ್ಲ ರೀತಿಯ ವ್ಯವಸ್ಥೆ ಮಾಡುತ್ತೇವೆ ಅಂತ ಅಭಿಪ್ರಾಯಪಟ್ಟಿದ್ದಾರೆ.

ಉಪಚುನಾವಣೆ ವೇಳೆ ವೈಯಕ್ತಿಕವಾಗಿ ನಿಂದನೆ ಸರಿಯಲ್ಲ. ಜನ ಎಲ್ಲವನ್ನೂ ನೋಡುತ್ತಿದ್ದಾರೆ. ಜನರ ಮನಸ್ಸನ್ನು ಗೆಲ್ಲುವ ಮಾತುಗಳನ್ನ ಆಡಬೇಕು. ವಾದಕ್ಕೆ ಬಿದ್ದು ವಾದ ಮಾಡುವುದು ಸರಿಯಲ್ಲ. ಜನರ ಧ್ವನಿಯನ್ನ ಮಾಧ್ಯಮಗಳು ಬಿಂಬಿಸುತ್ತಿವೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕು ಅಂತ ಬೊಮ್ಮಾಯಿ ನುಡಿದರು.

ಇದನ್ನೂ ಓದಿ

ಆರ್​ಎಸ್​ಎಸ್ ಬಗ್ಗೆ ಇಡೀ ಜಗತ್ತಿಗೆ ಗೊತ್ತಿದೆ, ಮುಂದೆ‌ ಹೆಚ್​ಡಿ ಕುಮಾರಸ್ವಾಮಿ ಪಶ್ಚಾತ್ತಾಪ ಪಡುತ್ತಾರೆ -ಬಿ.ಎಸ್. ಯಡಿಯೂರಪ್ಪ

‘ಶಾರುಖ್​ ಮಗನ ಸಮಸ್ಯೆಗೆ ನಾನೇನು ಮಾಡಲಿ?’: ಮುಖಕ್ಕೆ ಹೊಡೆದಂತೆ ಮಾತಾಡಿದ್ರಾ ಅಜಯ್​ ದೇವಗನ್​?

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!