ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಸುಪ್ರೀಂಕೋರ್ಟ್ ಆದೇಶ ಆಧರಿಸಿ ಇಂದು ರಾತ್ರಿ 10 ಗಂಟೆಗೆ ಮತ್ತೆ ಅರ್ಜಿ ವಿಚಾರಣೆ
ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಆಧರಿಸಿ ವಿಚಾರಣೆಗೆ ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಇಂದು ರಾತ್ರಿ 10 ಗಂಟೆಗೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ.
ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್ ಆದೇಶ ಆಧರಿಸಿ ವಿಚಾರಣೆಗೆ ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ಇಂದು ರಾತ್ರಿ 10 ಗಂಟೆಗೆ ಮತ್ತೆ ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ.ಅಶೋಕ್.ಎಸ್ ಕಿಣಗಿಯವರ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನ ಮತ್ತು ಚಾಮರಾಜಪೇಟೆ ಈದ್ಗಾ ಮೈದಾನ ಸಂಬಂಧ ಇಂದು ತೀರ್ಪು ಹೊರ ಬಿದ್ದಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದ್ರೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರದ ಅಧಿಕಾರವನ್ನು ಮೇಯರ್ಗೆ ನೀಡಿ ಹೈ ಕೋರ್ಟ್ ಸುಮ್ಮನಾಗಿದೆ. ಹೀಗಾಗಿ ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು ಅರ್ಜಿದಾರರು ಮನವಿ ಮಾಡಿದ್ದಾರೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಅರ್ಜಿದಾರರು ಮತ್ತೆ ಹೈಕೋರ್ಟ್ ಮೊರೆಹೋಗಿದ್ದಾರೆ. ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ. ಹೀಗಾಗಿ ಇಂದು ರಾತ್ರಿ 10 ಗಂಟೆಗೆ ನ್ಯಾ.ಅಶೋಕ್.ಎಸ್ ಕಿಣಗಿಯವರ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:17 pm, Tue, 30 August 22