ಹುಬ್ಬಳ್ಳಿಗೆ ಮತ್ತೊಂದು ಗರಿ: ವಿಮಾನ ನಿಲ್ದಾಣದಲ್ಲಿ BCAS ಕಚೇರಿ​ ಆರಂಭ, ಏನಿದರ ವಿಶೇಷತೆ? ಇಲ್ಲಿದೆ ಓದಿ

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗರಿ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ ಆರಂಭವಾಗಿದೆ. ಈ ಬಿಸಿಎಎಸ್​ನ ವಿಶೇಷತೆ ಏನು? ಇದರಿಂದ ರಾಜ್ಯಕ್ಕೆ ಉಪಯೋಗವೇನು ಎಂಬ ಮಾಹಿತಿ ಇಲ್ಲಿದೆ.

ಹುಬ್ಬಳ್ಳಿಗೆ ಮತ್ತೊಂದು ಗರಿ: ವಿಮಾನ ನಿಲ್ದಾಣದಲ್ಲಿ BCAS ಕಚೇರಿ​ ಆರಂಭ, ಏನಿದರ ವಿಶೇಷತೆ? ಇಲ್ಲಿದೆ ಓದಿ
ಹುಬ್ಬಳ್ಳಿ ವಿಮಾನ ನಿಲ್ದಾಣ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on:Aug 23, 2024 | 5:34 PM

ಹುಬ್ಬಳ್ಳಿ, ಆಗಸ್ಟ್​​ 23: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ (Hubballi Airport) ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ (BCAS) ಆರಂಭವಾಗಿದೆ. ರಾಜ್ಯದ ವಿವಿಧ ವಿಮಾನ ನಿಲ್ದಾಣಗಳ ಭದ್ರತೆ ದೃಷ್ಟಿಯಿಂದ ಈ ಕಚೇರಿ ಆರಂಭಿಸಲಾಗಿದೆ. ಬೆಂಗಳೂರು, ಮಂಗಳೂರು ಹೊರತುಪಡಿಸಿ ಉಳಿದ ಎಲ್ಲ ವಿಮಾನ ನಿಲ್ದಾಣಗಳ ಭದ್ರತಾ ಕ್ರಮಗಳ ತೀರ್ಮಾನ ಹುಬ್ಬಳ್ಳಿ ಕಚೇರಿಯಲ್ಲಿ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಹಾಯಕ ಕಮಿಷನರ್ ಇದರ ಮುಖ್ಯಸ್ಥರಾಗಿರುತ್ತಾರೆ. ಇಂತಹ ಕಚೇರಿ ಹುಬ್ಬಳ್ಳಿಗೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು‌ ಎಂದರು.

ಏನಿದು ಬಿಸಿಎಎಸ್

ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (BCAS) ​ನಾಗರಿಕ ವಿಮಾನಯಾನ ಸಚಿವಾಲಯದ ಅಂಗವಾಗಿದೆ. ಈ ಬಿಸಿಎಸ್​​​ ದೇಶದ ಎಲ್ಲ ವಿಮಾನ ನಿಲ್ದಾಣಗಳ ಭದ್ರತೆಯನ್ನು ನೋಡಿಕೊಳ್ಳುತ್ತದೆ. ಈ ಬಿಸಿಎಎಸ್​ದ ಪ್ರಾದೇಶಿಕ ಕಚೇರಿ ಹುಬ್ಬಳ್ಳಿಯಲ್ಲಿ ಆರಂಭವಾಗಿದೆ. ಇದು ಬೆಂಗಳೂರು ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನಗಳನ್ನು ಹೊರತುಪಡಿಸಿ ಉಳಿದ ಎಲ್ಲ ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳ ಮೇಲ್ವಿಚಾರಣೆ ನಡೆಸುತ್ತದೆ. ಈ ಬಿಸಿಎಎಸ್​ಗೆ ನಿರ್ದೇಶಕರಾಗಿ ಡಿಜಿಪಿ ಶ್ರೇಣಿಯ ಪೊಲೀಸರನ್ನು ನೇಮಕ ಮಾಡಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದೇಶದಲ್ಲೇ ಮೊದಲ ಸೌರ ವಿದ್ಯುತ್ ಚಾಲಿತ ಇವಿ ಚಾರ್ಜಿಂಗ್ ಹಬ್

ಸಿದ್ಧರಾಮಯ್ಯ ಜಾತಿ ನೆರಳಿನಲ್ಲಿದ್ದಾರೆ: ಜೋಶಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್​ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಇದೆ, ಯಾಕೆ ಇನ್ನೂ ಕ್ರಮವಾಗಿಲ್ಲ? ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿದ್ದರೆ ತನಿಖೆಯಾಗಲಿ. ಸಿಎಂ ಸಿದ್ಧರಾಮಯ್ಯ ಜಾತಿ ನೆರಳಿನಲ್ಲಿದ್ದಾರೆ ಆದರೆ ರಾಜ್ಯಪಾಲರ ಜಾತಿ ಬಗ್ಗೆ ಮಾತನಾಡಿದರೆ ಮರು ಪ್ರಶ್ನೆ ಮಾಡತ್ತಾರೆ. ಬಿಆರ್ ಅಂಬೇಡ್ಕರ್ ಅವರನ್ನು​ ಅಪಮಾನ ಮಾಡಿದ, ಅವರನ್ನು ಚುನಾವಣೆಯಲ್ಲಿ ಸೋಲಿಸಿದ ಪಕ್ಷದಲ್ಲಿ ಸಿದ್ದರಾಮಯ್ಯ ಇದ್ದಾರೆ ಎಂದು ವಾಗ್ದಾಳಿ ಮಾಡಿದರು.

ಕಾಂಗ್ರೆಸ್​ನವರು ದೇವರಾಜ್ ಅರಸ್​ ಅವರಿಗೆ ಅಪಮಾನ ಮಾಡಿದರು. ಬಿಆರ್​ ಅಂಬೇಡ್ಕರ್ ಅವರ ಸಮಾಧಿಗೆ ಜಾಗ ಕೊಡಲಿಲ್ಲ, ಅವರನ್ನು ಚುನಾವಣೆಯಲ್ಲಿ ಸೋಲಿಸದವರಿಗೆ ಪ್ರಶಸ್ತಿ ನೀಡಿದ್ದೀರಿ. ಸಿದ್ದರಾಮಯ್ಯ ಅವರೆ ನೀವು ಇರುವ ಪಕ್ಷ ದಲಿತರಿಗೆ ಎಷ್ಟು ಅಪಮಾನ ಮಾಡಿದೆ ಅಂತ ತಿಳಿದುಕೊಳ್ಳಿ ಎಂದು ಚಾಟಿ ಬೀಸಿದರು.

ಕಾಂಗ್ರೆಸ್​ನವರು ಕುಮಾರಸ್ವಾಮಿ ಅವರ ಮೇಲಿನ ಪ್ರಕರಣದ ಬಗ್ಗೆ ಈಗ ಮಾತನಾಡುತ್ತಿದ್ದಾರೆ. ಆದರೆ ಇದೆ ಕಾಂಗ್ರೆಸ್​ನವರು 2018 ರಲ್ಲಿ ಅವರ ಮನೆಗೆ ಹೋಗಿ ಸಿಎಂ ಮಾಡಿದರು. ಸಾವಿರಾರು ಸೈಟ್ ಮತ್ತು ಸಾವಿರಾರು ಕೋಟಿ ಅವ್ಯವಹಾರ ಮೂಡ ಪ್ರಕರಣದಲ್ಲಿ ನಡೆದಿದೆ. ಅದನ್ನು ಮುಚ್ಚಿಹಾಕಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ರಾಜ್ಯಪಾಲರ ಆದೇಶ ಪಾಲನೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಂಪಣ್ಣ ಆಯೋಗ ನೀಡಿರುವ ವರದಿ ಈಗ ಎಲ್ಲಿದೆ? ಸಿದ್ದರಾಮಯ್ಯನವರೇ ನಿಮ್ಮ ಶ್ರೀಮತಿ ಅವರ ಕೈಯಿಂದ ನೀವು ಬರೆಸಿದ್ದ ಪತ್ರಕ್ಕೆ ವೈಟನರ್ ಹಚ್ಚಿದರವರು ಯಾರು? ಅದನ್ನು ಮೊದಲು ಹೇಳಿ. ನಿಮಗೆ ಬಾಂಗ್ಲಾದೇಶ ಮಾದರಿ ಆದರ್ಶನಾ? ಪೋಕ್ಸೋ ಪ್ರಕರಣದಲ್ಲಿ ಬಿಎಸ್​ ಯಡಿಯೂರಪ್ಪನವರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ನಿವು ರಾಷ್ಟ್ರಪತಿಗಳ ಮುಂದೆ ಪೆರೇಡ್ ಮಾಡೋದು ಬೇಡ ಎಂದರು.

ಹೆಚ್​ಡಿ ಕುಮಾರಸ್ವಾಮಿ ಅವರನ್ನು ಮತ್ತು ಜೆಡಿಎಸ್ ಮುಗಿಸುವ ಮಾತುಗಳನ್ನು ಕಾಂಗ್ರೆಸ್​ನವರು ಮಾತನಾಡುತ್ತಿದ್ದಾರೆ. ನಿಮಗೆ ಬೇಕಾದಾಗ ಒಂದು ಥೇರಿ, ಬೇಡವಾದಾಗ ಮತ್ತೊಂದು ಥೇರಿ ಇದು ನಿಮ್ಮ ವರ್ತನೆ. ನಾವು ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದೆವೆ ಅಂತ ಈಗಾಗಲೇ ಲೆಕ್ಕ ಕೊಟ್ಟಿದ್ದೆವೆ. ಕೇಂದ್ರದಿಂದ ರಾಜ್ಯಕ್ಕೆ ಕೊಟ್ಟಿರುವ ಮೂರು ಲಕ್ಷ ಕೋಟಿ ಅನುದಾನ ಏನು ಮಾಡಿದ್ದೀರಿ ಮೊದಲು ಹೇಳಿ ಎಂದು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:00 pm, Fri, 23 August 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ