Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್

Bengaluru-Dharwad Vande Bharat: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30ಕ್ಕೆ ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆಗು ಮುನ್ನ ಬಹುತೇಕ​ ಸೀಟ್​ಗಳು ಬುಕ್​ ಆಗಿವೆ.

Vande Bhart Express: ಉದ್ಘಾಟನೆಗೂ ಮುನ್ನವೇ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿನ ಬಹುತೇಕ ಎಲ್ಲಾ ಸೀಟ್​ ಬುಕ್
ವಂದೇ ಭಾರತ್ ಎಕ್ಸ್​​ಪ್ರೆಸ್
Follow us
|

Updated on:Jun 27, 2023 | 9:45 AM

ಧಾರವಾಡ: ಇಂದು (ಜೂ.28) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​ಗೆ (Bengaluru-Dharwad Vande Bharat) ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ ಬೆಳಿಗ್ಗೆ 10:30 ವರ್ಚುವಲ್​ ಮೂಲಕ ಚಾಲನೆ ನೀಡಲಿದ್ದಾರೆ. ಚಾಲನೆ ಬಳಿಕ ಧಾರವಾಡ (Dharwad) ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯುತ್ತದೆ. ನಂತರ ಧಾರವಾಡದಿಂದ ಬೆಂಗಳೂರಿಗೆ (Bengaluru) ಹೊರಡುತ್ತದೆ. ಇದು ರಾಜ್ಯದೊಳಗೆ ಸಂಚರಿಸಲಿರುವ ಮೊದಲ ರೈಲಾಗಿದೆ. ಈ ರೈಲು ಸೇರಿದಂತೆ ಪ್ರಧಾನಿ ಮೋದಿಯವರು ಏಕಕಾಲಕ್ಕೆ ಐದು ವಂದೇ ಭಾರತ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ.

ಜೂ.28 ರ ಪ್ರಯಾಣಕ್ಕೆ ಬಹುತೇಕ ಸೀಟ್​ ಬುಕ್​​

ಜೂನ್.28ರ ಪ್ರಯಾಣಕ್ಕೆ ಸೀಟ್​​ ಬುಕ್ಕಿಂಗ್​ ಆರಂಭವಾಗಿದೆ. ಬುಕ್ಕಿಂಗ್​​ ಆರಂಭವಾದ ಕೆಲವೇ ನಿಮಿಷಗಳಲ್ಲಿ ಬಹುತೇಕ ಸೀಟ್​​​​ಗಳು ಬುಕ್​ ಆಗಿವೆ. ಜೂನ್ 28 ರಂದು ಬೆಂಗಳೂರಿನಿಂದ ಧಾರವಾಡಕ್ಕೆ ಹೊರಡುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೀಟ್​​​ ಬುಕ್ಕಿಂಗ್​ ಬೆಳಿಗ್ಗೆ 8 ಗಂಟೆಗೆ ಆರಂಭವಾಯಿತು. ಮೊದಲ 20 ನಿಮಿಷಗಳಲ್ಲೇ ಶೇ 85 ರಷ್ಟು ಸೀಟುಗಳು ಬುಕ್​ ಆಗಿವೆ. ಹಾಗೇ ಧಾರವಾಡದಿಂದ ಬೆಂಗಳೂರಿಗೆ ಹೊರಡುವ ವಂದೇ ಭಾರತ್ ರೈಲಿನ ಸೀಟ್​ಗಳು ಕೂಡ​​ ಬುಕ್ಕಿಂಗ್ ​ಆರಂಭವಾದ ಮೊದಲ 20 ನಿಮಿಷಗಳಲ್ಲೇ ಬಹುತೇಕ ಫುಲ್​ ಆಗಿವೆ.

ಈ ರೈಲು 8 ಬೋಗಿಗಳನ್ನು ಹೊಂದಿದ್ದು, 530 ಪ್ರಯಾಣಿಕರು ಪ್ರಯಾಣಿಸಬಹುದಾಗಿದೆ. ಈ ರೈಲು ವಾರದಲ್ಲಿ 6 ದಿನ ಧಾರವಾಡ-ಬೆಂಗಳೂರು ಮಾರ್ಗದಲ್ಲಿ ಸಂಚಾರ ಮಾಡುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:39 am, Tue, 27 June 23

ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ