Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಕೊಲೆ ಕೇಸ್​​ಗೆ ಬಿಗ್ ಟ್ವಿಸ್ಟ್​: ನನ್ನ ಮಗಳನ್ನ ನಮ್ಮ ಪಕ್ಷದ ಮುಖಂಡರೇ ಹತ್ಯೆ ಮಾಡಿಸಿದ್ದು ಎಂದ ತಂದೆ

2024 ಏ.18 ರಂದು ಹುಬ್ಬಳ್ಳಿಯ (Hubballi) ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಕೊಲೆಯಾಗಿತ್ತು. ಹತ್ಯೆಯ ಆರೋಪಿ ಫಯಾಜ್​ನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಕೇಸ್​ಗೆ ಟ್ವಿಸ್ಟ್​ ಸಿಕ್ಕಿದ್ದು, ನನ್ನ ಮಗಳನ್ನು ನಮ್ಮ ಪಕ್ಷದ ಮುಖಂಡರೇ ಹತ್ಯೆ ಮಾಡಿಸಿದ್ದು ಎಂದು ನೇಹಾ ತಂದೆ ನಿರಂಜನಯ್ಯ ಗಂಭೀರ ಆರೋಪ ಮಾಡಿದ್ದಾರೆ.

ನೇಹಾ ಕೊಲೆ ಕೇಸ್​​ಗೆ ಬಿಗ್ ಟ್ವಿಸ್ಟ್​: ನನ್ನ ಮಗಳನ್ನ ನಮ್ಮ ಪಕ್ಷದ ಮುಖಂಡರೇ ಹತ್ಯೆ ಮಾಡಿಸಿದ್ದು ಎಂದ ತಂದೆ
ನೇಹಾ ಕೊಲೆ ಕೇಸ್​​ಗೆ ಬಿಗ್ ಟ್ವಿಸ್ಟ್
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 31, 2024 | 6:13 PM

ಹುಬ್ಬಳ್ಳಿ, ಜು.31: ಹುಬ್ಬಳ್ಳಿಯ ವಿಶ್ವ ವಿದ್ಯಾಲಯದ ಆವರಣದಲ್ಲಿ ನಡೆದ ನೇಹಾ ಕೊಲೆ ಪ್ರಕರಣ(Neha Murder Case) ಕ್ಕೆ ಸಂಬಂಧಿಸಿದಂತೆ ‘ರಾಜಕೀಯ ಷಡ್ಯಂತ್ರದಿಂದ ನನ್ನ ಮಗಳ ಕೊಲೆಯಾಗಿದ್ದು, ನೂರಕ್ಕೆ ನೂರರಷ್ಟು ನಮ್ಮ ಪಕ್ಷದ ಮುಖಂಡರೇ ಹತ್ಯೆ ಮಾಡಿಸಿದ್ದಾರೆ ಎಂದು ನೇಹಾ ತಂದೆ ನಿರಂಜನಯ್ಯ ಹಿರೇಮಠ ಗಂಭೀರ ಆರೋಪ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ‘ಈ ಘಟನೆಯಲ್ಲಿ ಕಾಣದ ಕೈಗಳು ಕೆಲಸ ಮಾಡುತ್ತಿದ್ದು, ಷಡ್ಯಂತ್ರ ನಡೆಸುತ್ತಿದ್ದಾರೆ ಎಂದಿದ್ದಾರೆ.

ಗೃಹಸಚಿವರ ಹೇಳಿಕೆಗೆ ನಿರಂಜನಯ್ಯ ಹಿರೇಮಠ ಆಕ್ರೋಶ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತಗತಿ ಕೋರ್ಟ್ ಅವಶ್ಯಕತೆಯಿಲ್ಲವೆಂದು ಗೃಹಸಚಿವ ಪರಮೇಶ್ವರ್ ಹೇಳಿದ್ದು, ಇದಕ್ಕೆ ನಿರಂಜನಯ್ಯ ಹಿರೇಮಠ ಆಕ್ರೋಶ ವ್ಯಕ್ತಪಡಿಸಿದರು. ‘ಗೃಹಸಚಿವರ ಹೇಳಿಕೆ ನನಗೆ ಆಶ್ಚರ್ಯ ಎನಿಸಿದ್ದು, ಅಷ್ಟೆ ದುಃಖವಾಗಿದೆ. ಸರ್ಕಾರದ ಪತ್ರದ ಮೂಲಕ ತ್ವರಿತಗತಿ ಕೋರ್ಟ್ ಮಾಡುತ್ತೇವೆಂದಿತ್ತು. ಸಿಎಂ, ಕಾನೂನು ಸಚಿವರು ಬಂದು ಸರ್ಕಾರದ ಪತ್ರವನ್ನು ತೋರಿಸಿದ್ದರು. ‘ನನ್ನ ಮಗಳು ನೇಹಾ ಕೊಲೆ ಪ್ರಕರಣ ದೇಶಾದ್ಯಂತ ಸುದ್ದಿಯಾಗಿತ್ತು. ಇಂತಹ ಪೈಶಾಚಿಕ ಕೃತ್ಯದ ಬಗ್ಗೆ ಗೃಹಸಚಿವರ ಹೇಳಿಕೆ ಸಮಂಜಸವಲ್ಲ. ಈ ಹೇಳಿಕೆಯಿಂದ ರಾಜ್ಯ ಸರ್ಕಾರಕ್ಕೆ ಕಳಂಕ ತರಲಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ ನೇಹಾ ಕೊಲೆ: ಚಾರ್ಜ್​ ಶೀಟ್​ನಲ್ಲಿ ಲವ್​ ಜಿಹಾದ್​ ಉಲ್ಲೇಖವಿಲ್ಲ, ಮದುವೆಗೆ ನಿರಾಕರಿಸಿದ್ದಕ್ಕೆ ಹತ್ಯೆ

ನಾನು ಕಾರ್ಪೊರೇಟರ್, ಕಾಂಗ್ರೆಸ್ ಕಾರ್ಯಕರ್ತನಿಗೆ ರಕ್ಷಣೆ ಇಲ್ಲ

ನೇಹಾ ಹತ್ಯೆಯಾಗಿ 32 ದಿನದ ನಂತರ ಸಾಂತ್ವನ ಹೇಳಲು ಬಂದಿದ್ದ ಗೃಹಸಚಿವ ಡಾ.ಜಿ.ಪರಮೇಶ್ವರ್, ನ್ಯಾಯಕೊಡಿಸುವ ಭರವಸೆ ನೀಡಿದ್ದರು. ಈಗ ತ್ವರಿತಗತಿ ಕೋರ್ಟ್ ಅಗತ್ಯವಿಲ್ಲವೆಂದು ಉಲ್ಟಾ ಹೊಡೆದಿದ್ದಾರೆ. ಈ ಮೂಲಕ ಸಮಾಜಕ್ಕೆ ಯಾವ ಸಂದೇಶ ಕೊಡಲು ಹೊರಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇನ್ನು ಆರೋಪಿಗೆ ಸಹಾಯ ಮಾಡುವುದರಿಂದ ನಿಮಗೆ ಏನು ಲಾಭವಾಗುತ್ತದೆ. ರಾಜ್ಯ ಸರ್ಕಾರ ನುಡಿದಂತೆ ನಡೆದುಕೊಳ್ಳಬೇಕೆಂಬುದು ನನ್ನ ಬೇಡಿಕೆ. ನಾನು ಕಾರ್ಪೊರೇಟರ್, ಕಾಂಗ್ರೆಸ್ ಕಾರ್ಯಕರ್ತನಿಗೆ ರಕ್ಷಣೆ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಭೇಟಿಯಾಗಿ ಮಾತನಾಡುತ್ತೇನೆ

ನನ್ನ ಮಗಳನ್ನು ಕೊಲೆ ಮಾಡಿಸುವುದಕ್ಕಿಂತ ಆರೋಪಿಗೆ ಮೊದಲು ಹೊರಗೆ ತರುತ್ತೇನೆಂದು ಮಾತು ಕೊಟ್ಟಿರುತ್ತಾರೆ. ಹೀಗಾಗಿ ಯಾರೂ ಮಾಡಿಸಿದ್ದು ಎಂದು ಹೇಳಿ ಬಿಟ್ಟರೆ ಎಂಬ ಭಯದಿಂದ ಆರೋಪಿಗೆ ಸಹಾಯ ಮಾಡುತ್ತಿದ್ದಾರೆ. ಕೊಲೆ ಆರೋಪಿಗೆ ಜಾಮೀನು ಕೊಡಿಸಲು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಮಗಳು ನೇಹಾ ಕೊಲೆ ಪ್ರಕರಣದ ಚಾರ್ಜ್​ಶೀಟ್ ಇನ್ನೂ ಸಿಕ್ಕಿಲ್ಲ. ಒಂದು ಕಾಪಿ ಕೊಡಿ ಅಂದ್ರೂ ಸಿಐಡಿ ಅಧಿಕಾರಿಗಳು ನನಗೆ ಕೊಟ್ಟೇ ಇಲ್ಲ. ಮೇಲ್ನೋಟಕ್ಕೆ ಚಾರ್ಜ್​ಶೀಟ್​ನಲ್ಲಿ ಕೈಯಾಡಿಸಿರುವ ಅನುಮಾನವಿದೆ. ಕಾರ್ಯಕರ್ತರ ಬೆಳಿಬಾರದು, ಬೆಳೆದರೆ ನಮಗೆ ಸಮಸ್ಯೆ ಎಂಬ ಭೀತಿ ಎದುರಾಗಿದೆ. ಇವರು ತಪ್ಪು ಮಾಡಿದ್ದರಿಂದ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಯ್ತು. ನಾನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಅವರನ್ನು ಭೇಟಿ ಮಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ತುಂಬ ಸಮಯದ ಬಳಿಕ ಎಸಿ ಆನ್ ಮಾಡುತ್ತೀರಾ? ಒಳಗೆ ಹಾವಿರಬಹುದು ಎಚ್ಚರ!
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಮೃಗಾಲಯದ ಪ್ರಾಣಿಗಳಿಗೂ ತಟ್ಟಿದ ಬೇಸಿಗೆ ಬಿಸಿ: ಸ್ಪ್ರಿಂಕ್ಲರ್ ವ್ಯವಸ್ಥೆ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಕನ್ನಡ ಚಿತ್ರರಂಗದಲ್ಲಿ ಪುನೀತ್ ರೀತಿ ಡ್ಯಾನ್ಸ್ ಮಾಡೋರು ಯಾರೂ ಇಲ್ಲ: ರಕ್ಷಿತ
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಬಜೆಟ್​ ಅಧಿವೇಶನ ಸಂದರ್ಭದಲ್ಲೇ ವಿಧಾನಸೌಧಕ್ಕೆ ಬಂದ ಬುಸ್​ ಬುಸ್ ನಾಗಪ್ಪ..!
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಯಾರ ಬಗ್ಗೆಯೂ ಪುನೀತ್ ನೆಗೆಟಿವ್ ಮಾತಾಡಿದ್ದು ನಾನು ಕೇಳಿಲ್ಲ: ಕೆ. ಕಲ್ಯಾಣ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಸಿಎಂ ನೀಡಿರುವ ಸ್ಪಷ್ಟನೆ ರಾಜ್ಯದ ಜನತೆಗೆ ನೆಮ್ಮದಿ ನೀಡಿದೆ: ಸ್ಪೀಕರ್
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ
ಒತ್ತೆಯಾಳುಗಳನ್ನು ಗಲ್ಲಿಗೇರಿಸುತ್ತೇವೆ; ಬಲೂಚ್ ದಂಗೆಕೋರರ ಎಚ್ಚರಿಕೆ