AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ!

Dharwad Zakia Mulla Murder Case: ಧಾರವಾಡ ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿಯೊಂದರ ಬಳಿ ಪತ್ತೆಯಾಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಯುವತಿಯನ್ನು ಮದುವೆಯಾಗಬೇಕಿದ್ದವನೇ ಆಕೆಯೊಂದಿಗೆ ಸಂಜೆವರೆಗೂ ಸುತ್ತಾಡಿ ಬಳಿಕ ಆಕೆಯನ್ನು ಕೊಲೆ ಮಾಡಿದ್ದಾನೆ.

ಧಾರವಾಡ ಝಕಿಯಾ ಮುಲ್ಲಾ ಕೊಲೆ ಕೇಸಿಗೆ ಬಿಗ್ ಟ್ವಿಸ್ಟ್: ಮದ್ವೆ ಆಗಬೇಕಿದ್ದವನೇ ಹಂತಕ!
Zakia Mulla And Sabir Mulla
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Jan 22, 2026 | 3:04 PM

Share

ಧಾರವಾಡ, (ಜನವರಿ 22): ಕೆಲಸ ಹುಡುಕಲೆಂದು ಮನೆಯಿಂದ ಹೊರಹೋಗಿದ್ದ 19 ವರ್ಷದ ಯುವತಿ ಝಕಿಯಾ ಮುಲ್ಲಾ (Zakia Mulla Murder Case) ಶವ ಧಾರವಾಡ (Dharwad) ನಗರದ ಹೊರಹೊಲಯದ ಮನಸೂರು ರಸ್ತೆಯ ಡೈರಿ ಬಳಿ ಪತ್ತೆಯಾಗಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ಪ್ರೀತಿಸುತ್ತಿದ್ದ ಪ್ರಿಯಕರ ಸಾಬೀರ್ ಮುಲ್ಲಾನೇ ಝಕಿಯಾಳನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದರಿಂದ ಮನೆಯವರು ಸಹ ಮದುವೆಗೆ ಒಪ್ಪಿದ್ದು, ಮುಂದಿನ ತಿಂಗಳು ನಿಶ್ಚಿತಾರ್ಥ ಮಾಡಲು ತೀರ್ಮಾನಿಸಿದ್ದರು. ಆದ್ರೆ, ಇದೀಗ ಯುವತಿಯನ್ನು ಮದುವೆಯಾಗಬೇಕಿದ್ದ ಸಾಬೀರ್ ಮುಲ್ಲಾ ಎನ್ನುವವನೇ ವೇಲ್‌ನಿಂದ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಹತ್ಯೆಗೆ ಕಾರಣವೇನು?

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಝಕಿಯಾ ಮತ್ತು ಸಾಬೀರ್ ಮುಲ್ಲಾ ಸಂಬಂಧಿಕರಾಗಿದ್ದು, ಇವರಿಬ್ಬರಿಗೂ ಮದುವೆ ಮಾಡಲು ಕುಟುಂಬಸ್ಥರು ಮಾತುಕತೆ ನಡೆಸಿದ್ದರು. ಜನವರಿ 20ರ ಸಂಜೆ ಇಬ್ಬರೂ ಹೊರಗಡೆ ಸುತ್ತಾಡಲು ಹೋಗಿದ್ದರು. ಈ ವೇಳೆ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜೋರು ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಸಾಬೀರ್, ವೇಲ್‌ನಿಂದಲೇ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ, ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ

ಹತ್ಯೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದ ಹಂತಕ

ಆಘಾತಕಾರಿ ವಿಚಾರವೆಂದರೆ, ಹತ್ಯೆ ನಡೆದ ಸ್ಥಳದಲ್ಲಿದ್ದ ಆರೋಪಿ ಸಾಬೀರ್ ಮುಲ್ಲಾ ತಾನೇ ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ಕೊಲೆಯ ಬಗ್ಗೆ ಮಾಹಿತಿ ನೀಡಿದ್ದ. ಆ ನಂತರ ಸ್ಥಳಕ್ಕೆ ಪೊಲೀಸರು ಬಂದಾಗಲೂ ಅಲ್ಲೇ ಇದ್ದು ಏನೂ ಅರಿಯದವನಂತೆ ನಟಿಸಿದ್ದ. ಆದರೆ, ಆತನ ನಡವಳಿಕೆಯ ಮೇಲೆ ಅನುಮಾನಗೊಂಡ ಪೊಲೀಸರು ,ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಸಲಿ ಸತ್ಯ ಬಯಲಿಗೆ ಬಂದಿದೆ.

ಸದ್ಯ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು, ಸಾಬೀರ್ ಮುಲ್ಲಾನನ್ನು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಮೃತದೇಹದ ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಪೊಲೀಸರ ಸಮ್ಮುಖದಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Thu, 22 January 26

Follow Us
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ