AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್​ ವಿಧಿವಶರಾಗಿದ್ದಾರೆ.

ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿಎಂ ನಿಂಬಣ್ಣವರ್ ನಿಧನ
ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್
ಶಿವಕುಮಾರ್ ಪತ್ತಾರ್
| Edited By: |

Updated on:Jul 09, 2023 | 2:07 PM

Share

ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ್​(76) (C M Nimbannavar) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬೆಂಗಳೂರಿನ (Bengaluru) ಆಸ್ಪತ್ರೆಗೆ ದಾಖಲಾಗಿದ್ದ ಇವರು ಇಂದು (ಜು.09) ಕೊನೆಯುಸಿರೆಳೆದಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ (BJP) ಗೆಲುವು ಸಾಧಿಸಿದ್ದರು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗೇದೇವರಕೊಪ್ಪ ಗ್ರಾಮದ ರೈತ ಕುಟುಂಬದಲ್ಲಿ 1947ರಲ್ಲಿ ಜನಿಸಿದ್ದಾರೆ.

1995 ರಲ್ಲಿ ಬಿಜೆಪಿಗೆ ಸೇರ್ಪಡೆಯಾದ ಇವರು ಸಕ್ರಿಯ ರಾಜಕಾರಣದಲ್ಲಿದ್ದರು. ಕಲಘಟಗಿ ತಾಲೂಕು ಬಿಜೆಪಿ ಅಧ್ಯಕರಾಗಿ ಸತತ ಪಕ್ಷವನ್ನು ಗ್ರಾಮ ಮಟ್ಟದಿಂದ ಸಂಘಟಿಸಿದ್ದಾರೆ. ಇವರು 2018ರ ವಿಧಾನಸಭೆ ಚುನಾವಣೆಯಲ್ಲಿ 83267 ಮತಗಳನ್ನು ಪಡೆದು ಕಾಂಗ್ರೆಸ್​ ಅಭ್ಯರ್ಥಿ ಸಂತೋಷ ಲಾಡ್​ ವಿರುದ್ಧ ಜಯಗಳಿಸಿದ್ದರು. ಆದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಇವರಿಗೆ ಟಿಕೆಟ್​ ಕೈ ತಪ್ಪಿತ್ತು. ಇವರ ಬದಲಿಗೆ ನಾಗರಾಜ ಛಬ್ಭಿಗೆ ಟಿಕೆಟ್​ ಒಲದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:58 pm, Sun, 9 July 23