ಬಿಜೆಪಿ ಕೆಲವೇ ಜನರ ಕೈಯಲ್ಲಿದೆ: ಅದರಿಂದ ಹೊರಬಂದರೆ ಮಾತ್ರ ಭವಿಷ್ಯ ಎಂದ ಜಗದೀಶ್ ಶೆಟ್ಟರ್
ಬಿಜೆಪಿ ಮುಳುಗುತ್ತಿರುವ ಹಡಗು, ಪಕ್ಷ ಅಧೋಗತಿಗೆ ಹೋಗುತ್ತಿದೆ. ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ ಮಾಡುವುದೇ ಇವರ ಕೆಲಸ. ರಾಜ್ಯದಲ್ಲಿ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಬಿ.ಎಲ್.ಸಂತೋಷ್ ಜೊತೆ ಸಂಪರ್ಕದಲ್ಲಿದ್ದರೆ, ನಾಳೆಯೇ ಆಪರೇಷನ್ ಆರಂಭಿಸಲಿ ಎಂದು ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿ, ಸೆಪ್ಟೆಂಬರ್ 1: ಬೇರೆ ಪಕ್ಷದವರನ್ನು ಕರೆದುಕೊಂಡು ಸರ್ಕಾರ ಮಾಡುವುದನ್ನು ಬಿಟ್ಟುಬಿಡಿ. ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ ಮಾಡುವುದೇ ಇವರ ಕೆಲಸ. ರಾಜ್ಯದಲ್ಲಿ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಳುಗುತ್ತಿರುವ ಹಡಗು, ಪಕ್ಷ ಅಧೋಗತಿಗೆ ಹೋಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದಕ್ಕೆ ಕಾರಣ ಬಿಜೆಪಿ ಕೆಲವೇ ಜನರ ಕೈಯಲ್ಲಿದೆ. ಅದರಿಂದ ಹೊರಬಂದರೆ ಮಾತ್ರ ಭವಿಷ್ಯ ಎಂದು ಹೇಳಿದರು.
ಕಾಂಗ್ರೆಸ್ ಶಾಸಕರು ಬಿ.ಎಲ್.ಸಂತೋಷ್ ಜೊತೆ ಸಂಪರ್ಕದಲ್ಲಿದ್ದರೆ: ನಾಳೆಯೇ ಆಪರೇಷನ್ ಆರಂಭಿಸಲಿ ಎಂದ ಶೆಟ್ಟರ್
ಕೆಲ ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, B.L.ಸಂತೋಷ್ ಮೊದಲು ಅವರ ಪಕ್ಷದಲ್ಲಿದ್ದವರನ್ನ ಉಳಿಸಿಕೊಳ್ಳಲಿ. ಬಿಜೆಪಿಯ ಮಾಜಿ, ಹಾಲಿ ಶಾಸಕರನ್ನು ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ. ಅವರ ಭಾಷಣ ನಾನು ನೋಡಿಲ್ಲ. ಅವರ ಬಗ್ಗೆ ನಾನು ಸಾಕಷ್ಟು ಮಾತಾಡಿದ್ದೇನೆ. ಹಾಗಾಗಿ ಅವರ ಬಗ್ಗೆ ಬಿಜೆಪಿ ಯೋಚನೆ ಮಾಡಬೇಕು, ದೆಹಲಿ ಅಲ್ಲಿ ಕೂತ ನಾಯಕರು ಯೋಚನೆ ಮಾಡಬೇಕು ಎಂದರು.
ಇದನ್ನೂ ಓದಿ: 40 – 45 ಜನ ಸಂಪರ್ಕದಲ್ಲಿದ್ದಾರೆ, ಒಪ್ಪಿಗೆ ಸಿಕ್ಕರೆ ಒಂದು ದಿನದ ಕೆಲಸ, ಆದರೆ; ಬಿಎಲ್ ಸಂತೋಷ್ ಸ್ಫೋಟಕ ಹೇಳಿಕೆ
ಕಾಂಗ್ರೆಸ್ಗೆ ರಾಜೀನಾಮೆ ಕೊಟ್ಟು ಯಾರು ಬಿಜೆಪಿಗೆ ಹೋಗುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಗಟ್ಟಿಮುಟ್ಟಾಗಿದೆ. ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಬಾರಿಯೂ ಬಹುಮತ ಬರಲಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ಗೆ ಈ ಬಾರಿ 135 ಸೀಟು ಬಂದಿದೆ. ಸದ್ಯ ರಾಜ್ಯದಲ್ಲಿ ಬಿಜೆಪಿಯ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಬಿಎಲ್ ಸಂತೋಷ್ ಇದ್ದ ಸಭೆಗೆ ಎಸ್ಟಿ ಸೋಮಶೇಖರ್, ಹೆಬ್ಬಾರ್, ರೇಣುಕಾಚಾರ್ಯ ಗೈರು
ಬೆಳಗ್ಗೆ ಇಂದ ಸಾಯಂಕಾಲವರೆಗೂ ಆಪರೇಶನ್ ಮಾಡುವುದೇ ಇವರ ಕೆಲಸ. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರುವುದು ನಿಮ್ಮ ಕೆಲಸ. ನಾನು ಯಾಕೆ ಅವರ ಬಗ್ಗೆ ಯೋಚನೆ ಮಾಡಲಿ. ಅದು ಅವರ ಪಕ್ಷಕ್ಕೆ ಬಿಟ್ಟ ಕೆಲಸ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.