ಹುಬ್ಬಳ್ಳಿ: ಕಾರ್ಯಕರ್ತರಿಗೆ 150 ಸೀಟ್​ ಗೆಲ್ಲುವ ಟಾಸ್ಕ್​ ಕೊಟ್ಟ ಅರಣು ಸಿಂಗ್​

ಕರ್ನಾಟಕದಲ್ಲಿ‌ ಬಿಜೆಪಿ 150 ಸ್ಥಾನದೊಂದಿಗೆ ಅಧಿಕಾರಕ್ಕೆ ಬರತ್ತೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಹೇಳಿದ್ದಾರೆ.

ಹುಬ್ಬಳ್ಳಿ: ಕಾರ್ಯಕರ್ತರಿಗೆ 150 ಸೀಟ್​ ಗೆಲ್ಲುವ ಟಾಸ್ಕ್​ ಕೊಟ್ಟ ಅರಣು ಸಿಂಗ್​
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 16, 2022 | 4:01 PM

ಧಾರವಾಡ: ಧಾರವಾಡ ಪವಿತ್ರ ಭೂಮಿಯಾಗಿದ್ದು, ದ. ರಾ ಬೇಂದ್ರೆ, ಗಿರೀಶ ಕಾರ್ನಾಡ, ಚಂದ್ರಶೇಖರ ಕಂಬಾರ, ಗಂಗೂಬಾಯಿ ಹಾನಗಲ್ಲ, ಬಸವರಾಜ ರಾಜಗುರುಗಳಂತಹ ಮಹಾನ್​​ ಸಾಹಿತಿಗಳು, ಸಂಗೀತ ವಿದ್ವಾಂಸರು ಜನಿಸಿದ ಭೂಮಿ ಎಂದು ಬಿಜೆಪಿ (BJP) ರಾಜ್ಯ ಉಸ್ತುವಾರಿ ಅರುಣ ಸಿಂಗ್​ (Arun singh) ಹೆಮ್ಮೆ ವ್ಯಕ್ತಪಡಿಸಿದರು. ಇಂದು (ಅ.16) ಹುಬ್ಬಳ್ಳಿಯಲ್ಲಿ (Hubli) ನಡೆದ ಪಕ್ಷದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು ವಾಣಿಜ್ಯ ನಗರಿ ಹುಬ್ಬಳ್ಳಿ ಉದ್ಯಮ ಕ್ಷೇತ್ರಕ್ಕೆ ಹೆಸರುವಾಸಿಯಾಗಿದೆ. ಜನಸಂಘದ ಕಾರ್ಯ ಇಲ್ಲಿಂದ ಆರಂಭಗೊಂಡಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಬಿಜೆಪಿ ಅಧಿಕಾರಕ್ಕೆ ಬರಲಿ ಎಂದು ಇಂದು ಸ್ವಾಮೀಜಿ ಆರ್ಶಿವದಿಸಿದ್ದಾರೆ. ಇವಾಗ ಕಾಲ ಬದಲಾಗಿದ್ದು, ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ ಅಲ್ಲ. ಈಗ ಏನೇ ಇದ್ದರೂ ಬಿಜೆಪಿ. ಪಕ್ಕದ ಗೋವಾದಲ್ಲಿ ಮೂರನೇ ಬಾರಿ ಬಿಜೆಪಿ ಅಧಿಕಾರ ನಡೆಸುತ್ತಿದೆ.‌ ಮಣಿಪುರದಲ್ಲಿ , ಉತ್ತರಖಾಂದಲ್ಲಿ ಬಿಜೆಪಿ ಸರಕಾರ ಗದ್ದುಗೆ ಏರಿದೆ. ಕಾಂಗ್ರೆಸ್ ನೆಲಕಚ್ಚಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ ಬಾಬಾ ಸಿಎಂ ಯೋಗಿ ಆದಿತ್ಯನಾಥ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ‌ ಬಿಜೆಪಿ 150 ಸ್ಥಾನದೊಂದಿಗೆ ಅಧಿಕಾರಕ್ಕೆ ಬರತ್ತೆ. ಮೋದಿ ನೇತೃತ್ವದಲ್ಲಿ ಬಿಜೆಪಿ ಅರಳುತ್ತಿದೆ. ಹಿಂದೆ ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಬಿಜೆಪಿ ಅರಳಿತ್ತು. ಈಗ ಮತ್ತೆ 150 ಸ್ಥಾನಗಳಲ್ಲಿ ಪೂರ್ವ ವಿಧಾನಸಭಾ ಕ್ಷೇತ್ರವೂ ಒಂದಾಗಲಿದೆ. ಭೂತ್ ಕಾರ್ಯಕರ್ತರು ಹೆಚ್ಚು ಹೆಚ್ಚು ಕೆಲಸ ಮಾಡಿ. ಪಕ್ಷದ ಗೆಲುವಿಗೆ ಕಾರಣರಾಗಬೇಕು ಎಂದು ಮನವಿಮಾಡಿರು.

ಇಂದಿನಿಂದ ಕೆಲಸ ಮಾಡುವ ಸಂಕಲ್ಪ ಮಾಡಬೇಕು. ಹಗಲು ರಾತ್ರಿ ಕೆಲಸ ಮಾಡಬೇಕು. ಬೊಮ್ಮಾಯಿ, ಮೋದಿ ಮಾಡಿರುವ ಕೆಲಸದ ಕುರಿತು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಕಾಂಗ್ರೆಸ್ ಜನರನ್ನು ಮರಳು ಮಾಡುವ ಕೆಲಸ ಮಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಪಕ್ಷನಾಯಕ ಸಿದ್ದರಾನಯ್ಯನವರನ್ನು ಒಂದು ಗೂಡಿಸಲು ಕಾಂಗ್ರೆಸ್​ನವರು ಒದ್ದಾಡುತ್ತಿದ್ದಾರೆ. ಅವರಿಗೆ ಅದೇ ಒಂದು ದೊಡ್ಡ ಕೆಲಸವಾಗಿದೆ. ಅವರಿಬ್ಬರು ಒಂದಾಗಲು ಸಾಧ್ಯವಿಲ್ಲ. ಅವರಿಬ್ಬರನ್ನು ಫೆವಿಕೋಲ್ ಹಾಕಿ‌ ಒಂದುಗೂಡಿಸಿದರೂ ಸಾಧ್ಯವಿಲ್ಲ ಎಂದು ವಾಗ್ದಾಳಿ ಮಾಡಿದರು.

ಕಾಂಗ್ರೆಸ್ ‌ಮನೆಯಲ್ಲಿ ರಾಹುಲ್ ಗಾಂಧಿ, ಮೋದಿ‌ ಬಗ್ಗೆ ಕೇಳಿದರೆ ಮೋದಿ ಮೋದಿ ಅಂತಾರೆ. ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಅದಕ್ಕೆ ಅಭಿನಂದನೆ ಸಲ್ಲಿಸಬೇಕು. ಕಾಂಗ್ರೆಸ್​ ಪಕ್ಷ ಜನರನ್ನು ಮರುಳು ಮಾಡಲು ಯತ್ನಿಸುತ್ತಿದೆ ಎಂದು ಕಾಲೆಳೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ