ಧಾರವಾಡ: ಧಾರವಾಡ ಪವಿತ್ರ ಭೂಮಿಯಾಗಿದ್ದು, ದ. ರಾ ಬೇಂದ್ರೆ, ಗಿರೀಶ ಕಾರ್ನಾಡ, ಚಂದ್ರಶೇಖರ ಕಂಬಾರ, ಗಂಗೂಬಾಯಿ ಹಾನಗಲ್ಲ, ಬಸವರಾಜ ರಾಜಗುರುಗಳಂತಹ ಮಹಾನ್ ಸಾಹಿತಿಗಳು, ಸಂಗೀತ ವಿದ್ವಾಂಸರು ಜನಿಸಿದ ಭೂಮಿ ಎಂದು ಬಿಜೆಪಿ (BJP) ರಾಜ್ಯ ಉಸ್ತುವಾರಿ ಅರುಣ ಸಿಂಗ್ (Arun singh) ಹೆಮ್ಮೆ ವ್ಯಕ್ತಪಡಿಸಿದರು. ಇಂದು (ಅ.16) ಹುಬ್ಬಳ್ಳಿಯಲ್ಲಿ (Hubli) ನಡೆದ ಪಕ್ಷದ ಕಾರ್ಯಕರ್ತರ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು ವಾಣಿಜ್ಯ ನಗರಿ ಹುಬ್ಬಳ್ಳಿ ಉದ್ಯಮ ಕ್ಷೇತ್ರಕ್ಕೆ ಹೆಸರುವಾಸಿಯಾಗಿದೆ. ಜನಸಂಘದ ಕಾರ್ಯ ಇಲ್ಲಿಂದ ಆರಂಭಗೊಂಡಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬರಲಿ ಎಂದು ಇಂದು ಸ್ವಾಮೀಜಿ ಆರ್ಶಿವದಿಸಿದ್ದಾರೆ. ಇವಾಗ ಕಾಲ ಬದಲಾಗಿದ್ದು, ಒಮ್ಮೆ ಕಾಂಗ್ರೆಸ್, ಒಮ್ಮೆ ಬಿಜೆಪಿ ಅಲ್ಲ. ಈಗ ಏನೇ ಇದ್ದರೂ ಬಿಜೆಪಿ. ಪಕ್ಕದ ಗೋವಾದಲ್ಲಿ ಮೂರನೇ ಬಾರಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ಮಣಿಪುರದಲ್ಲಿ , ಉತ್ತರಖಾಂದಲ್ಲಿ ಬಿಜೆಪಿ ಸರಕಾರ ಗದ್ದುಗೆ ಏರಿದೆ. ಕಾಂಗ್ರೆಸ್ ನೆಲಕಚ್ಚಿದೆ. ಉತ್ತರ ಪ್ರದೇಶದಲ್ಲಿ ಬುಲ್ಡೋಜರ ಬಾಬಾ ಸಿಎಂ ಯೋಗಿ ಆದಿತ್ಯನಾಥ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ 150 ಸ್ಥಾನದೊಂದಿಗೆ ಅಧಿಕಾರಕ್ಕೆ ಬರತ್ತೆ. ಮೋದಿ ನೇತೃತ್ವದಲ್ಲಿ ಬಿಜೆಪಿ ಅರಳುತ್ತಿದೆ. ಹಿಂದೆ ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಬಿಜೆಪಿ ಅರಳಿತ್ತು. ಈಗ ಮತ್ತೆ 150 ಸ್ಥಾನಗಳಲ್ಲಿ ಪೂರ್ವ ವಿಧಾನಸಭಾ ಕ್ಷೇತ್ರವೂ ಒಂದಾಗಲಿದೆ. ಭೂತ್ ಕಾರ್ಯಕರ್ತರು ಹೆಚ್ಚು ಹೆಚ್ಚು ಕೆಲಸ ಮಾಡಿ. ಪಕ್ಷದ ಗೆಲುವಿಗೆ ಕಾರಣರಾಗಬೇಕು ಎಂದು ಮನವಿಮಾಡಿರು.
ಇಂದಿನಿಂದ ಕೆಲಸ ಮಾಡುವ ಸಂಕಲ್ಪ ಮಾಡಬೇಕು. ಹಗಲು ರಾತ್ರಿ ಕೆಲಸ ಮಾಡಬೇಕು. ಬೊಮ್ಮಾಯಿ, ಮೋದಿ ಮಾಡಿರುವ ಕೆಲಸದ ಕುರಿತು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಕಾಂಗ್ರೆಸ್ ಜನರನ್ನು ಮರಳು ಮಾಡುವ ಕೆಲಸ ಮಾಡುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಪಕ್ಷನಾಯಕ ಸಿದ್ದರಾನಯ್ಯನವರನ್ನು ಒಂದು ಗೂಡಿಸಲು ಕಾಂಗ್ರೆಸ್ನವರು ಒದ್ದಾಡುತ್ತಿದ್ದಾರೆ. ಅವರಿಗೆ ಅದೇ ಒಂದು ದೊಡ್ಡ ಕೆಲಸವಾಗಿದೆ. ಅವರಿಬ್ಬರು ಒಂದಾಗಲು ಸಾಧ್ಯವಿಲ್ಲ. ಅವರಿಬ್ಬರನ್ನು ಫೆವಿಕೋಲ್ ಹಾಕಿ ಒಂದುಗೂಡಿಸಿದರೂ ಸಾಧ್ಯವಿಲ್ಲ ಎಂದು ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ಮನೆಯಲ್ಲಿ ರಾಹುಲ್ ಗಾಂಧಿ, ಮೋದಿ ಬಗ್ಗೆ ಕೇಳಿದರೆ ಮೋದಿ ಮೋದಿ ಅಂತಾರೆ. ಬೊಮ್ಮಾಯಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಅದಕ್ಕೆ ಅಭಿನಂದನೆ ಸಲ್ಲಿಸಬೇಕು. ಕಾಂಗ್ರೆಸ್ ಪಕ್ಷ ಜನರನ್ನು ಮರುಳು ಮಾಡಲು ಯತ್ನಿಸುತ್ತಿದೆ ಎಂದು ಕಾಲೆಳೆದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ