ಹುಬ್ಬಳ್ಳಿ: ಚರ್ಚ್‌ನಲ್ಲಿ ಮತಾಂತರ ಆರೋಪ; ಆರೋಪಿಯನ್ನು ಬಂಧಿಸುವಂತೆ ಅರವಿಂದ್ ಬೆಲ್ಲದ್, ಹಿಂದೂ ಪರ ಸಂಘಟನೆ ಪ್ರತಿಭಟನೆ
Hubli News: ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪಾಸ್ಟರ್ ಸೋಮು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ.
ಹುಬ್ಬಳ್ಳಿ: ಇಲ್ಲಿನ ಚರ್ಚ್ ಒಂದರಲ್ಲಿ ಮತಾಂತರ ಯತ್ನ ಆರೋಪ ವಿಚಾರಕ್ಕೆ ಸಂಬಂಧಿಸಿ ಶಾಸಕ ಅರವಿಂದ್ ಬೆಲ್ಲದ್ ಹಾಗೂ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. ಮತಾಂತರಿ ಬಂಧಿಸುವುದಾಗಿ ಆಯುಕ್ತರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಹೇಳಿಕೆ ನೀಡಿದ್ದಾರೆ.
ಆಯುಕ್ತರ ಭರವಸೆಯಂತೆ ನಾವು ಪ್ರತಿಭಟನೆ ಕೈಬಿಡುತ್ತಿದ್ದೇವೆ. ಪ್ರಕರಣದ ಬಗ್ಗೆ ರಾಜ್ಯ ಬಿಜೆಪಿ ನಾಯಕರ ಗಮನಕ್ಕೆ ತಂದಿದ್ದೇನೆ. ಕೇಂದ್ರ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೂ ಒಬ್ಬ ಮತಾಂತರಿ ಬಂಧಿಸುವಂತೆ ಹೋರಾಡುವ ಸ್ಥಿತಿ ಬಂದಿದೆ. ಬೀದಿಗಿಳಿದು ಹೋರಾಡುವ ಸ್ಥಿತಿ ಬಂದಿದ್ದು ನಮ್ಮ ದೌರ್ಭಾಗ್ಯ ಎಂದು ರಾಜ್ಯ ಸರ್ಕಾರ, ಪೊಲೀಸ್ ವ್ಯವಸ್ಥೆ ಬಗ್ಗೆ ಬೆಲ್ಲದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಚರ್ಚ್ ಒಂದರಲ್ಲಿ ಮತಾಂತರ ಮಾಡುತ್ತಿರುವ ಆರೋಪ ಕೇಳಿಬಂದಿದ್ದು ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ನವನಗರ ಪೊಲೀಸ್ ಠಾಣೆಗೆ ಅರವಿಂದ ಬೆಲ್ಲದ್ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಇಂದು (ಅಕ್ಟೋಬರ್ 17) ಮುತ್ತಿಗೆ ಹಾಕಿದ್ದರು. ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಹಿಂದೂ ಪರ ಸಂಘಟನೆ ಕಾರ್ಯಕರ್ತರ ಜತೆ ಮುತ್ತಿಗೆ ಹಾಕಿದ್ದರು. ಪೊಲೀಸ್ ಠಾಣೆ ಎದುರು ಡಿಜೆ ಹಾಕಿಕೊಂಡು ಪ್ರತಿಭಟನೆ ನಡೆಸಿದ್ದರು. ಠಾಣೆಯಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಜತೆ ಶಾಸಕ ಬೆಲ್ಲದ್ ಮಾತುಕತೆ ನಡೆಸಿದ್ದರು.
ಮತಾಂತರಕ್ಕೆ ಮುಂದಾಗಿದ್ದ ಪಾಸ್ಟರ್ ಬಂಧನಕ್ಕೆ ಬಿಗಿಪಟ್ಟು ಹಿಡಿಯಲಾಗಿತ್ತು. ಕಮಿಷನರ್ ಎದುರು ಅರವಿಂದ ಬೆಲ್ಲದ್ ಒತ್ತಾಯಿಸಿದ್ದರು. ಹುಬ್ಬಳ್ಳಿಯ ಭೈರದೇವರಕೊಪ್ಪ ಚರ್ಚ್‌ನಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚರ್ಚ್ ಪಾಸ್ಟರ್ ಸೋಮು ವಿರುದ್ಧ ಮತಾಂತರ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಪಾಸ್ಟರ್ ಸೋಮು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು. ಹಿಂದೂ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿತ್ತು.
ಹುಬ್ಬಳ್ಳಿಯ ನವನಗರದ ಚರ್ಚ್‌ನಲ್ಲಿ ಮತಾಂತರ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಚರ್ಚ್ ಒಳಗಡೆ ಹಿಂದೂಪರ ಸಂಘಟನೆಗಳು ರಾಮಜಪ ನಡೆಸಿದ್ದರು. ಮತಾಂತರ ಮಾಡುವವರನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ ನಡೆಸಿದ್ದರು. ರಸ್ತೆಯಲ್ಲಿ ಪ್ರತಿಭಟನೆಯಿಂದಾಗಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಪ್ರತಿಭಟನೆಗೆ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಸಾಥ್ ನೀಡಿದ್ದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿತ್ತು.
ಹುಬ್ಬಳ್ಳಿಯ ನವನಗರದ ಚರ್ಚ್‌ನಲ್ಲಿ ಮತಾಂತರ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಪ್ರತಿಕ್ರಿಯೆ ನೀಡಿದ್ದರು. ಈಗಾಗಲೇ ದೂರು ನೀಡಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಬಂಧಿಸದಿದ್ದರೆ ಪ್ರತಿಭಟನೆ ಕೈಬಿಡಲ್ಲವೆಂದು ಬೆಲ್ಲದ್ ಎಚ್ಚರಿಕೆ ನೀಡಿದ್ದರು. ಪೊಲೀಸರು ಕಾನೂನು ಬದ್ಧವಾಗಿ ಕೆಲಸ ಮಾಡಲಿ. ಅವರಿಗೆ ಯಾವುದೇ ಜಾತಿ ಇರಲ್ಲ ಎಂದು ಹೇಳಿದ್ದರು.
ಇದನ್ನೂ ಓದಿ: ಗದಗದ ಜುಮ್ಮಾ ಮಸೀದಿ ಮೂಲತಃ ವೆಂಕಟೇಶ್ವರ ದೇಗುಲ; ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ: ಪ್ರಮೋದ್ ಮುತಾಲಿಕ್
ಇದನ್ನೂ ಓದಿ: ಮತ್ತೆ ಪಂಚಮಸಾಲಿ ಮೂರನೆ ಪೀಠದ ಕಹಳೆ; ಸಮುದಾಯದ ಸ್ವಾಮೀಜಿಗಳ ಗೌಪ್ಯ ಸಭೆ
Published On - 10:08 pm, Sun, 17 October 21