ಕಳ್ಳರಿಗಿಂತ ಊರ ಕಳ್ಳರು ಕಾಂಗ್ರೆಸ್​ನಲ್ಲಿದಾರೆ: ಶಾಸಕ ಯತ್ನಾಳ್​ ವಾಗ್ದಾಳಿ

| Updated By: ಗಂಗಾಧರ​ ಬ. ಸಾಬೋಜಿ

Updated on: Sep 17, 2023 | 5:44 PM

ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ.​ ಅಧಿಕಾರಕ್ಕೆ ಬರುವ ಸಾಧ್ಯತೆಯಿಂದ ವಿಪಕ್ಷ ನಾಯಕನ ಆಯ್ಕೆ ಆಗಿಲ್ಲ.ಕಳ್ಳರಿಗಿಂತ ಊರ ಕಳ್ಳರು ಕಾಂಗ್ರೆಸ್​ನಲ್ಲಿದಾರೆ. ಹಗಲು ದರೋಡೆಕೋರರು ಕಾಂಗ್ರೆಸ್​ ಪಕ್ಷದಲ್ಲಿ ಇದ್ದಾರೆ. ನಮ್ಮ ಪಕ್ಷದಲ್ಲೂ ಕೆಲವರಿದ್ದಾರೆ, ಅವರ ಬಗ್ಗೆಯೂ ತನಿಖೆ ಆಗಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಕಳ್ಳರಿಗಿಂತ ಊರ ಕಳ್ಳರು ಕಾಂಗ್ರೆಸ್​ನಲ್ಲಿದಾರೆ: ಶಾಸಕ ಯತ್ನಾಳ್​ ವಾಗ್ದಾಳಿ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
Follow us on

ಹುಬ್ಬಳ್ಳಿ, ಸೆಪ್ಟೆಂಬರ್​ 17: ಕಳ್ಳರಿಗಿಂತ ಊರ ಕಳ್ಳರು ಕಾಂಗ್ರೆಸ್​ನಲ್ಲಿದಾರೆ. ಹಗಲು ದರೋಡೆಕೋರರು ಕಾಂಗ್ರೆಸ್​ ಪಕ್ಷದಲ್ಲಿ ಇದ್ದಾರೆ. ನಮ್ಮ ಪಕ್ಷದಲ್ಲೂ ಕೆಲವರಿದ್ದಾರೆ, ಅವರ ಬಗ್ಗೆಯೂ ತನಿಖೆ ಆಗಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಲಿ, ಇದಕ್ಕೆ ನಮ್ಮ ಬೆಂಬಲ ಇಲ್ಲ. ಇಂತಹ ದಲ್ಲಾಳಿಗಳು ಎಲ್ಲ ಪಕ್ಷಗಳಲ್ಲೂ ಇದ್ದಾರೆ. ದೆಹಲಿಯಲ್ಲೂ ಇದ್ದಾರೆ, ಕರ್ನಾಟಕದಲ್ಲೂ ಇಂತಹ ವಂಚಕರು ಇದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಜೊತೆ ಫೋಟೋ ಇರುತ್ತೆ, ರಾಹುಲ್ ಗಾಂಧಿ ಜೊತೆ ಫೋಟೋ ಇರುತ್ತೆ ಹಾಗೂ ಹೆಚ್​ಡಿ ದೇವೆಗೌಡ, ಬೊಮ್ಮಾಯಿ ಜೊತೆಯೂ ಫೋಟೋ ತೆಗೆಸಿಕೊಂಡಿರುತ್ತಾರೆ. ಕಾಂಗ್ರೆಸ್​ನವರು ಚೈತ್ರಾ ಕುಂದಾಪುರ ಜೊತೆ ನನ್ನ ಫೋಟೋ ಟ್ವೀಟ್ ಮಾಡಿದ್ದರು. ನಾನು ಹಿಂದೂ ಸಮಾಜದ ಕಾರ್ಯಕರ್ತ. ತಾಲಿಬಾನ್ ಮೂಲ ಪುರುಷ ಸಿದ್ದರಾಮಯ್ಯ ಎಂದು ವಾಗ್ದಾಳಿ ಮಾಡಿದ್ದಾರೆ.

ನಮ್ಮ ಪಕ್ಷದವರೇ ಏಕೆ ಸಿಎಂ ಆಗಬಾರದು

ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಆಗುತ್ತೆ.​ ಅಧಿಕಾರಕ್ಕೆ ಬರುವ ಸಾಧ್ಯತೆಯಿಂದ ವಿಪಕ್ಷ ನಾಯಕನ ಆಯ್ಕೆ ಆಗಿಲ್ಲ. ಜನವರಿ ವೇಳೆಗೆ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಕಾಂಗ್ರೆಸ್ ಪಕ್ಷದವರೇ ತಮ್ಮ ಸರ್ಕಾರವನ್ನು ಬೀಳಿಸಲಿದ್ದಾರೆ. ವಿರೋಧ ಪಕ್ಷದ ನಾಯಕರ ಆಯ್ಕೆ ಬದಲು ಮುಖ್ಯಮಂತ್ರಿ ಆಗಬಹುದು. ನೇರವಾಗಿ ನಮ್ಮ ಪಕ್ಷದವರೇ ಏಕೆ ಸಿಎಂ ಆಗಬಾರದು ಎಂದರು.

ನಮ್ಮ ಸಂಪರ್ಕದಲ್ಲಿಯೂ 45 ಜನ ಶಾಸಕರಿದ್ದಾರೆ

ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್​ ಪರೋಕ್ಷ ವಾಗ್ದಾಳಿ ವಿಚಾರವಾಗಿ ಮಾತನಾಡಿ, ಹರಿಪ್ರಸಾದ್​ಗೆ ನೋವಿದೆ, ಹೀಗಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಬಿ.ಕೆ.ಹರಿಪ್ರಸಾದ್ ಯಾರ ಕುಮ್ಮಕ್ಕಿನಿಂದ ಮಾತನಾಡುತ್ತಿದ್ದಾರೆ? ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಈ ತಂತ್ರ ಮಾಡಿದ್ದಾರೆ.

ಇದನ್ನೂ ಓದಿ: ಜನವರಿಗೆ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕ ಆಯ್ಕೆ ಮಾಡಿಲ್ಲ: ಯತ್ನಾಳ್ ಬಾಂಬ್​

ವೇಟಿಂಗ್ ಸಿಎಂ ಕುಮ್ಮಕ್ಕಿನಿಂದ ಅಸಮಾಧಾನವನ್ನು ಹೊರಹಾಕಿದ್ದಾರೆ. MLC ಬಿ.ಕೆ.ಹರಿಪ್ರಸಾದ್​ರನ್ನು ಕೇವಲ‌ ಅಸ್ತ್ರವಾಗಿ ಬಳಸಿಕೊಳ್ಳಲಾಗಿದೆ. ಇದನ್ನೆಲ್ಲ ಗಮನಿಸಿದರೆ ಜನವರಿ ಬಳಿಕ ಕಾಂಗ್ರೆಸ್ ಸರ್ಕಾರ ಪತನ ಖಚಿತ. ನಮ್ಮ ಸಂಪರ್ಕದಲ್ಲಿಯೂ 45 ಜನ ಶಾಸಕರಿದ್ದಾರೆ ಎಂದು ಹೊಸ ಬಾಂಬ್​ ಸಿಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ್ತೆ ಯಡಿಯೂರಪ್ಪ ಅನಿವಾರ್ಯವಾದರೇ? ಅಚ್ಚರಿ ಮೂಡಿಸಿದ ಕಟೀಲ್ ಹೇಳಿಕೆ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾವು ರಾಜ್ಯ ರಾಜಕಾರಣದ ಬಗ್ಗೆ ಅಷ್ಟೇ ತಲೆಕೆಡಿಸಿಕೊಳ್ಳುತ್ತೇವೆ. ಮೈತ್ರಿ ಬಗ್ಗೆ ಬಿ.ಎಸ್​​.ಯಡಿಯೂರಪ್ಪಗೆ ಮಾಹಿತಿ ಇರಬಹುದು. ಆದಷ್ಟು ಶೀಘ್ರ ಮೈತ್ರಿ ಕುರಿತು ಅಂತಿಮ‌ ತೀರ್ಮಾನವಾಗುತ್ತದೆ. ಪ್ರತಿಯೊಂದು ಲೋಕಸಭಾ ಸ್ಥಾನವೂ ಅತ್ಯಂತ ಮಹತ್ವವಾದದ್ದು. ಒಂದೇ ಒಂದು ಮತದಿಂದ ವಾಜಪೇಯಿ ಸರ್ಕಾರ ಪತನವಾಗಿತ್ತು. ಹೀಗಾಗಿ ಯಾವುದನ್ನೂ ಸುಲಭವಾಗಿ ತೆಗೆದುಕೊಳ್ಳಲು ಸಿದ್ಧವಿಲ್ಲ. ಈ ಬಾರಿ ರಾಜ್ಯದಲ್ಲಿ 28ಕ್ಕೆ 28 ಸ್ಥಾನವನ್ನೂ ಗೆಲ್ಲುತ್ತೇವೆ ಎಂದರು.

ತಾನಾಗಿಯೇ ಸರ್ಕಾರ ಪತನವಾಗಲಿದೆ ಕಾದುನೋಡಿ. ರಾಯರೆಡ್ಡಿಯಂಥ ಹಿರಿಯರು ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಅಸಮಾಧಾನ ಹೆಚ್ಚಿದೆ. ಹೀಗಿರುವಾಗ ನಮ್ಮವರನ್ನು ಸೆಳೆಯುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಬಿಜೆಪಿ ಗಿರಾಕಿಗಳನ್ನ ತೆಗೆದುಕೊಂಡು ಕಾಂಗ್ರೆಸ್​ನವರು ಏನ್ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.