AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ಸರಿಮಾಡಿಕೊಳ್ಳಿ: ಶೆಟ್ಟರ್​ ವಿರುದ್ಧ ಮಹೇಶ್​ ಟೆಂಗಿನಕಾಯಿ ವಾಗ್ದಾಳಿ

ಜಗದೀಶ್​ ಶೆಟ್ಟರ್​ ಅವರಿಗೆ 30 ವರ್ಷ ಬಿಜೆಪಿ ಎಲ್ಲ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ. ರಾಜಕೀಯಕ್ಕೆ ಸಮುದಾಯವನ್ನು ಎಳೆದು ತರಬಾರದು ಎಂದು ಶಾಸಕ ಮಹೇಶ್​ ಟೆಂಗಿನಕಾಯಿ ಹೇಳಿದರು.

ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ಸರಿಮಾಡಿಕೊಳ್ಳಿ: ಶೆಟ್ಟರ್​ ವಿರುದ್ಧ ಮಹೇಶ್​ ಟೆಂಗಿನಕಾಯಿ ವಾಗ್ದಾಳಿ
ಶಾಸಕ ಮಹೇಶ್​ ಟೆಂಗಿನಕಾಯಿ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Sep 18, 2023 | 11:33 AM

Share

ಹುಬ್ಬಳ್ಳಿ ಸೆ.18: ಬಿಜೆಪಿಯವರು (BJP) ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ (Jagadish Shettar) ​ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಹೇಶ್​ ಟೆಂಗಿನಕಾಯಿ (Mahesh Tenginkai) ಮಾತನಾಡಿ ಬಿಜೆಪಿಯಲ್ಲಿ ಟಿಕೇಟ್ ಮಾರಟ ಪದ್ದತಿಯಿಲ್ಲ. ಮಾಜಿ ಸಿಎಂ ಹೇಗೆ ಟಿಕೆಟ್​ ತೆಗೆದುಕೊಂಡಿದ್ದರು, ಹೇಗೆ ಟಿಕೆಟ್ ಕೊಟ್ಟಿದ್ದರು ಅಂತ ಎಲ್ಲ ಗೊತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ (Congress) ಎಂಎಲ್​ಸಿ ಜಗದೀಶ್ ಶೆಟ್ಟರ್​ಗೆ ಕುಟುಕಿದರು.

ಬಿಜೆಪಿಯಲ್ಲಿ ಲಿಂಗಾಯತ ಸಮುದಾಯದ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಜಗದೀಶ್​ ಶೆಟ್ಟರ್​ ಆರೋಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಅತಿ ಹೆಚ್ಚು ಬಾರಿ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ಜಗದೀಶ್​ ಶೆಟ್ಟರ್​ ಅವರಿಗೆ 30 ವರ್ಷ ಬಿಜೆಪಿ ಎಲ್ಲ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ. ರಾಜಕೀಯಕ್ಕೆ ಸಮುದಾಯವನ್ನು ಎಳೆದು ತರಬಾರದು ಎಂದು ಹೇಳಿದರು.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಜಗದೀಶ್​ ಶೆಟ್ಟರ್​ ಗೇಮ್​ ಪ್ಲ್ಯಾನ್​: ಲಿಂಗಾಯತ ನಾಯಕರೇ ಟಾರ್ಗೆಟ್

ಕಾಂಗ್ರೆಸ್​ನಲ್ಲಿ ಜಗದೀಶ್​ ಶೆಟ್ಟರ್ ಅವರನ್ನು ಗುರುತಿಸುತ್ತಿಲ್ಲ. ಅದಕ್ಕೆ ಅವರಿಗೆ ಕಷ್ಟ ಆಗಿದೆ. ಹೀಗಾಗಿ ಅವರು ಮಾಧ್ಯಮಗಳಿಗೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಎಮ್​​ಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಬಿಜೆಪಿಯಲ್ಲಿ ಟಿಕೆಟ್​ ಮಾರಾಟ ಪದ್ಧತಿ ಇಲ್ಲ. ಚೈತ್ರಾ ಕುಂದಾಪುರ ಕೇಸ್​ಗೂ ಬಿಜೆಪಿಗೂ ಯಾವ ಸಂಬಂಧ ಇಲ್ಲ. ಕೆಲವರು ತಮ್ಮ ಚಟಕ್ಕೆ ಈ ರೀತಿ ಮಾಡಿದರೇ ಅದಕ್ಕೆ ಬಿಜೆಪಿ ಉತ್ತರ ನೀಡುವುದಿಲ್ಲ. ಇದಕ್ಕೆ ಬಿಜೆಪಿ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!