ಹುಬ್ಬಳ್ಳಿ ಸೆ.18: ಬಿಜೆಪಿಯವರು (BJP) ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginkai) ಮಾತನಾಡಿ ಬಿಜೆಪಿಯಲ್ಲಿ ಟಿಕೇಟ್ ಮಾರಟ ಪದ್ದತಿಯಿಲ್ಲ. ಮಾಜಿ ಸಿಎಂ ಹೇಗೆ ಟಿಕೆಟ್ ತೆಗೆದುಕೊಂಡಿದ್ದರು, ಹೇಗೆ ಟಿಕೆಟ್ ಕೊಟ್ಟಿದ್ದರು ಅಂತ ಎಲ್ಲ ಗೊತ್ತಿದೆ ಎಂದು ಪರೋಕ್ಷವಾಗಿ ಕಾಂಗ್ರೆಸ್ (Congress) ಎಂಎಲ್ಸಿ ಜಗದೀಶ್ ಶೆಟ್ಟರ್ಗೆ ಕುಟುಕಿದರು.
ಬಿಜೆಪಿಯಲ್ಲಿ ಲಿಂಗಾಯತ ಸಮುದಾಯದ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂಬ ಜಗದೀಶ್ ಶೆಟ್ಟರ್ ಆರೋಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ಅತಿ ಹೆಚ್ಚು ಬಾರಿ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ. ಜಗದೀಶ್ ಶೆಟ್ಟರ್ ಅವರಿಗೆ 30 ವರ್ಷ ಬಿಜೆಪಿ ಎಲ್ಲ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ. ರಾಜಕೀಯಕ್ಕೆ ಸಮುದಾಯವನ್ನು ಎಳೆದು ತರಬಾರದು ಎಂದು ಹೇಳಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಗೇಮ್ ಪ್ಲ್ಯಾನ್: ಲಿಂಗಾಯತ ನಾಯಕರೇ ಟಾರ್ಗೆಟ್
ಕಾಂಗ್ರೆಸ್ನಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಗುರುತಿಸುತ್ತಿಲ್ಲ. ಅದಕ್ಕೆ ಅವರಿಗೆ ಕಷ್ಟ ಆಗಿದೆ. ಹೀಗಾಗಿ ಅವರು ಮಾಧ್ಯಮಗಳಿಗೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಎಮ್ಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣ ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಬಿಜೆಪಿಯಲ್ಲಿ ಟಿಕೆಟ್ ಮಾರಾಟ ಪದ್ಧತಿ ಇಲ್ಲ. ಚೈತ್ರಾ ಕುಂದಾಪುರ ಕೇಸ್ಗೂ ಬಿಜೆಪಿಗೂ ಯಾವ ಸಂಬಂಧ ಇಲ್ಲ. ಕೆಲವರು ತಮ್ಮ ಚಟಕ್ಕೆ ಈ ರೀತಿ ಮಾಡಿದರೇ ಅದಕ್ಕೆ ಬಿಜೆಪಿ ಉತ್ತರ ನೀಡುವುದಿಲ್ಲ. ಇದಕ್ಕೆ ಬಿಜೆಪಿ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ