ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ನಿಂತು ಗುಡುಗಿದ ಬಿಜೆಪಿ ಶಾಸಕ ಯತ್ನಾಳ್, ಪ್ರಮೋದ್ ಮುತಾಲಿಕ್
ಹುಬ್ಬಳ್ಳಿಯ ವಿವಾದಿತ ಈದ್ಗಾ ಮೈದಾನದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಕೊನೆಯ ದಿನವಾದ ಇಂದು ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಈ ಮೆರವಣಿಯಲ್ಲಿ ಭಾಗಿಯಾದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅಬ್ಬರದ ಭಾಷಣ ನಡೆಸಿದರು. ನಂತರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೈದಾನಕ್ಕೆ ಈದ್ಗಾ ಮೈದಾನ ಅಂದರೆ ಸಾಬರಿಗೆ ಹುಟ್ಟಿದಂತೆ, ಈ ಮೈದಾನಕ್ಕೆ ರಾಣಿ ಚೆನ್ನಮ್ಮ ಮೈದಾನ ಎಂದು ಹೇಳಬೇಕೆಂದರು.
ಹುಬ್ಬಳ್ಳಿ, ಸೆ.21: ಮೈದಾನಕ್ಕೆ ಈದ್ಗಾ ಮೈದಾನ ಅಂದರೆ ಅವರು ಸಾಬರಿಗೆ ಹುಟ್ಟಿದಂತೆ. ಈ ಮೈದಾನವನ್ನ ರಾಣಿ ಚೆನ್ನಮ್ಮ ಮೈದಾನ ಎಂದು ಹೇಳುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ (Basangouda Patil Yatnal) ಹೇಳಿದ್ದಾರೆ. ಮೈದಾನದಲ್ಲಿ ಪ್ರತಿಷ್ಠಾಪಿಸಿದ ಗಣೇಶನ ಮೂರ್ತಿ ವಿಸರ್ಜನೆ ಮೆರವಣಿಕೆಯಲ್ಲಿ ಮಾತನಾಡಿದ ಅವರು, ಇದೇ ಮೈದಾನದಲ್ಲಿ ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ ಎಂದರು.
ತೆರೆದ ವಾಹನದಲ್ಲಿ ಮಾತನಾಡಿದ ಅವರು, 2024ರಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿ ಆಗುತ್ತಾರೆ. ಪಾಕಿಸ್ತಾನದ ಲಾಹೋರ್ನಲ್ಲೂ ಗಣಪತಿ ಮೂರ್ತಿ ಕೂರಿಸುತ್ತೇವೆ. ಪಾಕಿಸ್ತಾನ ದಾಟಿ ಅಫ್ಘಾನಿಸ್ತಾನ ಬಾರ್ಡರ್‌ವರೆಗೂ ಹೋಗುತ್ತೇವೆ. ನಮ್ಮ ದೇಶದಲ್ಲಿ ರಾಷ್ಟ್ರಧ್ವಜ ಹಾರಿಸಲು ಈ ಮಕ್ಕಳ ಅನುಮತಿ ಬೇಕಂತೆ. ನಾವು ಚಂದ್ರನ ಮೇಲೆ ರಾಷ್ಟ್ರಧ್ವಜ ಹಾರಿಸಿ ಬಂದಿದ್ದೇವೆ. ಪಾಕಿಸ್ತಾನದಲ್ಲಿ ತಿನ್ನೋಕೆ ಅನ್ನಾ ಇಲ್ಲ, ಪಾಕಿಸ್ತಾನ್ ಜಿಂದಾಬಾದ್ ಅಂತಾರೆ. ಸನಾತನ ಧರ್ಮಕ್ಕೆ ರೋಗ ಅಂತ ಡಿಎಮ್‌ಕೆ ಮುಖಂಡ ಹೇಳುತ್ತಾನೆ. ಸನಾತನ ಧರ್ಮವನ್ನು ವಿರೋಧಿಸುವವರೆಲ್ಲರಿಗೆ ಏಡ್ಸ್ ಬರುತ್ತದೆ. ನರೇಂದ್ರ ಮೋದಿಯವರನ್ನು ವಿರೋಧಿಸುವವರೆಲ್ಲಾ ದೇಶದ್ರೋಹಿಗಳು ಎಂದರು.
ಮಸೀದಿಯಲ್ಲಿ ಗಣೇಶ ಕೂರಿಸುತ್ತೇವೆ: ಮುತಾಲಿಕ್
ಮೂರು ದಿನ ಯಾವುದೇ ಗೊಂದಲ್ಲ ಇಲ್ಲದೆ ಗಣೇಶ ಪ್ರತಿಷ್ಠಾಪನೆಯಾಗಿದೆ. ಹಿಂದೂ ಸಮಾಜ ಶಾಂತಿಯಿಂದ ಆಚರೆಣೆ ಮಾಡಿದೆ. ಸದ್ಯ ಈದ್ಗಾ ಮೈದಾನ ಶುದ್ದಿಯಾಗಿದೆ ಎಂದು ಹೇಳಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಗಣೇಶ ಉತ್ಸವಕ್ಕೆ ವಿರೋಧ ಮಾಡಿದವರು ದೇಶ ವಿರೋಧಿಗಳು, ಅಧರ್ಮಿಯರು. ನಾವು ಅದನ್ನು ಮೆಟ್ಟಿ ನಿಂತು ಆಚರಣೆ ಮಾಡಿದ್ದೇವೆ ಎಂದರು.
ಇದನ್ನೂ ಓದಿ: ಕಳ್ಳರಿಗಿಂತ ಊರ ಕಳ್ಳರು ಕಾಂಗ್ರೆಸ್ನಲ್ಲಿದಾರೆ: ಶಾಸಕ ಯತ್ನಾಳ್ ವಾಗ್ದಾಳಿ
ಅಂಜುಮನ್ ಕಮೀಟಿಯವರು ನೀಚರು ಎಂದ ಮುತಾಲಿಕ್, ಹಿಂದೂ ಸಮಾಜವನ್ನು ಕೆಣಕಿದರೆ ನಾವು ಮಸೀದಿಯಲ್ಲಿ ಗಣಪತಿ ಕೂರಸುತ್ತೇವೆ. ಮಸೀದಿಯಲ್ಲಿ ಗಣೇಶ ಕೂರಿಸುವ ತಾಕತ್ತು ನಮಗಿದೆ. ನಾವು 100 ಕೋಟಿ ಹಿಂದೂಗಳಿದ್ದೇವೆ. ಅಂಜುಮನ್ ಕೋರ್ಟ್ಗೆ ಹೋಗುತ್ತೇವೆ ಅನ್ನೋದು ಸರಿ ಅಲ್ಲ. ನಿಮ್ಮ ಸೊಕ್ಕು ಸರಿ ಅಲ್ಲ. ಇದೇನು ಪಾಕಿಸ್ತಾನ ಅಲ್ಲ, ಅಫಘಾನಿಸ್ತಾನ ಅಲ್ಲ. ಇದು ನಮ್ಮ ನೆಲ, ಮೈದಾನ ಪಾಲಿಕೆ ಆಸ್ತಿ ಎಂದು ಹೇಳಿದೆ. ಅಕಸ್ಮಾತ್ ನೀವು ಕೋರ್ಟ್ಗೆ ಹೋಗುತ್ತೆನೆ ಅನ್ನೋದೇ ಆದರೆ ನಾವು ನಮಾಜ್ ವಿರುದ್ಧ ಕೋರ್ಟ್ ಮೆಟ್ಟಿಲು ಹತ್ತುತ್ತೇವೆ ಎಂದರು.
ನಿನ್ನೆ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಯೂಸುಫ್ ಸವಣೂರ ಅವರು ಕೇಸ್ ಇನ್ನು ಮುಗಿದಲ್ಲ, ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದರು. ಸದ್ಯ ಅಂಜುಮನ್ ಅಧ್ಯಕ್ಷರಿಗೆ ನಾವು ನಮಾಜ್ ವಿಷಯಕ್ಕೆ ಕೋರ್ಟ್ಗೆ ಹೋಗಬೇಕಾಗತ್ತದೆ ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ