56000 ಬಾಕಿ ಪ್ರಕರಣ ಬಿಟ್ಟು ಹುಬ್ಬಳ್ಳಿ ಕಡೆ ತಲೆಹಾಕಿದ್ದೇಕೆ: ಕಾಂಗ್ರೆಸ್ ಸರ್ಕಾರಕ್ಕೆ ಆರ್ ಅಶೋಕ ಪ್ರಶ್ನೆ
ವೇದಿಕೆ ಮೇಲೆ ನಿಂತು ಸಿಎಂ ಸಿದ್ದರಾಮಯ್ಯ ವಿರುದ್ಧ ದಿಕ್ಕಾರ ಕೂಗಿ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ‘ಮಾತಾ ಮಾತಾ ಭಾರತ ಮಾತಾ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ವಿರುದ್ಧ ಧಿಕ್ಕಾರ ಕೂಗಿದರು.
ಧಾರವಾಡ, ಜನವರಿ 3: ಹುಬ್ಬಳ್ಳಿಯ (Hubballi) ಕರಸೇವಕ ಶ್ರೀಕಾಂತ್ ಪೂಜಾರಿ (Srikanth Poojari) ಬಂಧನ ವಿರೋಧಿಸಿ ಬಿಜೆಪಿ ಇಂದು (ಬುಧವಾರ) ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಹುಬ್ಬಳ್ಳಿಯ ಶಹರ ಠಾಣೆ ಎದುರು ಪ್ರತಿಪಕ್ಷ ನಾಯಕ ಆರ್. ಅಶೋಕ (R Ashoka) ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಆರ್ ಅಶೋಕ, ರಾಮ ಭಕ್ತರನ್ನು ಬಂಧಿಸುವ ಹುನ್ನಾರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 56,000 ಪೆಂಡಿಂಗ್ ಕೇಸ್ಗಳು ಇವೆ. ಆದರೆ, ಅವೆಲ್ಲವನ್ನು ಬಿಟ್ಟು ಹುಬ್ಬಳ್ಳಿ ಕಡೆ ಬಂದಿರೋದು ಯಾಕೆ? ಕರಸೇವಕರನ್ನು ಹುಡುಕಿ ಬಂಧನ ಮಾಡಿದ್ದು ನ್ಯಾಯವಾ? ರಾಮನ ಮೇಲೆ ಕಾಂಗ್ರೆಸ್ಗೆ ಕೋಪ ಏಕೆ ಎಂದು ಅಶೋಕ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ಚೀಟಿಂಗ್ ಕೇಸ್ ಇಲ್ವಾ ಎಂದು ಪ್ರಶ್ನಿಸಿದ ಅಶೋಕ, ಹಿಂದೂ ಕಾರ್ಯಕರ್ತರನ್ನು ಹುಡುಕಿ ಹುಡುಕಿ ಕೇಸ್ ಹಾಕುತ್ತಿದ್ದಾರೆ. ಕೂಡಲೇ ಜೈಲಿನಿಂದ ಶ್ರೀಕಾಂತ ಪೂಜಾರಿ ಬಿಡುಗಡೆ ಮಾಡಬೇಕು. ನನ್ನ ಮೇಲೂ ಕೇಸ್ ಇದೆ ಬಂಧಿಸಿ ನೋಡೋಣ ಎಂದು ಸರ್ಕಾರಕ್ಕೆ ಸವಾಲೆಸೆದರು.
ಸೋಲುವ ಭಯದಿಂದ ಕಾಂಗ್ರೆಸ್ನವರು ಹೀಗೆ ಮಾಡುತ್ತಿದ್ದೀರಾ ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಯಾರು ಈ ಶ್ರೀಕಾಂತ್ ಪೂಜಾರಿ? ರಾಮ ಜನ್ಮಭೂಮಿ ಹೋರಾಟಗಾರನ ಹಿನ್ನೆಲೆ ಇಲ್ಲಿದೆ ನೋಡಿ
ರಾಮ ಭಕ್ತರಾಗಿ ಬಂದಿದ್ದೇವೆ, ಆಂಜನೇಯ ಆಗಿಸಬೇಡಿ: ಅಶೋಕ
ವೇದಿಕೆ ಮೇಲೆ ನಿಂತು ಸಿಎಂ ಸಿದ್ದರಾಮಯ್ಯ ವಿರುದ್ಧ ದಿಕ್ಕಾರ ಕೂಗಿ ಆರ್ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ‘ಮಾತಾ ಮಾತಾ ಭಾರತ ಮಾತಾ’ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು, ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ವಿರುದ್ಧ ಧಿಕ್ಕಾರ ಕೂಗಿದರು. ನಾವು ರಾಮ ಭಕ್ತರಾಗಿ ಬಂದಿದ್ದೇವೆ, ಆಂಜನೇಯ ಆಗೋಕೆ ಬಿಡಬೇಡಿ ಎಂದು ಅಶೋಕ ಅವರು ಪೊಲೀಸರಿಗೆ, ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ