Jagadish Shettar: ಸ್ವಾಭಿಮಾನಕ್ಕೆ ಧಕ್ಕೆ ಬಂದರೂ ಸಚಿವನಾಗಿ ಮುಂದುವರಿಯಬೇಕೇ? ಜಗದೀಶ್ ಶೆಟ್ಟರ್ ಆಕ್ರೋಶ

Karnataka Politics: ಸದ್ಯ ನಾನು ಶಾಸಕನಾಗಿದ್ದೇನೆ. ಮಂತ್ರಿ ಇಲ್ಲದಿದ್ರೂ ಅಭಿವೃದ್ಧಿ ಕೆಲಸ ಮಾಡಬಹುದು. ಶಾಸಕನಾಗಿಯೇ ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದು ಅವರು ಹೇಳಿದ್ದು, ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

Jagadish Shettar: ಸ್ವಾಭಿಮಾನಕ್ಕೆ ಧಕ್ಕೆ ಬಂದರೂ ಸಚಿವನಾಗಿ ಮುಂದುವರಿಯಬೇಕೇ? ಜಗದೀಶ್ ಶೆಟ್ಟರ್ ಆಕ್ರೋಶ
ಜಗದೀಶ್ ಶೆಟ್ಟರ್ (ಸಂಗ್ರಹ ಚಿತ್ರ)
Follow us
TV9 Web
| Updated By: guruganesh bhat

Updated on:Jul 29, 2021 | 9:40 PM

ಹುಬ್ಬಳ್ಳಿ: ಹುಬ್ಬಳ್ಳಿ ಆರ್​ಎಸ್​ಎಸ್​ ಕಚೇರಿ ಭೇಟಿ ಬಳಿಕ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಲ್ಲಿ ಅಸಮಾಧಾನ ಸ್ಫೋಟವಾಗಿದೆ. ‘ಸ್ವಾಭಿಮಾನಕ್ಕೆ ಧಕ್ಕೆ ಬಂದರೂ ಸಚಿವರಾಗಿ ಮುಂದುವರಿಯಬೇಕಾ? ಮುಂದುವರಿಯುವುದಕ್ಕೆ ಸಾಧ್ಯವೇ ಇಲ್ಲ. ಸ್ವಾಭಿಮಾನ ಬಿಟ್ಟು ಹೇಗೆ ಸಂಪುಟ ಸೇರಲಿ ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಅವರು ಪ್ರಶ್ನಿಸಿದ್ದಾರೆ.

ಸದ್ಯ ನಾನು ಶಾಸಕನಾಗಿದ್ದೇನೆ. ಮಂತ್ರಿ ಇಲ್ಲದಿದ್ರೂ ಅಭಿವೃದ್ಧಿ ಕೆಲಸ ಮಾಡಬಹುದು. ಶಾಸಕನಾಗಿಯೇ ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದು ಅವರು ಹೇಳಿದ್ದು, ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಅವರ ಅಸಮಾಧಾನ ಸ್ಫೋಟದಿಂದ ಬಿಜೆಪಿಯಲ್ಲಿ ಬೇಗುದಿ ಇನನ್ಷ್ಟು ಹೆಚ್ಚಿಸುವ ಸಾಧ್ಯತೆ ವ್ಯಕ್ತವಾಗಿದೆ.

ಜಗದೀಶ್ ಶೆಟ್ಟರ್​ ಮೇಲೆ ನಮಗೆ ಅಪಾರ ಪ್ರೀತಿ, ವಿಶ್ವಾಸವಿದೆ ರಾತ್ರಿ 9 ಗಂಟೆಯೊಳಗೆ ವಿಮಾನ ಹೊರಡಬೇಕೆಂದು ಹೇಳಿದರು. ಹಾಗಾಗಿ ಜಗದೀಶ್ ಶೆಟ್ಟರ್​ ನಿವಾಸಕ್ಕೆ ಭೇಟಿ ನೀಡಲಾಗಿಲ್ಲ. ಜಗದೀಶ್ ಶೆಟ್ಟರ್​ ಮೇಲೆ ನಮಗೆ ಅಪಾರ ಪ್ರೀತಿ, ವಿಶ್ವಾಸವಿದೆ. ಜಗದೀಶ್​ ಶೆಟ್ಟರ್​ ಜತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ಅವರು ಬೆಂಗಳೂರಿಗೆ ಬಂದ ಮೇಲೆ ಭೇಟಿಯಾಗುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಸಂಪುಟ ಸೇರಲ್ಲ ಎಂದಿದ್ದ ಜಗದೀಶ್ ಶೆಟ್ಟರ್ ಹಿಂದೆ ನಾನು ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡಿದ್ದೇನೆ. ತಳಮಟ್ಟದಿಂದ ಮೇಲ್ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ವರಿಷ್ಠರು ಜವಾಬ್ದಾರಿ ಕೊಟ್ಟರೆ ನಿರ್ವಹಿಸುತ್ತೇನೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಡಿಯೋಗೂ ನನ್ನ ನಿರ್ಧಾರಕ್ಕೂ ಸಂಬಂಧವಿಲ್ಲ. ನೈತಿಕ ಕಾರಣದಿಂದ ನಾನು ಸಂಪುಟಕ್ಕೆ ಸೇರುವುದಿಲ್ಲ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನನ್ನ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ಗಮನಕ್ಕೆ ತಂದಿದ್ದೇನೆ ಎಂದೂ ಅವರು ಹೇಳಿದ್ದರು.

ಇದನ್ನೂ ಓದಿ: 

ಗಣೇಶ ಹಬ್ಬದ ನಂತರ ವಾರಕ್ಕೊಮ್ಮೆ ಜಿಲ್ಲಾ ಪ್ರವಾಸ, ಸಚಿವ ಸಂಪುಟ ರಚನೆಯಲ್ಲಿ ಮಧ್ಯಪ್ರವೇಶಿಸಲ್ಲ: ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

Jagadish Shettar: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ನಾನು ಸೇರಲ್ಲ: ಜಗದೀಶ್ ಶೆಟ್ಟರ್

(BJP Senior leader Jagadish Shettar asks Should he continue to be a minister despite his self esteem)

Published On - 9:32 pm, Thu, 29 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್