ಹುಬ್ಬಳ್ಳಿಯ ಮೋದಿ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರಿಗೂ ಎಂಟ್ರಿ ಇಲ್ಲ; ಬಿಜೆಪಿ ನೀಡಿದ ಕಾರಣವಿದು

ಬಿಎಸ್ ಯಡಿಯೂರಪ್ಪ ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗಿನ ಭಿನ್ನಾಭಿಪ್ರಾಯದ ವರದಿಗಳನ್ನು ಅನೇಕ ಸಂದರ್ಭಗಳಲ್ಲಿ ತಳ್ಳಿಹಾಕಿದ್ದಾರೆ.

ಹುಬ್ಬಳ್ಳಿಯ ಮೋದಿ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರಿಗೂ ಎಂಟ್ರಿ ಇಲ್ಲ; ಬಿಜೆಪಿ ನೀಡಿದ ಕಾರಣವಿದು
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪImage Credit source: Twitter
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 12, 2023 | 5:51 PM

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ರಾಷ್ಟ್ರೀಯ ಯುವಜನೋತ್ಸವ (National Youth Festival) ಕಾರ್ಯಕ್ರಮದಲ್ಲಿ ಕರ್ನಾಟಕದ ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಆಹ್ವಾನವನ್ನೇ ನೀಡಿಲ್ಲ. ಇದು ಸರ್ಕಾರಿ ಕಾರ್ಯಕ್ರಮವಾದ್ದರಿಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಆಹ್ವಾನ ನೀಡಿಲ್ಲ ಎಂದು ಬಿಜೆಪಿ ಸ್ಪಷ್ಟನೆ ನೀಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಬಿಎಸ್​ ಯಡಿಯೂರಪ್ಪನವರಿಗೆ ಯಾವುದೇ ಸ್ಥಾನವಿಲ್ಲ. ಹೀಗಾಗಿ, ಅವರಿಗೆ ಆಹ್ವಾನ ನೀಡಿಲ್ಲ. ಇತ್ತೀಚೆಗೆ ಮಂಡ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಬಿಜೆಪಿ ಕಾರ್ಯಕ್ರಮದ ಸಮಯದಲ್ಲಿ ಕೂಡ ಬಿಎಸ್​ವೈ ವಿದೇಶದಲ್ಲಿದ್ದ ಕಾರಣ ಅವರಿಗೆ ಆಹ್ವಾನ ನೀಡಿರಲಿಲ್ಲ.

ಆದರೆ, ಯಡಿಯೂರಪ್ಪ ಅವರು ಬಿಜೆಪಿಯಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎಂಬ ಸುದ್ದಿಯನ್ನು ಪದೇ ಪದೇ ತಳ್ಳಿಹಾಕುತ್ತಿದ್ದಾರೆ. ನನಗೆ ನನ್ನದೇ ಆದ ಶಕ್ತಿ ಇದೆ, ನನ್ನನ್ನು ರಾಜಕೀಯವಾಗಿ ಯಾರೂ ಮುಗಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: National Youth Festival 2023 Live: ರಾಷ್ಟ್ರೀಯ ಯುವಜನೋತ್ಸವಕ್ಕೆ ಚಾಲನೆ: ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭ

ಬಿಎಸ್ ಯಡಿಯೂರಪ್ಪ ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗಿನ ಭಿನ್ನಾಭಿಪ್ರಾಯದ ವರದಿಗಳನ್ನು ಅನೇಕ ಸಂದರ್ಭಗಳಲ್ಲಿ ತಳ್ಳಿಹಾಕಿದ್ದಾರೆ. ಬಿಜೆಪಿಯು ಯಡಿಯೂರಪ್ಪ ಅವರನ್ನು ಬಿಟ್ಟು ಮತ್ತೊಬ್ಬ ಲಿಂಗಾಯತ ನಾಯಕರಾದ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು, ಯಡಿಯೂರಪ್ಪ ಅವರನ್ನು ಪಕ್ಷದಿಂದ ನಿರ್ಲಕ್ಷಿಸಲಾಗುತ್ತಿದೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡಿತ್ತು.

ಆದರೆ ಯಡಿಯೂರಪ್ಪನವರನ್ನು ಕಳೆದ ವರ್ಷ ಬಿಜೆಪಿಯ ಉನ್ನತ ಆಡಳಿತ ಮಂಡಳಿ, ಸಂಸದೀಯ ಮಂಡಳಿ ಮತ್ತು ಅದರ ಕೇಂದ್ರ ಚುನಾವಣಾ ಸಮಿತಿಗೆ ನೇಮಿಸಲಾಗಿತ್ತು. ಯಡಿಯೂರಪ್ಪ ಅವರನ್ನು ಈ ಸಮಿತಿಗಳಿಗೆ ನೇಮಿಸುವ ಕ್ರಮವು ಕರ್ನಾಟಕದ ಬಿಜೆಪಿ ನಾಯಕರಿಗೆ ಆಶ್ಚರ್ಯವನ್ನುಂಟುಮಾಡಿತ್ತು. ಯಡಿಯೂರಪ್ಪನವರ ಪರವಾಗಿ ಬಿಜೆಪಿಯು ಮುಂಬರುವ ವಿಧಾನಸಭೆ ಚುನಾವಣೆಗೆ ಪ್ರಭಾವಿ ಲಿಂಗಾಯತ ಸಮುದಾಯದ ಮೇಲೆ ತನ್ನ ಹಿಡಿತವನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ರೋಡ್‌ಶೋ ವೇಳೆ ಭದ್ರತಾ ಲೋಪ; ಯುವಕನನ್ನು ಸೆರೆಹಿಡಿಯಲು ಬಲೆ ಬೀಸಿದ ಪೊಲೀಸ್

ಹುಬ್ಬಳ್ಳಿಯ ರೈಲ್ವೇ ಸ್ಪೋರ್ಟ್ಸ್ ಗ್ರೌಂಡ್‌ನಲ್ಲಿ ಪ್ರಧಾನಿ ಮೋದಿ ಉತ್ಸವವನ್ನು ಉದ್ಘಾಟಿಸಿದ್ದು, ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಸಿಂಗ್ ಠಾಕೂರ್ ಸೇರಿದಂತೆ ಇತರರು ಭಾಗವಹಿಸಿದ್ದಾರೆ. ಈ ಉದ್ಘಾಟನಾ ಕಾರ್ಯಕ್ರಮದ ನಂತರ ಪ್ರಧಾನಿ ನವದೆಹಲಿಗೆ ತೆರಳಲಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 16ರವರೆಗೆ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ 26ನೇ ಆವೃತ್ತಿಯನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಆಯೋಜಿಸುತ್ತಿದೆ. ರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭಾವಂತ ಯುವಕರಿಗೆ ಮಾನ್ಯತೆ ನೀಡಲು, ರಾಷ್ಟ್ರ ನಿರ್ಮಾಣದತ್ತ ಅವರನ್ನು ಪ್ರೇರೇಪಿಸಲು ಪ್ರತಿ ವರ್ಷ ಉತ್ಸವವನ್ನು ನಡೆಸಲಾಗುತ್ತದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Thu, 12 January 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?