AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ, ಮುತಾಲಿಕ್​ ವಾಗ್ದಾಳಿ

ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್​ ಕೊಲೆ ಮಾಡಿದ್ದನು. ಕೊಲೆ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಆರೋಪಿ ಫಯಾಜನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಶ್ರೀರಾಮಸೇನೆ ಸ್ಥಾಪಕ ಪ್ರಮೋದ್​ ಮುತಾಲಿಕ್​ ವಾಗ್ದಾಳಿ ಮಾಡಿದರು.

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಬೊಮ್ಮಾಯಿ, ಮುತಾಲಿಕ್​ ವಾಗ್ದಾಳಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಶಿವಕುಮಾರ್ ಪತ್ತಾರ್
| Updated By: ವಿವೇಕ ಬಿರಾದಾರ|

Updated on: Apr 19, 2024 | 12:18 PM

Share

ಹುಬ್ಬಳ್ಳಿ, ಏಪ್ರಿಲ್​ 19: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಎಲ್ಲ ಕಡೆ ಕೊಲೆಗಳು ಸಾಮಾನ್ಯ ​ ಆಗಿದೆ. ಗದಗನಲ್ಲಿ (Gadag) ಗುರುವಾರ ನಾಲ್ವರ ಕೊಲೆ ಆಗಿದೆ. ಬೆಂಗಳೂರಿನಲ್ಲಿಯೂ (Bengaluru) ಇಬ್ಬರ ಕೊಲೆಯಾಗಿದೆ.​ ಹಲವಾರು ತಿಂಗಳಿನಿಂದ ಇಂಥಹ ಘಟನೆಗಳು ನಡೆಯುತ್ತಿವೆ. ರೌಡಿಗಳಿಗೆ ಪೊಲೀಸರ ಮೇಲೆ ಭಯ ಇಲ್ಲದಂತಾಗಿದೆ. ರೌಡಿಗಳಿಗೆ, ಗೂಂಡಾಗಳಿಗೆ ರಾಜ ಮರ್ಯಾದೆ ಸಿಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai)  ಕಿಡಿ ಕಾರಿದರು. ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಸಂಭವಿಸಿದ ನೇಹಾ ಹಿರೇಮಠ ಕೊಲೆ ಪ್ರಕರಣದ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಒಂದು ಟ್ವೀಟ್ ಮಾಡಿದರೆ ಜವಾಬ್ದಾರಿ ಮುಗಿಯಲ್ಲ. ನೇಹಾ ಕೊಲೆ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ಆದರೆ, ಇಲ್ಲಿಯ ಪೊಲೀಸರಿಂದ ಸರಿಯಾಗಿ ತನಿಖೆ ಆಗುವುದಿಲ್ಲ. ಏಕೆಂದರೆ ಪೊಲೀಸರು ನಿಷ್ಕ್ರಿಯರಾಗಿದ್ದಾರೆ. ಹೀಗಾಗಿ ಎಸ್​ಐಟಿ ರಚಿಸಬೇಕು ಎಂದರು.

ಹಾಗೇ ಬಿಟ್ಟರೆ ನಮ್ಮ ರಾಜ್ಯ ಮತ್ತೊಂದು ಬಿಹಾರ ಆಗುತ್ತೆ. ತಮ್ಮ ಮಕ್ಕಳು ಎಷ್ಟು ಸುರಕ್ಷಿತರಿದ್ದಾರೆ ಅನ್ನೋ ಆತಂಕ ಪಾಲಕರಿಗೆ ಶುರುವಾಗಿದೆ. ರಾಜ್ಯದಲ್ಲಿ ರಾತ್ರೋರಾತ್ರಿ ನಾಲ್ಕಾರು ಜನರು ಕೊಲೆಯಾಗುತ್ತಾರೆ ಅಂದರೆ ಏನು? ಪೊಲೀಸರು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಐಸಿಸ್ ಮಾದರಿಯಲ್ಲೇ ಯುವತಿ ಕೊಲೆ: ಮುತಾಲಿಕ್​

ಪ್ರಮೋದ್​ ಮುತಾಲಿಕ್​

ಲವ್ ಮಾಡಿ ಮತಾಂತರ ಮಾಡುವುದಕ್ಕೆ ಮುಂದಾಗಿದ್ದನು. ಲವ್ ಜಿಹಾದ್ ಯಶಸ್ವಿಯಾಗಲಿಲ್ಲ ಅಂತ ಹತ್ಯೆಗೈದಿದ್ದಾನೆ. ಎಲ್ಲಿಯವರೆಗೆ ಕಾಂಗ್ರೆಸ್ ಇರುತ್ತೋ ಹೀಗೆ ಕೊಲೆಗಳಾಗುತ್ತವೆ. ಐಸಿಸ್ ಮಾದರಿಯಲ್ಲೇ ಯುವತಿ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಚಾಕು ಹಾಕಲು ಆರೋಪಿ ಎಲ್ಲೋ ತರಬೇತಿ ಪಡೆದಿದ್ದಾನೆ ಕಾಂಗ್ರೆಸ್ ಬೆಳೆಸಿದ ವಿಷ ಬೀಜವಿದು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್ ವಾಗ್ದಾಳಿ ಮಾಡಿದರು.

ಕೊಲೆ ಎನ್ನುವುದು ಇಸ್ಲಾಮ್‌ನಲ್ಲಿ ಸಹಜ ಪ್ರಕ್ರಿಯೆಯಾಗಿದೆ. ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲ ಎನ್ನುವಂತಾಗಿದೆ. ಸ್ವಾತಂತ್ರ್ಯ ದೊರೆಯುವುದಕ್ಕಿಂತ ಮುಂಚೆ ಕಾಂಗ್ರೆಸ್ ಬ್ರಿಟೀಷರ ಪರವಿದ್ದರು. ಈಗ ಮುಸ್ಲೀಮರು, ಕೊಲೆಗಡುಕರ ಪರ‌ ಇದ್ದಾರೆ. ಮುಖ್ಯಮಂತ್ರಿಗಳಿಗೆ ನಿಜವಾಗಿ ಕಳಕಳಿ ಇದ್ದರೆ ಕೊಲೆಗಡುಕನನ್ನು ಎನ್ಕೌಂಟರ್ ಮಾಡಿಸಬೇಕು. ಕೊಲೆಗಡುಕನ ಮನೆಗೆ ಬುಲ್ಡೋಜರ್ ಹಚ್ಚಿ ಕಿತ್ತು ಬಿಸಾಕಬೇಕು. ಜಮಾತೆ ಇಸ್ಲಾಮಿನವರು ಕೂಡಲೆ ಫತ್ವಾ ಹೊರಡಿಸಿ ಮನೆ ಬಹಿಷ್ಕರಿಸಬೇಕು. ವಕೀಲರು ಅವನ ಪರ ನಿಲ್ಲಬಾರದು ಎಂದರು.

ಇದನ್ನೂ ಓದಿ: ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್​

ಘಟನೆ ಖಂಡಿ ಹುಬ್ಬಳ್ಳಿ, ಬೆಳಗಾವಿಯಲ್ಲಿ ಪ್ರತಿಭಟನೆ

ನೇಹಾ ಹಿರೇಮಠ ಹತ್ಯೆ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್​ (ABVP) ಹುಬ್ಬಳ್ಳಿಯಲ್ಲಿ ಕಾಲೇಜುಗಳಿಗೆ ಬಂದ್​ ಕರೆ ನೀಡಿದೆ. ನೇಹಾ ಕೊಲೆಯಾದ ಬಿವಿಬಿ ಕಾಲೇಜಿನಿಂದ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಕೊಲೆ ಆರೋಪಿ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿ ಮುನವಳ್ಳಿ ಗ್ರಾಮದಲ್ಲಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಗೋಕಾಕ್​-ಧಾರವಾಡ ಹೆದ್ದಾರಿ ಬಂದ್​ ಮಾಡಿದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ