ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೂತನ ಸದಸ್ಯರು ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡ್ತಾರಾ, ಇಲ್ವಾ!?

hubballi dharwad corporation: ಈ ಬಗ್ಗೆ ಟಿವಿ-9 ಡಿಜಿಟಲ್ ಗೆ ಪ್ರತಿಕ್ರಿಯೆ ನೀಡಿರುವ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ್, ಪಾಲಿಕೆಯ ಸಾರ್ವತ್ರಿಕ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರ ಹೆಸರು ಸರಕಾರದ ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಗೊಂಡಿದೆ. ಅವರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹಾಗಾಗಿ ಅವರು ಪಾಲಿಕೆಯ ಅಧಿಕೃತ ಸದಸ್ಯರಾಗಿಲ್ಲ. ಇದೀಗ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸಾಮಾನ್ಯ ಸಭೆ ನಡೆಸುವ ಸಾಧ್ಯತೆಗಳನ್ನು ಸರಕಾರವೇ ನಿರ್ಧರಿಸಬೇಕು ಅನ್ನುತ್ತಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೂತನ ಸದಸ್ಯರು ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡ್ತಾರಾ, ಇಲ್ವಾ!?
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 15, 2021 | 12:34 PM

ಇದೀಗ ರಾಜ್ಯದಲ್ಲಿ‌ 25 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಅದರಲ್ಲಿ ಮತದಾನದ ಹಕ್ಕು ಚಲಾಯಿಸುವವರು ಸ್ಥಳೀಯ ಸಂಸ್ಥೆಗಳ ಸದಸ್ಯರು. ಆದರೆ ಇತ್ತೀಚಿಗಷ್ಟೇ ನಡೆದಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (hubballi dharwad corporation) ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರು ಈ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆಯೇ ಅನ್ನೋ ಪ್ರಶ್ನೆ ಎದ್ದಿದೆ. ಏಕೆಂದರೆ ಈ ಚುನಾಯಿತ ಸದಸ್ಯರು ಇದುವರೆಗೂ ಪ್ರಮಾಣ ವಚನ ಸ್ವೀಕರಿಸಿಯೇ ಇಲ್ಲ. ಇದೇ ಕಾರಣಕ್ಕೆ ವಿಧಾನ ಪರಿಷತ್ ಚುನಾವಣೆಯಲ್ಲಿ (legislative council elections) ಇವರು ಮತ ಚಲಾವಣೆ ಮಾಡುತ್ತಾರೋ ಇಲ್ಲವೋ ಅನ್ನುವ ಗೊಂದಲ ಸೃಷ್ಟಿಯಾಗಿದೆ.

ಸೆಪ್ಟೆಂಬರ್ ನಲ್ಲಿ ನಡೆದಿದ್ದ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಅನೇಕ ಕಾರಣಗಳಿಂದಾಗಿ ಎರಡು ವರ್ಷಗಳ ಬಳಿಕ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ನಡೆದಿತ್ತು. ಸೆಪ್ಟೆಂಬರ್ 3 ರಂದು ಪಾಲಿಕೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ 82 ಸದಸ್ಯರು ಚುನಾಯಿತರಾಗಿದ್ದಾರೆ. ಚುನಾವಣೆಯ ಫಲಿತಾಂಶ ಸೆಪ್ಟೆಂಬರ್ 6 ರಂದು ಬಂದಿತ್ತು. ಫಲಿತಾಂಶ ಬಂದು ಎರಡು ತಿಂಗಳು ಕಳೆದರೂ ಜನರಿಂದ ಚುನಾಯಿತಗೊಂಡ ಪ್ರತಿನಿಧಿಗಳು ಇದುವರೆಗೂ ಅಧಿಕೃತವಾಗಿ ಪಾಲಿಕೆ ಸದಸ್ಯರಾಗಿಯೇ ಇಲ್ಲ.

ಏಕೆಂದರೆ ಈ ಸದಸ್ಯರು ಇದುವರೆಗೂ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿಯೇ ಇಲ್ಲ. ಈ ಕಾರಣಕ್ಕೆ ಪರಿಷತ್ ಚುನಾವಣೆಯಲ್ಲಿ ಮತದಾನ ಅಧಿಕಾರ ಸಿಗುತ್ತದೆಯೋ ಇಲ್ಲವೋ ಎಂಬ ಗೊಂದಲ ಸೃಷ್ಟಿಯಾಗಿದೆ. ಧಾರವಾಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಎರಡು ಸ್ಥಾನಗಳಿದ್ದು, ಈ ಎರಡೂ ಸ್ಥಾನಗಳಿಗೆ ಪಾಲಿಕೆ ಸದಸ್ಯರು ಮತ ಚಲಾಯಿಸಲು ಸಾಧ್ಯವಿಲ್ಲ ಅನ್ನುವ ಮಾತು ಕೇಳಿ ಬರುತ್ತಿದೆ.

ಇದೇ ಮೊದಲ ಬಾರಿಗೆ ಮತದಾನದ ಹಕ್ಕಿನ ಗೊಂದಲ ರಾಜ್ಯದಲ್ಲಿ 2022 ರ ಜನವರಿಯಲ್ಲಿ ತೆರವಾಗಲಿರುವ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಗೆ ಚುನಾವಣಾ ಆಯೋಗ ನ. 9 ರಂದು ಅಧಿಸೂಚನೆ ಹೊರಡಿಸಿದೆ. ಈ ಮೂಲಕ ನೀತಿ ಸಂಹಿತೆಯೂ ಜಾರಿಯಾದಂತಾಗಿದೆ. ಈ ಹಂತದಲ್ಲಿ ಪಾಲಿಕೆಯ ಮೇಯರ್-ಉಪಮೇಯರ್‌ ಚುನಾವಣೆ ನಡೆಸಲು ಬರುತ್ತದೆಯೋ ಇಲ್ಲವೋ ಎಂಬುದು ಕೂಡ ಅಸ್ಪಷ್ಟವಾಗಿದೆ. ಒಂದು ವೇಳೆ ಅವಕಾಶ ದೊರೆತರೆ ಕಾರ್ಪೊರೇಟರ್‌ಗಳು ಪ್ರಮಾಣ ವಚನ ಸ್ವೀಕರಿಸಿ ಮತದಾನದ ಹಕ್ಕನ್ನು ಪಡೆದುಕೊಳ್ಳಲಿದ್ದಾರೆ.

ಚುನಾವಣೆ ನೀತಿ ಸಂಹಿತೆ ಮಧ್ಯೆಯೇ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ನೋಟಿಫಿಕೇಶನ್ ಹೊರಡಿಸಲು ಸಾಧ್ಯವಿಲ್ಲ ಎಂದು ಕಾನೂನು ಪಂಡಿತರು ಹೇಳುತ್ತಾರೆ. ಮೇಯರ್, ಉಪಮೇಯರ್‌ ಚುನಾವಣೆ ನಡೆಸಲು ಮೊದಲು ಸದಸ್ಯರ ಸಾಮಾನ್ಯ ಸಭೆ ಕರೆಯಬೇಕಾಗುತ್ತದೆ. ಈ ಸಭೆಯಲ್ಲಿ ಮೊದಲಿಗೆ ಚುನಾಯಿತ ಪ್ರತಿನಿಧಿಗಳ ಪ್ರತಿಜ್ಞಾ ವಿಧಿ ವಿಧಾನ ಕಾರ್ಯಕ್ರಮಗಳು ಜರುಗಲಿವೆ. ನಂತರ ಮೇಯರ್, ಉಪಮೇಯರ್‌ ಆಯ್ಕೆ ನಡೆಯುತ್ತದೆ. ಸದ್ಯ ಸಂದರ್ಭದಲ್ಲಿ ನೀತಿ ಸಂಹಿತೆ ಮಧ್ಯೆ ಸಾಮಾನ್ಯ ಸಭೆ ನಡೆಯಲಿದೆಯೇ ಎಂಬುದು ಕೂಡ ಅಸ್ಪಷ್ಟವಾಗಿದೆ. ಈ ರೀತಿಯ ಜಿಜ್ಞಾಸೆ ನಿರ್ಮಾಣವಾಗಿರುವುದು ಇದೇ ಮೊದಲು ಎನ್ನಲಾಗುತ್ತಿದೆ.

ಹಕ್ಕನ್ನು ಪಡೆಯಲು ಹೈಕೋರ್ಟ್ ನಿರ್ದೇಶನ ಕೋರಬಹುದು ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಪ್ರಮಾಣ ವಚನ ಸ್ವೀಕರಿಸುವವರೆಗೂ ಅವರನ್ನು ಅಧಿಕೃತ ಸದಸ್ಯರಂತೆ ಪರಿಗಣಿಸಲಾಗುವುದಿಲ್ಲ. ಹಾಗಾಗಿ ಪರಿಷತ್ ಚುನಾವಣೆಯಲ್ಲಿ ಅವರಿಗೆ ಮತದಾನದ ಅವಕಾಶ ಸಿಗುವುದಿಲ್ಲ. ಇಂಥ ಸಂದರ್ಭದಲ್ಲಿ ಮತದಾನದ ಹಕ್ಕನ್ನು ಪಡೆಯಲು ಹೈಕೋರ್ಟ್ ನಿರ್ದೇಶನ ಕೋರಬಹುದು. ಆದರೆ ಕೋರ್ಟ್‌ನಲ್ಲಿ ಸಮಗ್ರ ಪರಾಮರ್ಶೆ ಬಳಿಕವಷ್ಟೇ ತೀರ್ಮಾನ ಬರಬಹುದು.

ನೀತಿ ಸಂಹಿತೆ ಮಧ್ಯೆಯೇ ಮೇಯರ್, ಉಪಮೇಯರ್‌ ಚುನಾವಣೆಗೆ ಅವಕಾಶಗಳು ಇದೆಯೋ ಇಲ್ಲವೋ ಎಂಬುದರ ಬಗ್ಗೆಯೂ ಯಾರಲ್ಲೂ ಸ್ಪಷ್ಟತೆ ಇಲ್ಲ. ಈ ತೆರನಾದ ಸನ್ನಿವೇಶ ಸೃಷ್ಟಿಯಾಗಿದ್ದು ಇದೇ ಮೊದಲು. ಹಾಗಾಗಿ ಸರಕಾರ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅನ್ನುವುದು ಸಾಕಷ್ಟು ಕುತೂಹಲ ಸೃಷ್ಟಿಸಿದೆ.

ಮೇಯರ್, ಉಪಮೇಯರ್ ಚುನಾವಣೆ ನಡೆಸದೇ ನಿರ್ಲಕ್ಷ ತೋರಿದ ಸರಕಾರ – ಡಾ. ಮಯೂರ ಮೋರೆ ಸರಿಯಾದ ವೇಳೆಗೆ ಚುನಾವಣೆ ನಡೆಸುವುದು ಚುನಾವಣೆ ಆಯೋಗದ ಕರ್ತವ್ಯ. ಆಯೋಗ ಅದನ್ನು ಸರಿಯಾಗಿ ನಿಭಾಯಿಸಿದೆ. ಪಾಲಿಕೆ ಚುನಾವಣೆಗೆ ಸಾಕಷ್ಟು ತಾಂತ್ರಿಕ ಸಮಸ್ಯೆಗಳು ಬಂದಿದ್ದವು. ಅನೇಕರು ಹೈಕೋರ್ಟ್ ಮೊರೆ ಹೋಗಿದ್ದರು. ಅದೆಲ್ಲದಕ್ಕೂ ಪೂರ್ಣವಿರಾಮ ಹಾಕಿದ್ದ ನ್ಯಾಯಾಲಯ, ಚುನಾವಣೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದ ಬಳಿಕವಷ್ಟೇ ಚುನಾವಣೆ ನಡೆದಿತ್ತು.

ಅದೆಲ್ಲ ಮುಗಿದು ಎರಡು ತಿಂಗಳು ಕಳೆದರೂ ಸರಕಾರ ಮೇಯರ್, ಉಪಮೇಯರ್ ಚುನಾವಣೆ ನಡೆಸದೇ ನಿರ್ಲಕ್ಷ ತೋರಿದೆ. ಮೇಯರ್‌, ಉಪಮೇಯರ್‌ ಚುನಾವಣೆ ನಡೆಸುವುದು ಸರಕಾರದ ಕೆಲಸ. ಚುನಾವಣೆ ಮುಗಿದು 45 ದಿನಗಳೊಳಗೆ ಈ ಕಾರ್ಯ ಪೂರ್ಣಗೊಳಿಸಿದ್ದರೆ ಈ ಪ್ರಮೇಯವೇ ಬರುತ್ತಿರಲಿಲ್ಲ. ಆದರೆ ಚುನಾವಣೆ ಮುಗಿದು ಒಂಭತ್ತು ವಾರಗಳು ಕಳೆದರೂ ಮೇಯರ್, ಉಪಮೇಯರ್‌ ಚುನಾವಣೆ ನಡೆಸದೇ ಇರುವುದು ಸರಕಾರದ ನಿರ್ಲಕ್ಷ್ಯದ ಪರಮಾವಧಿ ಎಂದು 24 ನೇ ವಾರ್ಡ್ ನಿಂದ ಆಯ್ಕೆಯಾಗಿರುವ ಕಾಂಗ್ರೆಸ್ ನ ಡಾ. ಮಯೂರ ಮೋರೆ ಅಸಮಾಧಾನ ವ್ಯಕ್ತಪಡಿಸುತ್ತಾರೆ .

ಸಾಮಾನ್ಯ ಸಭೆ ನಡೆಸುವ ಸಾಧ್ಯತೆಯನ್ನು ಸರಕಾರವೇ ನಿರ್ಧರಿಸಬೇಕು – ಡಾ. ಸುರೇಶ ಇಟ್ನಾಳ್ ಇನ್ನು ಈ ಬಗ್ಗೆ ಟಿವಿ-9 ಡಿಜಿಟಲ್ ಗೆ ಪ್ರತಿಕ್ರಿಯೆ ನೀಡಿರುವ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ್, ಪಾಲಿಕೆಯ ಸಾರ್ವತ್ರಿಕ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರ ಹೆಸರು ಸರಕಾರದ ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಗೊಂಡಿದೆ. ಅವರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ. ಹಾಗಾಗಿ ಅವರು ಪಾಲಿಕೆಯ ಅಧಿಕೃತ ಸದಸ್ಯರಾಗಿಲ್ಲ. ಪಾಲಿಕೆ ಸಾಮಾನ್ಯ ಸಭೆಯಲ್ಲೇ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಗುತ್ತದೆ. ಇದೀಗ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸಾಮಾನ್ಯ ಸಭೆ ನಡೆಸುವ ಸಾಧ್ಯತೆಗಳನ್ನು ಸರಕಾರವೇ ನಿರ್ಧರಿಸಬೇಕು ಅನ್ನುತ್ತಾರೆ.

– ನರಸಿಂಹಮೂರ್ತಿ ಪ್ಯಾಟಿ

ಇದನ್ನೂ ಓದಿ:

ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ, ಡಿಸೆಂಬರ್​​ನಲ್ಲಿ 25 ಸ್ಥಾನಗಳಿಗೆ ಮತದಾನ (can hubballi dharwad corporation new members vote in legislative council elections do they have voting rights)

Published On - 12:25 pm, Mon, 15 November 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್