ಸೆಪ್ಟೆಂಬರ್ 3ಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್; ಇಂದಿನಿಂದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ

ರಾಜಕೀಯ ಚಟುವಟಿಕೆಗೆ ಅನುಮತಿ ಪಡೆಯಲು ಎರಡು ಕಚೇರಿಗಳನ್ನು ಸ್ಥಾಪಿಸಲಾಗುತ್ತದೆ. ಇವಿಎಂ ಮತ ಯಂತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯುತ್ತದೆ. 100 ಜನರಿಗೆ ಮಾತ್ರ ಬಹಿರಂಗ ಪ್ರಚಾರ ಮಾಡಲು ಅವಕಾಶವಿರುತ್ತದೆ.

ಸೆಪ್ಟೆಂಬರ್ 3ಕ್ಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್; ಇಂದಿನಿಂದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Aug 16, 2021 | 9:22 AM

ಹುಬ್ಬಳ್ಳಿ: ಸೆಪ್ಟೆಂಬರ್ 3ರಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಇಂದಿನಿಂದ (ಆಗಸ್ಟ್ 16) ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಹುಬ್ಬಳ್ಳಿ- ಧಾರವಾಡದ 82 ವಾರ್ಡ್​ಗಳಲ್ಲಿ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಅಗಸ್ಟ್ 23 ಕೊನೆ ದಿನವಾಗಿದೆ. ಅಗಸ್ಟ್ 24 ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ. ಹಿಂದೆತೆಗೆದುಕೊಳ್ಳಲು ಅಗಸ್ಟ್ 26 ಕೊನೆ ದಿನ ಎಂದು ತಿಳಿದುಬಂದಿದೆ.

ಅಗಸ್ಟ್ 16ರಿಂದ ಸೆಪ್ಟೆಂಬರ್ 6ರ ವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಹಿತೆ ಜಾರಿಯಾಗುತ್ತದೆ. ಪಾಲಿಕೆ ಚುನಾವಣೆಗೆ ಸುಮಾರು 837 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. 4,07,954 ಗಂಡು, 4,07,954 ಹೆಣ್ಣು, 86 ಇತರೆ ಸೇರಿದಂತೆ ಒಟ್ಟು 8,11,537 ಜನರು ಪಾಲಿಕೆ ಮತದಾನ ಮಾಡಲಿದ್ದಾರೆ. 16 ಚುನಾವಣಾ ಅಧಿಕಾರಿ, 16 ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ.

ರಾಜಕೀಯ ಚಟುವಟಿಕೆಗೆ ಅನುಮತಿ ಪಡೆಯಲು ಎರಡು ಕಚೇರಿಗಳನ್ನು ಸ್ಥಾಪಿಸಲಾಗುತ್ತದೆ. ಇವಿಎಂ ಮತ ಯಂತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯುತ್ತದೆ. 100 ಜನರಿಗೆ ಮಾತ್ರ ಬಹಿರಂಗ ಪ್ರಚಾರ ಮಾಡಲು ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸುವ ದಿನದಂದು ಬಹಿರಂಗ ಮೆರವಣಿಗೆಗೆ ಅವಕಾಶವಿರಲ್ಲ.

ಇದನ್ನೂ ಓದಿ

ಬಾಗಲಕೋಟೆ: ರೈತರಲ್ಲಿ ಆತಂಕ ಸೃಷ್ಟಿಸಿದ ಮೋಡ ಕವಿದ ವಾತಾವರಣ; ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ

Nagara Palike Election: 3 ನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದ ಆಯೋಗದ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ

(Candidates can submit a nomination to Hubballi Dharwad Nagara Palike Election from today)

Published On - 9:20 am, Mon, 16 August 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್