ಹುಬ್ಬಳ್ಳಿ: ಸೆಪ್ಟೆಂಬರ್ 3ರಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಇಂದಿನಿಂದ (ಆಗಸ್ಟ್ 16) ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅವಕಾಶ ನೀಡಲಾಗಿದೆ. ಹುಬ್ಬಳ್ಳಿ- ಧಾರವಾಡದ 82 ವಾರ್ಡ್ಗಳಲ್ಲಿ ಪಾಲಿಕೆ ಚುನಾವಣೆ ನಡೆಯುತ್ತಿದ್ದು, ನಾಮಪತ್ರ ಸಲ್ಲಿಕೆಗೆ ಅಗಸ್ಟ್ 23 ಕೊನೆ ದಿನವಾಗಿದೆ. ಅಗಸ್ಟ್ 24 ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ. ಹಿಂದೆತೆಗೆದುಕೊಳ್ಳಲು ಅಗಸ್ಟ್ 26 ಕೊನೆ ದಿನ ಎಂದು ತಿಳಿದುಬಂದಿದೆ.
ಅಗಸ್ಟ್ 16ರಿಂದ ಸೆಪ್ಟೆಂಬರ್ 6ರ ವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಹಿತೆ ಜಾರಿಯಾಗುತ್ತದೆ. ಪಾಲಿಕೆ ಚುನಾವಣೆಗೆ ಸುಮಾರು 837 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. 4,07,954 ಗಂಡು, 4,07,954 ಹೆಣ್ಣು, 86 ಇತರೆ ಸೇರಿದಂತೆ ಒಟ್ಟು 8,11,537 ಜನರು ಪಾಲಿಕೆ ಮತದಾನ ಮಾಡಲಿದ್ದಾರೆ. 16 ಚುನಾವಣಾ ಅಧಿಕಾರಿ, 16 ಸಹಾಯಕ ಚುನಾವಣೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ.
ರಾಜಕೀಯ ಚಟುವಟಿಕೆಗೆ ಅನುಮತಿ ಪಡೆಯಲು ಎರಡು ಕಚೇರಿಗಳನ್ನು ಸ್ಥಾಪಿಸಲಾಗುತ್ತದೆ. ಇವಿಎಂ ಮತ ಯಂತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯುತ್ತದೆ. 100 ಜನರಿಗೆ ಮಾತ್ರ ಬಹಿರಂಗ ಪ್ರಚಾರ ಮಾಡಲು ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸುವ ದಿನದಂದು ಬಹಿರಂಗ ಮೆರವಣಿಗೆಗೆ ಅವಕಾಶವಿರಲ್ಲ.
ಇದನ್ನೂ ಓದಿ
ಬಾಗಲಕೋಟೆ: ರೈತರಲ್ಲಿ ಆತಂಕ ಸೃಷ್ಟಿಸಿದ ಮೋಡ ಕವಿದ ವಾತಾವರಣ; ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ
Nagara Palike Election: 3 ನಗರ ಪಾಲಿಕೆಗಳಿಗೆ ಚುನಾವಣೆ ಘೋಷಿಸಿದ ಆಯೋಗದ ವಿರುದ್ಧ ಸಚಿವ ಈಶ್ವರಪ್ಪ ಅಸಮಾಧಾನ
(Candidates can submit a nomination to Hubballi Dharwad Nagara Palike Election from today)
Published On - 9:20 am, Mon, 16 August 21