ರಾಜ್ಯದಲ್ಲಿ ಇಂದು ಘೋರ ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ

Annigeri, Dharwad: ತಂದೆ ಇಬ್ರಾಹಿಂ ಉವಾಜಿ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರಿ ಇಸ್ಮತ್ ಕಿಮ್ಸ್​ನಲ್ಲಿ ಕೊನೆಯುಸಿರೆಳೆದಿದ್ದಾಳೆ. ಪತ್ನಿ ನಸ್ರೀನ್ ಬಾನುಗೆ ಸಣ್ಣಪುಟ್ಟ ಗಾಯಗಳಾಗಿವೆ.

ರಾಜ್ಯದಲ್ಲಿ ಇಂದು ಘೋರ ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ
ರಾಜ್ಯದಲ್ಲಿ ಇಂದು ಅಪಘಾತಗಳ ಸರಮಾಲೆ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ, ಮಗಳು ಬಲಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 12, 2022 | 8:23 PM

ಧಾರವಾಡ: ಇಂದು ರಾಜ್ಯದಲ್ಲಿ ಅಪಘಾತಗಳ ಸರಮಾಲೆಯೇ ನಡೆದಿದ್ದು ಹತ್ತಾರು ಮಂದಿ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಬಳಿ ನಡೆದಿರುವ ದುರ್ಘಟನೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಅಪ್ಪ ಮತ್ತು ಮಗಳು ಮೃತಪಟ್ಟಿದ್ದಾರೆ. ತಂದೆ ಇಬ್ರಾಹಿಂ ಉವಾಜಿ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರಿ ಇಸ್ಮತ್ ಕಿಮ್ಸ್​ನಲ್ಲಿ ಕೊನೆಯುಸಿರೆಳೆದಿದ್ದಾಳೆ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ರಾಹಿಂ ಉವಾಜಿ ಗದಗ ಜಿಲ್ಲೆಯ ಮಲ್ಲಸಮುದ್ರ ಗ್ರಾಮದ ನಿವಾಸಿ. ಪತ್ನಿ ನಸ್ರೀನ್ ಬಾನುಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಲಬುರಗಿ: ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಐವರ ದುರ್ಮರಣ ಕಲಬುರಗಿ: ಮರಕ್ಕೆ ಕಾರು(Car) ಡಿಕ್ಕಿಯಾಗಿ ಸ್ಥಳದಲ್ಲೇ ಐವರು ಸಾವನ್ನಪ್ಪಿದೆ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ಹೊರವಲಯದಲ್ಲಿ ನಡೆದಿದೆ. ಕಾರಿನಲ್ಲಿದ್ದ ಚಾಲಕ ಹಾಗೂ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಗಾಣಗಾಪುರ ದತ್ತಾತ್ರೇಯ ದೇಗುಲದಿಂದ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಫಜಲಪುರದಿಂದ ಮಹಾರಾಷ್ಟ್ರ ಕಡೆಗೆ ಹೊರಟಿದ್ದ ಕಾರು ಮರಕ್ಕೆ( Tree) ಡಿಕ್ಕಿ ಹೊಡೆದಿದೆ. ಮೃತರು ಮಹಾರಾಷ್ಟ್ರ ಅಹ್ಮದನಗರದ ನಿವಾಸಿಗಳು. ಚಾಲಕ ನಿದ್ರೆ ಮಂಪರಿನಲ್ಲಿದ್ದರಿಂದ ಅಪಘಾತವಾಗಿರುವ( Accident) ಶಂಕೆ ವ್ಯಕ್ತವಾಗಿದೆ. ಅಫಜಲಪುರ ಪೊಲೀಸ್​ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಓವರ್ ಲೋಡ್ ಧಾವಂತದಿಂದ​ ಟ್ರ್ಯಾಕ್ಟರ್ ಪಲ್ಟಿ -ನಿಶ್ಚಿತಾರ್ಥಕ್ಕೆ ಹೊರಟಿದ್ದ 4 ಮಂದಿ ಸಾವು ಕೊಪ್ಪಳ: ಸುಮಾರು 25 ಜನರನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು, ಚಿಕಿತ್ಸೆ ಫಲಿಸದೆ ಕಾರಟಗಿ ಆಸ್ಪತ್ರೆಯಲ್ಲಿ ಇಬ್ಬರು ದುರ್ಮರಣಕ್ಕೀಡಾಗಿರುವ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ನವಲಿಯಲ್ಲಿ ನಡೆದಿದೆ. ನಿಶ್ಚಿತಾರ್ಥಕ್ಕೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಯಮನೂರಪ್ಪ(55) ಮತ್ತು ಅಂಬಮ್ಮ(50) ಸ್ಥಳದಲ್ಲೇ ಅಸುನೀಗಿದವರು. ಶೇಶಪ್ಪ ಬಂಡಿ (40) ಮತ್ತು ಯಮನಪ್ಪ ಸಿಂಧನೂರು (35) ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.ಇವರೆಲ್ಲಾ ಕೊಪ್ಪಳ ಜಿಲ್ಲೆ ಕಾರಟಗಿಯ ಇಂದ್ರನಗರ ನಿವಾಸಿಗಳು. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಕಾರಟಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸೇರಿದಂತೆ ಕನಕಗಿರಿ ಪೊಲೀಸ್ ತಂಡ ಭೇಟಿ ನೀಡಿದೆ.

ನಿಶ್ಚಿತಾರ್ಥಕ್ಕೆ ಹೊರಟಿದ್ದವರು ಸೇರಿದ್ದು ಮಸಣಕ್ಕೆ: ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ‌ಪಾರ್ಕ್ ಬಳಿ ಈ ದುರ್ಘಟನೆ ನಡೆದಿದ್ದು, ಮೃತರು ಕಾರಟಗಿ ಪಟ್ಟಣದ 18ನೇ ವಾರ್ಡ್ ನ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರಟಗಿಯಿಂದ ಕನಕಗಿರಿಯ ಸಿರವಾರ ಕಡೆಗೆ ಟ್ರ್ಯಾಕ್ಟರ್ ಹೊರಟಿತ್ತು.

ಇದನ್ನೂ ಓದಿ: ಒಂದೇ ದಿನ ಎರಡು ಕಡೆ! ಪೊಲೀಸರು ಜಫ್ತಿ ಮಾಡಿದ್ದ ಹಳೆಯ ವಾಹನಗಳಿಗೆ ಬೆಂಕಿ -21 ವಾಹನಗಳು ಅಗ್ನಿಗಾಹುತಿ

ಇದನ್ನೂ ಓದಿ: ಮನೆಯವರ ವಿರೋಧದ ನಡುವೆ ಮದುವೆಯಾಗಿದಕ್ಕೆ ಮಗಳನ್ನೇ ವಿಧವೆ ಮಾಡಿದ ಅಪ್ಪ; ವಿಜಯಪುರ ಮಾಜಿ ಕಾರ್ಪೊರೇಟರ್ ಸೇರಿ ನಾಲ್ವರ ಬಂಧನ

Published On - 7:52 pm, Fri, 11 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್