ಪ್ರಚೋದನಕಾರಿ ಹೇಳಿಕೆ ಆರೋಪ: ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​​ ವಿರುದ್ದ ಕೇಸ್​ ದಾಖಲು

Idgah Maidan: ಇತರೆ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪದಡಿ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​ ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

ಪ್ರಚೋದನಕಾರಿ ಹೇಳಿಕೆ ಆರೋಪ: ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್​​ ವಿರುದ್ದ ಕೇಸ್​ ದಾಖಲು
ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Sep 21, 2023 | 6:39 PM

ಹುಬ್ಬಳ್ಳಿ, ಸೆಪ್ಟೆಂಬರ್​ 21: ಇತರೆ ಧರ್ಮಗಳ ಭಾವನೆಗಳಿಗೆ ಆಘಾತವನ್ನುಂಟು ಮಾಡುವ ಉದ್ದೇಶದಿಂದ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಹಿನ್ನೆಲೆ ಶ್ರೀರಾಮಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ವಿರುದ್ಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಕಲಂ 153(ಎ), 295(ಎ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮಹಾನಗರ ಪಾಲಿಕೆ 8 ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ಎಂಬುವವರು ದೂರು ನೀಡಿದ್ದಾರೆ.

ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್​​ ಮೈದಾನಕ್ಕೆ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಮಾಡಲಾಗಿದೆ.

ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ: ಪ್ರಮೋದ್ ಮುತಾಲಿಕ್

ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ, ವಿರೋಧಿಗಳ ಸೊಕ್ಕಡಗಿಸುವ ತಾಕತ್ತು ನಮಗಿದೆ ಅಂತ ವಾಗ್ದಾಳಿ ಮಾಡಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ನಿಂತು ಗುಡುಗಿದ ಬಿಜೆಪಿ ಶಾಸಕ ಯತ್ನಾಳ್, ಪ್ರಮೋದ್ ಮುತಾಲಿಕ್

ಮೂರು ದಿನ ಯಾವುದೇ ಗೊಂದಲ್ಲ ಇಲ್ಲದೆ ಗಣೇಶ ಪ್ರತಿಷ್ಠಾಪನೆಯಾಗಿದೆ. ಹಿಂದೂ ಸಮಾಜ ಶಾಂತಿಯಿಂದ ಆಚರೆಣೆ ಮಾಡಿದೆ. ಸದ್ಯ ಈದ್ಗಾ ಮೈದಾನ ಶುದ್ದಿಯಾಗಿದೆ. ಗಣೇಶ ಉತ್ಸವಕ್ಕೆ ವಿರೋಧ ಮಾಡಿದವರು ದೇಶ ವಿರೋಧಿಗಳು, ಅಧರ್ಮಿಯರು. ನಾವು ಅದನ್ನು ಮೆಟ್ಟಿ ನಿಂತು ಆಚರಣೆ ಮಾಡಿದ್ದೇವೆ ಎಂದು ಹೇಳಿದ್ದರು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ವಿಸರ್ಜನೆಗೆ ಮೊದಲು ಪ್ರಮೋದ್ ಮುತಾಲಿಕ್ ವಿವಾದಾತ್ಮಕ ಹೇಳಿಕೆ

ಸೆ. 19 ರಂದು ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವು ಹೋರಾಟ ಮಾಡಿದ ಬಳಿಕವೇ ಪಾಲಿಕೆ ಹಬ್ಬಕ್ಕೆ ಅನುಮತಿ ಕೊಟ್ಟಿತ್ತು. ಮೂರು ದಿನಗಳ ಕಾಲ ಕೆಲ ಷರತ್ತು ಹಾಕಿ ಪಾಲಿಕೆ ಅನುಮತಿ ಕೊಟ್ಟಿತ್ತು. ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ವಿಶೇಷ ಪೂಜೆ ಹೋಮ ಹವನ ಹಮ್ಮಿಕೊಳ್ಳಲಾಗಿತ್ತು.

ನಾಡಿನ ಅನೇಕ ಜನ ಬಂದು ಈದ್ಗಾ ಮೈದಾನದ ಗಣೇಶನ ದರ್ಶನ ಪಡೆದಿದ್ದರು. ಇಂದು ಸರಿಯಾಗಿ 12 ಗಂಟೆಗೆ ವಿಸರ್ಜನಾ ಮೆರವಣಿಗೆ ಆರಂಭವಾಯ್ತು, ಸಂಜೆ ಆರು ಗಂಟೆ ವೆಳೆಗೆ ಹುಬ್ಬಳ್ಳಿಯ ಗಾಜಿನ ಮನೆಯ ಪಕ್ಕ ಇರುವ ಬಾವಿಯಲ್ಲಿ ಗಣೇಶನ ವಿಸರ್ಜನೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:38 pm, Thu, 21 September 23

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?