AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ ಸ್ಟಡಿ ಸೆಂಟರ್​ ಮೇಲೆ ಸಿಸಿಬಿ ದಾಳಿ

ಸ್ಟಡಿ ಸೆಂಟರ್​​ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ KIOS ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.

ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ ಸ್ಟಡಿ ಸೆಂಟರ್​ ಮೇಲೆ ಸಿಸಿಬಿ ದಾಳಿ
ಸಿಸಿಬಿ ಕಚೇರಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 28, 2023 | 1:54 PM

Share

ಮುಖ್ಯಾಂಶಗಳು

  • ಹುಬ್ಬಳ್ಳಿಯ KIOS ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ.
  • ಬಂಧಿತರಿಂದ ಪದವಿ, ಎಸ್​ಎಸ್​ಎಲ್​ಸಿ, ಪಿಯು ಮಾರ್ಕ್ಸ್ ಕಾರ್ಡ್​ಗಳು, ಉತ್ತರ ಪ್ರತಿಗಳು, ಕಲರ್​ ಪ್ರಿಂಟರ್​​ ಮತ್ತು ಜೆರಾಕ್ಸ್ ಮಷಿನ್ ವಶಪಡಿಸಿಕೊಂಡಿದ್ದಾರೆ.
  • ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಹುಬ್ಬಳ್ಳಿ/ ಬೆಂಗಳೂರು: ಸ್ಟಡಿ ಸೆಂಟರ್ (Study Center)​​ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ (Duplicate marks card) ಮಾರಾಟ ಮಾಡುತ್ತಿದ್ದ ಹುಬ್ಬಳ್ಳಿಯ (Hubli) KIOS ಕಚೇರಿ ಮೇಲೆ ಸಿಸಿಬಿ (CCB) ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ್ದಾರೆ. ಪ್ರಭುರಾಜ್, ಮೈಲಾರಿ, ಮೊಹಮ್ಮದ್ ತೈಹೀದ್ ಬಂಧಿತ ಆರೋಪಿಗಳು. ಬಂಧಿತರಿಂದ ಪದವಿ, ಎಸ್​ಎಸ್​ಎಲ್​ಸಿ, ಪಿಯು ಮಾರ್ಕ್ಸ್ ಕಾರ್ಡ್​ಗಳು, ಉತ್ತರ ಪ್ರತಿಗಳು, ಕಲರ್​ ಪ್ರಿಂಟರ್​​ ಮತ್ತು ಜೆರಾಕ್ಸ್ ಮಷಿನ್ ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. KIOS ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೆ ಸ್ಟಡಿ ಸೆಂಟರ್ ನಡೆಸುತ್ತಿದ್ದರು. ಪೊಲೀಸರು ದಾಳಿ ವೇಳೆ 7100 ಅಂಕಪಟ್ಟಿ, 5500 ಉತ್ತರ ಪ್ರತಿಗಳು, 25 ಅಡ್ಮಿಷನ್ ರಿಜಿಸ್ಟರ್​​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಚೀನಾ ಒಡೆತನದ ಪಿಜನ್ ಎಜುಕೇಶನ್ ಟೆಕ್ನಾಲಜಿ ಇಂಡಿಯಾ ಕಂಪೆನಿ‌ ಮೇಲೆ ಇಡಿ ದಾಳಿ

ಸಿಸಿಬಿ ಎಸಿಪಿ ನಾರಾಯಣ ಭರಮಣಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗೋಕುಲ್ ರೋಡ್ ಹೊಸ ಬಸ್ ನಿಲ್ದಾಣದ ಬಳಿ 11.86 ಲಕ್ಷ ಮೌಲ್ಯದ ಸುಮಾರು 2 ಕೆಜಿ ಅಪೀಮ್ ಪತ್ತೆಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ಮೂಲಾರಾಮ್​ ಹಾಗೂ ಜಯರಾಮ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 2 ಕೆಜಿ ದ್ರವ ರೂಪದ ಅಫೀಮು, ಮೂರು ಮೊಬೈಲ್ ಹಾಗೂ 4500 ರೂ. ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸಂಪುಟದಿಂದ ವಜಾಕ್ಕೆ ಆಗ್ರಹಗಳ ಮಧ್ಯೆ ಸಚಿವ ನಾಗೇಂದ್ರಗೆ ಬಿಗ್ ರಿಲೀಫ್​
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಸ್ಟಾರ್ ಹೋಟೆಲ್​​​​​ ಬೆನ್ನಲ್ಲೇ ಕಾಸ್ಮೆಟಿಕ್ಸ್ ಅಂಗಡಿಗಳ ಮೇಲೆ ದಾಳಿ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಬೆಂಗಳೂರಲ್ಲಿ 105 ಮಂದಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಪತ್ತೆ
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ಪ್ರಾಯಶ್ಚಿತ್ತ ಯಾತ್ರೆ ಅನ್ನೋರಿಗೆ ದೇವೇಗೌಡರಿಂದ ತಿರುಗೇಟು!
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್ ಸೇರಿ 6 ಆರೋಪಿಗಳು ವಿಚಾರಣೆಗೆ ಹಾಜರು
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಶಿವಗಂಗೆ ಬೆಟ್ಟದಲ್ಲಿ ವ್ಯಕ್ತಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್!
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಹರ್ ಘರ್ ತಿರಂಗಾ ಯಾತ್ರೆ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ
ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ