ನವಲಗುಂದ-ನರಗುಂದ ಮಾರ್ಗದಲ್ಲಿ ಅಪಘಾತ ಆಗದಂತೆ ಶಾಶ್ವತ ಪರಿಹಾರ ಕಲ್ಪಿಸುವ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ : ಪ್ರಲ್ಹಾದ ಜೋಶಿ ಧನ್ಯವಾದ

|

Updated on: Oct 21, 2023 | 10:43 PM

ಇಂಥದ್ದೊಂದು ಪ್ರಮುಖ ಬೇಡಿಕೆಗೆ ಸ್ಪಂದಿಸಿ ಅನುಮೋದಿಸಿದ ಪ್ರಧಾನಿ ಮೋದಿ ಹಾಗೂ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಧನ್ಯವಾದ ಅರ್ಪಿಸಿದ್ದಾರೆ. ಪ್ರಸ್ತಾವನೆಗೆ ಅಧಿಕೃತ ಅನುಮೋದನೆ ಲಭಿಸಿರುವ ಹಿನ್ನೆಲೆಯಲ್ಲಿ ಶೀಘ್ರವೇ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದಿದ್ದಾರೆ.

ನವಲಗುಂದ-ನರಗುಂದ ಮಾರ್ಗದಲ್ಲಿ ಅಪಘಾತ ಆಗದಂತೆ ಶಾಶ್ವತ ಪರಿಹಾರ ಕಲ್ಪಿಸುವ  ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ : ಪ್ರಲ್ಹಾದ ಜೋಶಿ ಧನ್ಯವಾದ
ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರದ ಅನುಮೋದನೆ : ಪ್ರಲ್ಹಾದ ಜೋಶಿ ಧನ್ಯವಾದ
Follow us on

ಹುಬ್ಬಳ್ಳಿ-ವಿಜಯಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52 ರಸ್ತೆಯ ನವಲಗುಂದ ಮತ್ತು ನರಗುಂದ ಮಾರ್ಗದ (Navalgund-Nargund route) ಸಂಚಾರ ದಟ್ಟಣೆ ಹಾಗೂ ಅಪಘಾತಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಪ್ರಸ್ತಾಪನೆಗೆ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಹೇಳಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, “ಸದರಿ ಮಾರ್ಗದಲ್ಲಿ ದಿನನಿತ್ಯ ದೈತ್ಯ ವಾಹನಗಳ ಸಂಚಾರದಿಂದ ಅಪಘಾತಗಳು ಮತ್ತು ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆಯ ಕುರಿತು ಈ ಹಿಂದೆ ನನ್ನ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸಮಸ್ಯೆಯ ಕುರಿತು ಮನದಟ್ಟು ಮಾಡಿದ್ದೆ. ಇದೇ ವೇಳೆ ಕಾಮಗಾರಿಗೆ ಪ್ರಸ್ತಾವನೆಯನ್ನೂ ಸಲ್ಲಿಸಿದ್ದೆ. ಈ ಪ್ರಸ್ತಾವನೆಗೆ ಇಂದು ಸಚಿವಾಲಯದಿಂದ ಅಧಿಕೃತ ಅನುಮೋದನೆ ದೊರಕಿದೆ..” ಎಂದು ಪ್ರಲ್ಹಾದ ಜೋಶಿಯವರು ತಿಳಿಸಿದ್ದಾರೆ.

ಪ್ರಸ್ತಾವನೆಗೆ ಅಧಿಕೃತ ಅನುಮೋದನೆ ಲಭಿಸಿರುವ ಹಿನ್ನೆಲೆಯಲ್ಲಿ ಶೀಘ್ರವೇ ಬೈಪಾಸ್ ರಸ್ತೆ ಕಾಮಗಾರಿ ಆರಂಭಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದಿದ್ದಾರೆ.

ಇಂಥದ್ದೊಂದು ಪ್ರಮುಖ ಬೇಡಿಕೆಗೆ ಸ್ಪಂದಿಸಿ ಅನುಮೋದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಇದನ್ನೂ ಓದಿ: ತಮ್ಮ ರಾಜಕೀಯ ಲಾಭಕ್ಕಾಗಿ ಇಡೀ ರಾಜ್ಯ ಕತ್ತಲೆಯಲ್ಲಿ ಕೊಳೆಯುವಂತೆ ಮಾಡಿದೆ ಕಾಂಗ್ರೆಸ್ ಸರ್ಕಾರ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:38 pm, Sat, 21 October 23