ಕಳಸಾ ಬಂಡೂರಿ ಯೋಜನೆ ಡಿಪಿಆರ್ ಆಗೋದೆ ಇಲ್ಲ ಎನ್ನುತ್ತಿದ್ದವರಿಗೆ ಬಿಜೆಪಿ ಸರ್ಕಾರ ಉತ್ತರ ನೀಡಿದೆ – ಪ್ರಲ್ಹಾದ್ ಜೋಶಿ

ಕಳಸಾ ಬಂಡೂರಿ ಯೋಜನೆಗೆ ಈ ಹಿಂದೆ ನಾವು ಕೂಡಾ ಹೋರಾಟ ಮಾಡದ್ವಿ. ಇದೀಗ ವಿಸ್ತೃತ ಯೋಜನಾ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದಿರುವ ಜೋಶಿ, ಬೊಮ್ಮಾಯಿ ಸರ್ಕಾರವೂ ಅತ್ಯಂತ ಶ್ರಮ ಹಾಕಿದೆ. ಬೊಮ್ಮಾಯಿ, ಗೋವಿಂದ್ ಕಾರಜೋಳ ಅವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಕಳಸಾ ಬಂಡೂರಿ ಯೋಜನೆ ಡಿಪಿಆರ್ ಆಗೋದೆ ಇಲ್ಲ ಎನ್ನುತ್ತಿದ್ದವರಿಗೆ ಬಿಜೆಪಿ ಸರ್ಕಾರ ಉತ್ತರ ನೀಡಿದೆ - ಪ್ರಲ್ಹಾದ್ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 29, 2022 | 10:36 PM

ಹುಬ್ಬಳ್ಳಿ: ಕೇಂದ್ರ ಜಲ ಆಯೋಗವು ಕರ್ನಾಟಕದ ಕಳಸಾ ಬಂಡೂರಿ ನಾಲಾ (Kalasa Banduri Water Project) ವಿಸ್ತೃತ ಯೋಜನಾ ವರದಿಗೆ ಅನುಮತಿಯನ್ನು ನೀಡಿದೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹಂಚಿಕೊಂಡಿದ್ದಾರೆ. ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ (Narendra Modi) ಅವರಿಗೆ, ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಜೋಶಿ ಅನಂತ ಧನ್ಯವಾದಗಳು ತಿಳಿಸಿದ್ದಾರೆ.

ಕಿತ್ತೂರು ಕರ್ನಾಟಕ, ಹುಬ್ಬಳ್ಳಿ ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಈ ಕುಡಿಯುವ ನೀರಿನ ಯೋಜನೆ ಅತ್ಯವಶ್ಯಕವಾಗಿತ್ತು. ಮಹದಾಯಿ ತೀರ್ಪು ಬಂದಾಗಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ, ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿತ್ತು. ಇದೀಗ ಕಳಸಾ ಮತ್ತು ಬಂಡೂರಿ ಕುಡಿಯುವ ನೀರಿನ ಯೋಜನೆಯ ಡಿಪಿಆರ್ ಗೂ ಸಹ ಅನಮೋದನೆ ನೀಡುವ ಮೂಲಕ ಸುಗಮವಾಗಿ ಯೋಜನೆ ಅನುಷ್ಠಾನಗೊಳಿಸಲು ಸಹಕರಿಸಿದೆ ಎಂದು ಪ್ರಲ್ಹಾದ್ ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಈ ಯೋಜನೆ ಜಾರಿಯಾಗಲೇ ಬೇಕು ಎಂದು ಪ್ರಲ್ಹಾದ್ ಜೋಶಿ ಸೇರಿದಂತೆ ಕರ್ನಾಟಕದ ಹಲವು ರೈತ ಮುಖಂಡರು ಆಗ್ರಹಿಸಿದ್ದರು.

ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ, ಕರ್ನಾಟಕದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಜೊತೆ ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಮಹತ್ವದ ಸಭೆ ನಡೆಸಿದ್ದರು.

ಸರಿಯಾದ ರೀತಿಯಲ್ಲಿ ಕರ್ನಾಟಕದಿಂದ ಡಿಪಿಆರ್ ಕಳಿಸುವಂತೆ ಗೋವಿಂದ ಕಾರಜೋಳ ಅವರಿಗೆ ಸೂಚಿಸಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚಿಸಿ ಯೋಜನೆಯ ಡಿಪಿಆರ್ ಗೆ ಅನುಮತಿ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳಸಾ ಬಂಡೂರಿ ಯೋಜನೆಯ ಡಿಪಿಆರ್ ಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಧನ್ಯವಾದಗಳನ್ನ ತಿಳಿಸಿದ್ದಾರೆ. ಅಲ್ಲದೇ ಯೋಜನೆಯ ಅನುಮೋದನೆಗಾಗಿ ರಚನಾತ್ಮಕ ಯೋಜನಾ ವರದಿಯನ್ನು ನಿರೂಪಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರಿಗೆ ಹಾಗೂ ರಾಜ್ಯದ ನೀರಾವರಿ ಸಚಿವರಾದ ಗೋವಿಂದ್ ಕಾರಜೋಳ ಅವರಿಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಧನ್ಯವಾದಗಳನ್ನ ಅರ್ಪಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಟಾಂಗ್:

ಕರ್ನಾಟಕ ಕಾಂಗ್ರೆಸ್ ಜನವರಿ 2 ರಂದು ಮಹದಾಯಿ ವಿಚಾರವಾಗಿ ಬೃಹತ್ ಸಮಾವೇಶ ಮಾಡಲು ಸಿದ್ಧತೆ ನಡೆಸಿತ್ತು. ಇದೀಗ, ಕಾಂಗ್ರೆಸ್ ಸಮಾವೇಶಕ್ಕೂ ಮುನ್ನವೇ ಯೋಜನೆ ವರದಿಗೆ ಅನುಮೋದನೆ ದೊರೆತಂತಾಗಿದೆ. ಈ ಮೂಲಕ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಟಾಂಗ್ ನೀಡಿದೆ. ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಮಾವೇಶ ಹಮ್ಮಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:54 pm, Thu, 29 December 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ