AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸಲಾತಿ ಬಗ್ಗೆ ಕೇಂದ್ರ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಜಮೀರ್ ಹೇಳಿಕೆಗೆ ಜೋಶಿ ತಿರುಗೇಟು

ಅಲ್ಪಸಂಖ್ಯಾತರಿಗೆ 15% ಮೀಸಲಾತಿ ವಿಚಾರವಾಗಿ 2019ರಲ್ಲಿ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಒಂದು ಸುತ್ತೋಲೆ ಇದ್ದರೆ ಬಿಡುಗಡೆ ಮಾಡಲಿ ಎಂದು ರಾಜ್ಯ ಸರ್ಕಾರಕ್ಕೆ ಸಚಿವ ಪ್ರಲ್ಹಾದ್​ ಜೋಶಿ ಸವಾಲು ಹಾಕಿದ್ದಾರೆ. ಆ ಮೂಲಕ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಮೀಸಲಾತಿ ಬಗ್ಗೆ ಕೇಂದ್ರ ಯಾವುದೇ ಸುತ್ತೋಲೆ ಹೊರಡಿಸಿಲ್ಲ: ಜಮೀರ್ ಹೇಳಿಕೆಗೆ ಜೋಶಿ ತಿರುಗೇಟು
ಸಚಿವ ಪ್ರಲ್ಹಾದ್​ ಜೋಶಿ, ಸಚಿವ ಜಮೀರ್​ ಅಹ್ಮದ್ ಖಾನ್
ಸಂಜಯ್ಯಾ ಚಿಕ್ಕಮಠ
| Edited By: |

Updated on:Jun 22, 2025 | 1:26 PM

Share

ಹುಬ್ಬಳಿ, ಜೂನ್​ 22: ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ (minorities reservation) ಹೆಚ್ಚಳ ವಿಚಾರ ಸದ್ಯ ಜಟಾಪಟಿಗೆ ಕಾರಣವಾಗಿದೆ. ಈ ಬಗ್ಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಹೇಳಿಕೆ ನೀಡಿದ್ದು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಮೀಸಲಾತಿ ಮಾಡುತ್ತಿದ್ದೇವೆ ಅಂತಾರೆ. ಆದರೆ 2019ರಲ್ಲಿ ಕೇಂದ್ರ ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಸುತ್ತೋಲೆ ಇದ್ದರೆ ರಾಜ್ಯ ಸರ್ಕಾರ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

ಜಮೀರ್ ಹೇಳಿಕೆಗೆ ಜೋಶಿ ತಿರುಗೇಟು

ಇತ್ತೀಚೆಗೆ ಸಚಿವ ಜಮೀರ್​ ಅಹ್ಮದ್ ಖಾನ್​ ಈ ಬಗ್ಗೆ ಮಾತನಾಡಿ, ಈ ನಿರ್ಧಾರ ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಮೈತ್ರಿ ಸರ್ಕಾರದಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ 15ರಷ್ಟು ಮೀಸಲಾತಿ ಬಗ್ಗೆ ಸಂಪುಟ ಉಪಸಮಿತಿ ಶಿಫಾರಸು ಮಾಡಲಾಗಿತ್ತು ಎಂದಿದ್ದರು. ಸದ್ಯ ಇದೇ ವಿಚಾರಕ್ಕೆ ಸಚಿವ ಪ್ರಲ್ಹಾದ್​ ಜೋಶಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತರಿಗೆ 15% ಮೀಸಲಾತಿ: ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ಸ್ಪಷ್ಟನೆ ನೀಡಿದ ಜಮೀರ್​

ಇದನ್ನೂ ಓದಿ
Image
ಮನೆಗಳ ಹಂಚಿಕೆಗೆ ಲಂಚ: ‘ಟಿವಿ9’ ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ರಹಸ್ಯ
Image
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
Image
ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ!
Image
ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೋಶಿ, ಈ ಬಗ್ಗೆ ನಾನು ಟ್ವೀಟ್ ಮಾಡಿದ್ದೆ, ಅದಕ್ಕೆ ಸಿಎಂ ಉತ್ತರ ಕೊಟ್ಟಿಲ್ಲ. ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದ್ದಾರೆ. ಕಾನೂನಿನ ಮೇಲೆ ಕಾಂಗ್ರೆಸ್​ನವರಿಗೆ ಗೌರವವೇ ಇಲ್ಲ. ಅಧಿಕಾರಿಗಳನ್ನು ಅವರ ತಾಳಕ್ಕೆ ತಕ್ಕಂತೆ ಕುಣಿಸುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಪರವಾಗಿದೆ

ಚಕ್ರವರ್ತಿ ಸೂಲಿಬೆಲೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್ ನೀಡಿದ ಪೊಲೀಸ್ ಅಧಿಕಾರಿ ತಲೆಯಲ್ಲಿ ಬುದ್ಧಿ ಇಲ್ಲ. ರಾಜಕೀಯ ಮಾತಾಡಬಾರದು ಅಂತ ಹೇಳಿದ್ದಾರೆ. ನಾವು ಮಾತಾಡದೇ ಪೊಲೀಸರು ರಾಜಕೀಯ ಮಾತಾಡುತ್ತಾರಾ? ಔರಂಗಜೇಬನ ಬಗ್ಗೆ ಮಾತನಾಡಿದರೆ ರಾಜಕರಣವಾಗುತ್ತಾ? ಸಿದ್ದರಾಮಯ್ಯರ ತುಷ್ಟೀಕರಣ ಬಗ್ಗೆ ಮಾತಾನಾಡಿದರೆ ರಾಜಕಾರಣವಾಗುತ್ತಾ? ರಾಜ್ಯವನ್ನು ಮತಾಂಧ ಕೇಂದ್ರವಾಗಿ ಬದಲಾಯಿಸುತ್ತಿದ್ದಾರೆ. ಬಿಜೆಪಿ ದೊಡ್ಡ ಪಾರ್ಟಿ, ನೀವು ಹಿಂಗೆ ಮಾಡಿದರೆ ನಾವು ಸುಮ್ಮನಿರಲ್ಲ. ಅವರು ಕೊಲೆ ಮಾಡಿದರೂ ನಡೆಯುತ್ತದೆ. ಮತಾಂಧ ಕಾಂಗ್ರೆಸ್ ಸರ್ಕಾರ ಒಂದು ವರ್ಗದ ಪರವಾಗಿದೆ ಎಂದು ಕಿಡಿಕಾರಿದ್ದಾರೆ.

ದುಡ್ಡು ಕೊಡಿ ಮನೆ ಪಡಿ, ಇದು ಕಾಂಗ್ರೆಸ್ ಹೊಸ ಘೋಷವಾಕ್ಯ

ಇನ್ನು ಬಿಆರ್​ ಪಾಟೀಲ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ದುಡ್ಡು ಕೊಡಿ ಮನೆ ಪಡಿ, ಇದು ಕಾಂಗ್ರೆಸ್ ಹೊಸ ಘೋಷವಾಕ್ಯ. ಈ ಸರ್ಕಾರಕ್ಕೆ ನಾಚಿಕೆ ಮಾನ ಮರ್ಯಾದೆ ಇದೆಯಾ? ಗುತ್ತಿಗೆದಾರರು ಮಾಡಿರುವ 60%​ ಕಮಿಷನ್​ ಆರೋಪ ಸರಿಯಿದೆ ಎಂದಿದ್ದಾರೆ.

ಇದನ್ನೂ ಓದಿ: ಗುತ್ತಿಗೆ ಬೆನ್ನಲ್ಲೇ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

6 ತಿಂಗಳಲ್ಲಿ ಅಧಿಕಾರದಿಂದ ಇಳಿಯುತ್ತೇನೆಂದು ಸಿಎಂಗೆ ಅನ್ನಿಸಿದೆ, ಹಾಳಾಗಿ ಹೋಗಲಿ ಅಂತಾ ಸಿದ್ದರಾಮಯ್ಯ ಸುಮ್ಮನಾಗಿದ್ದಾರೆ. ಸಂತೋಷ್ ಲಾಡ್​ ಕೇವಲ ಒಬಾಮಾ, ಟ್ರಂಪ್​ ಬಗ್ಗೆ ಮಾತನಾಡುತ್ತಾರೆ. ಸಚಿವಸ್ಥಾನ ಉಳಿಸಿಕೊಳ್ಳಲು ಮೋದಿಗೆ ಸಂತೋಷ್ ಲಾಡ್ ಬೈಯುತ್ತಾರೆ ಎಂದು ಹರಿಹಾಯ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:23 pm, Sun, 22 June 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್