ಹುಬ್ಬಳ್ಳಿ, ಸೆ.18: MLA ಟಿಕೆಟ್ ಕೊಡಿಸುವುದಾಗಿ 5 ಕೋಟಿ ಹಣ ಪಡೆದು ವಂಚನೆ ಮಾಡಿದ ಕೇಸ್ಗೆ ಸಂಬಂಧಿಸಿ ಚೈತ್ರಾ ಕುಂದಾಪುರ(Chaithra Kundapura) ಅಂತಹ ಜನರು ಎಲ್ಲಾ ಪಕ್ಷದಲ್ಲೂ ಇರುತ್ತಾರೆ ಎಂದು ಹುಬ್ಬಳ್ಳಿ ನಗರದಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ್(Arvind Bellad) ಹೇಳಿದರು. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲನೇ ಘಟನೆ ಅಲ್ಲ. ಮೋಸ ಹೋಗುವವರು ಇರುವವರೆಗೂ ಇದು ಕೊನೆ ಆಗಲ್ಲ. ಈ ಬಗ್ಗೆ ನಮ್ಮ ಪಕ್ಷ ಮೊದಲೇ ತಿಳಿಸಿತ್ತು ಎಂದರು.
ಎಲ್ಲಲ್ಲೊ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗತ್ತಾರೆ. ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದವರಲ್ಲಾ ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡಿ ತಕ್ಷಣ ಬಿಜೆಪಿಯವರಾಗಲ್ಲ. ಇವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಟಿಕೆಟ್ ಪಡೆಯಲು ಒಂದು ಪದ್ದತಿಯಿದೆ. ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೆಟ್ ಆಕಾಂಕ್ಷಿಗಳ ಅಡ್ವಾಂಟೆಜ್ ತೆಗೆದುಕೊಳ್ಳುವ ಜನ ಇವರು ಎಂದರು.
ಇದನ್ನೂ ಓದಿ: ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋವಿಂದ ಬಾಬು ವಿರುದ್ಧ ಇಡಿಗೆ ಪತ್ರ ಬರೆದ ಚೈತ್ರಾ ಕುಂದಾಪುರ !
ಇನ್ನು ಮತ್ತೊಂದೆಡೆ ಹುಬ್ಬಳ್ಳಿ ನಗರದಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಪ್ರತಿಕ್ರಿಯೆ ನೀಡಿದ್ದು ಬಿಜೆಪಿಯಲ್ಲಿ ಟಿಕೆಟ್ ಮಾರಾಟ ಪದ್ಧತಿ ಇಲ್ಲ. ಚೈತ್ರಾ ಕುಂದಾಪುರ ಕೇಸ್ಗೂ ಬಿಜೆಪಿಗೂ ಯಾವ ಸಂಬಂಧ ಇಲ್ಲ. ಮಾಜಿ ಸಿಎಂ ಹೇಗೆ ಟಿಕೆಟ್ ಪಡೆದ್ರು, ಹೇಗೆ ಕೊಟ್ಟಿದ್ದರು ಗೊತ್ತಿದೆ ಎಂದು ಎಂಎಲ್ಸಿ ಜಗದೀಶ್ ಶೆಟ್ಟರ್ಗೆ ಮಹೇಶ್ ಟೆಂಗಿನಕಾಯಿ ಟಾಂಗ್ ಕೊಟ್ಟರು.
ಬಿಜೆಪಿಯಲ್ಲಿ ಟಿಕೆಟ್ ಮಾರಟ ಪದ್ದತಿಯಿಲ್ಲ. ಕೆಲವರು ತಮ್ಮ ಚಟಕ್ಕೆ ಮಾಡಿದ್ರೆ ಅದಕ್ಕೆ ಬಿಜೆಪಿ ಉತ್ತರ ನೀಡುವುದಿಲ್ಲ. ಇದಕ್ಕೆ ಬಿಜೆಪಿ ಯಾವುದೇ ಸಂಬಂಧ ಇಲ್ಲ. ಮಾಜಿ ಸಿಎಂ ಹೇಗೆ ಟಿಕೆಟ್ ತೆಗೆದುಕೊಂಡಿದ್ದರು ತಾವು ಹೇಗೆ ಟಿಕೆಟ್ ಕೊಟ್ಟಿದ್ದರು ಅಂತ ಎಲ್ಲಾ ಗೊತ್ತಿದೆ. ಅತೀ ಹೆಚ್ಚು ಲಿಂಗಾಯತ ಸಮುದಾಯದ ಸಿಎಂ ಕೊಟ್ಟಿದ್ದು ಬಿಜೆಪಿ. ಜಗದೇಶ್ ಶೆಟ್ಟರ್ಗೆ 30 ವರ್ಷ ಬಿಜೆಪಿ ಎಲ್ಲಾ ಕೊಟ್ಟಿದೆ. ನಿಮಗೆ ಅನ್ಯಾಯವಾಗಿದ್ರೆ ನಿಮಗೆ ತಾಕತ್ ಇದ್ದರೆ ನೀವು ಸರಿ ಮಾಡಿಕೊಳ್ಳಿ. ರಾಜಕೀಯದಲ್ಲಿ ಸಮುದಾಯವನ್ನು ಎಳೆದು ತರಬಾರದು. ರಾಜಕೀಯಕ್ಕೂ ಸಮಾಜಕ್ಕೂ ಸಂಬಂಧವಿಲ್ಲ. ಕಾಂಗ್ರೆಸ್ನಲ್ಲಿ ಯಾರು ಶೆಟ್ಟರನ್ನು ಗುರುತಿಸುತ್ತಿಲ್ಲ. ಇದರಿಂದಾಗಿ ಅವರಿಗೆ ಕಷ್ಟ ಆಗಿದೆ. ಹೀಗಾಗಿ ಅವರು ಮಾಧ್ಯಮಗಳಿಗೆ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದ ಮಹೇಶ್ ಟೆಂಗಿನಕಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ