AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಣ್ಣ ಕುರಿತ ಪಠ್ಯ 10 ದಿನಗಳಲ್ಲಿ ಬದಲಿಸಬೇಕು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಾಕೀತು

ಬಸವೇಶ್ವರರು ಮತ್ತು ಅವರ ಪ್ರತಿಪಾದಿಸುತ್ತಿದ್ದ ವಿಷಯಗಳ ಬಗ್ಗೆ ನಾವೇ ಹೊಸ ಪಠ್ಯವೊಂದನ್ನು ರಚಿಸಿ, ಮುಖ್ಯಮಂತ್ರಿಗೆ ಕಳುಹಿಸುತ್ತೇವೆ.

ಬಸವಣ್ಣ ಕುರಿತ ಪಠ್ಯ 10 ದಿನಗಳಲ್ಲಿ ಬದಲಿಸಬೇಕು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಾಕೀತು
ಸಾಣೆಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jun 07, 2022 | 9:06 PM

Share

ಧಾರವಾಡ: ಸಮಾಜ ವಿಜ್ಞಾನ ಭಾಗ-1ರ 9ನೇ ತರಗತಿ ಪಠ್ಯಪುಸ್ತಕವನ್ನು ಶೀಘ್ರ ಬದಲಿಸಬೇಕು. 10 ದಿನಗಳ ಒಳಗೆ ಬದಲಿಸಲು ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಪ್ರತಿಭಟನೆ ರೂಪಿಸಬೇಕಾಗುತ್ತದೆ ಎಂದು ಸಾಣೆಹಳ್ಳಿ ತರಳುಬಾಳು ಮಹಾಸಂಸ್ಥಾನದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಸಿದರು. ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಡೆದ ಮಠಾಧೀಶರ ಸಭೆಯಲ್ಲಿ ಮಾತನಾಡಿದ ಅವರು, 9ನೇ ತರಗತಿಗೆ ಇರುವ ಸಮಾಜ ವಿಜ್ಞಾನ ಭಾಗ 1ರ ಪಠ್ಯದಲ್ಲಿ ಹಲವು ದೋಷಗಳನ್ನು ಗುರುತಿಸಿದ್ದೇನೆ. ವೈದಿಕ ಪರಂಪರೆಯನ್ನು ಬಿಂಬಿಸುವ ಕೆಲಸ ಈ ಪಠ್ಯದಲ್ಲಿ ಇದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ವೈದಿಕ ಪರಂಪರೆ ಧಿಕ್ಕರಿಸಿದ್ದ ಬಸವಣ್ಣನವರಿಗೆ ಯಾವುದೇ ಶೈವ ಗುರುಗಳು ದೀಕ್ಷೆ ಕೊಟ್ಟಿಲ್ಲ. ಆದರೆ ಪುಸ್ತಕದಲ್ಲಿ ಮಾತ್ರ ಶೈವ ಗುರುಗಳು ದೀಕ್ಷೆ ಕೊಟ್ಟರು ಎಂಬ ಉಲ್ಲೇಖವಿದೆ. ಈ ಸಂಬಂಧ ನಾವು ಮಠಾಧೀಶರು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಕೊಟ್ಟಿದ್ದೇವೆ. ಅವರು ಬಸವೇಶ್ವರರ ಪಠ್ಯದಲ್ಲಿರುವ ದೋಷಗಳನ್ನು ಸರಿಪಡಿಸುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಇವತ್ತು ಸಮಗ್ರವಾಗಿ ಚರ್ಚೆ ಮಾಡಿದ್ದೇವೆ. ಮುಂದೆ ಪಠ್ಯದಲ್ಲಿ ಎಲ್ಲಿಯೂ ಕೂಡ ಬಸವ ತತ್ವಕ್ಕೆ ಅಪಚಾರ ಆಗಬಾರದು. ಬಸವ ತತ್ವವನ್ನು ಸರಳವಾಗಿ ಬಿಂಬಿಸಬೇಕು ಎಂದು ಆಗ್ರಹಿಸಿದರು.

ಬಸವೇಶ್ವರರು ಮತ್ತು ಅವರ ಪ್ರತಿಪಾದಿಸುತ್ತಿದ್ದ ವಿಷಯಗಳ ಬಗ್ಗೆ ನಾವೇ ಹೊಸ ಪಠ್ಯವೊಂದನ್ನು ರಚಿಸಿ, ಮುಖ್ಯಮಂತ್ರಿಗೆ ಕಳುಹಿಸುತ್ತೇವೆ. ಅದನ್ನು ಸರ್ಕಾರ ಒಪ್ಪಿಕೊಂಡರೆ ಸಂತೋಷ ಪಡುತ್ತೇವೆ. ನಾಳೆಯೇ ಎಲ್ಲರೂ ಸೇರಿ ಒಂದು ಮನವಿ ಕೊಡುತ್ತೇವೆ. ಈಗ ಇರುವ ಪಠ್ಯವನ್ನು ಹತ್ತು ದಿನಗಳಲ್ಲಿ ಬದಲಿಸಬೇಕು ಎಂದು ಆಗ್ರಹಿಸಿದರು.

ಬಸವಣ್ಣನವರ ಪಠ್ಯ ಪರಿಷ್ಕರಿಸಿಲ್ಲ: ಬೊಮ್ಮಾಯಿ

ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಹಲವು ಸ್ವಾಮೀಜಿಗಳು ಆಕ್ಷೇಪ ಮಾಡಿದ್ದಾರೆ. ಬಸವಣ್ಣನವರ ವಿಷಯಾಂಶದಲ್ಲಿ ಬರಗೂರು ರಾಮಚಂದ್ರಪ್ಪ ಅವರ ಸಮಿತಿಯಿಂದ ರಚನೆಯಾದ ಪಠ್ಯಪುಸ್ತಕ ಮತ್ತು ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳೇ ಇವೆ. ಯಾರ ಭಾವನೆಗೂ ಧಕ್ಕೆಯಾಗದಂತೆ ಪರಿಷ್ಕರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಹೇಳಿದ್ದರು.

ವಿವಾದಕ್ಕೆ ಕಾರಣವಾದ ಅಂಶಗಳು

ಪಠ್ಯದಲ್ಲಿ ಪ್ರಸ್ತಾಪವಾಗಿರುವ ಎರಡು ಸಾಲುಗಳ ಬಗ್ಗೆ ಸ್ವಾಮೀಜಿಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಬಸವಣ್ಣ ಉಪನಯನವಾದ ನಂತರ ಕೂಡಲಸಂಗಮಕ್ಕೆ ನಡೆದರು. ಶೈವ ಗುರುಗಳ ಸಾನ್ನಿಧ್ಯದಲ್ಲಿ ಬಸವಣ್ಣನವರು ಲಿಂಗದೀಕ್ಷೆ ಪಡೆದರು ಎಂಬ ವಿಚಾರಗಳನ್ನು ಸ್ವಾಮೀಜಿಗಳು ಒಪ್ಪಿರಲಿಲ್ಲ. ಈ ಸಂಬಂಧ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದ ಜಯಮೃತ್ಯುಂಜಯ ಸ್ವಾಮೀಜಿ, ‘ಪಠ್ಯದಲ್ಲಿ ಕುವೆಂಪು ಬಳಿಕ ಬಸವಣ್ಣ ಅವರ ತತ್ವಕ್ಕೆ ಅಪಚಾರ ಮಾಡಲಾಗಿದೆ. ಪಠ್ಯದಲ್ಲಿನ ಸಾಲನ್ನು ನೋಡಿ ಎದೆಗೆ ಕಲ್ಲು ಹೊಡೆದಂತಾಯ್ತು. ಬಸವಣ್ಣನವರ ತತ್ವಗಳ ಬಗ್ಗೆ ದಾರಿ ತಪ್ಪಿಸುವ ಕೆಲಸ ಮಾಡಬೇಡಿ. ಬೊಮ್ಮಾಯಿ ಅವರೇ ನಿಮ್ಮ ತಂದೆ ಬಸವಣ್ಣನ ಭಕ್ತರಾಗಿದ್ದರು. ಅನೇಕ ಪೂಜ್ಯರ ಮಾರ್ಗದರ್ಶನ ನಿಮಗಿದೆ. ಪುಸ್ತಕ ಬಿಡುಗಡೆ ಆಗೋ ಮುಂಚೆ ಲೋಪದೋಷ ಸರಿಪಡಿಸಿ’ ಎಂದು ಒತ್ತಾಯಿಸಿದ್ದರು.

ಈ ಹಿಂದೆಯೂ ಮುಖ್ಯಮಂತ್ರಿಗೆ ಈ ಸಂಬಂಧ ಪತ್ರ ಬರೆದಿದ್ದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಪಠ್ಯಪುಸ್ತಕವನ್ನು ತಡೆಹಿಡಿದು ತಪ್ಪುಗಳನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದರು.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Tue, 7 June 22

ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?