Chennaveera Kanavi: ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕ; ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದಾರೆ. ಕಳೆದ 2 ವಾರದಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಕಣವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಧಾರವಾಡ: ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಶುಕ್ರವಾರ (ಜನವರಿ 28) ಧಾರವಾಡದ ಎಸ್ಡಿಎಂ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದೆ. ಎದೆ ಭಾಗದಲ್ಲಿ ಹೆಚ್ಚಿನ ಸೋಂಕು ಹರಡಿದೆ ಎಂದು ಮಾಹಿತಿ ಲಭ್ಯವಾಗಿದೆ. ಕಣವಿಯವರ ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡಿದೆ ಎಂದು ತಿಳಿದುಬಂದಿದೆ.
ಅಕ್ಯೂಟ್ ರೆಸ್ಪಿರೇಟರಿ ಡಿಸ್ಟ್ರೆಸ್ ಸಿಂಡ್ರೋಮ್ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದಾರೆ. ಕಳೆದ 2 ವಾರದಿಂದ ಎಸ್ಡಿಎಂ ಆಸ್ಪತ್ರೆಯಲ್ಲಿ ಕಣವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೊದಲು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಈಗ ಮತ್ತೆ ಆರೋಗ್ಯ ಕ್ಷೀಣಿಸುತ್ತಿದೆ. ಕಣವಿಯವರಿಗೆ ಕೊರೊನಾ ಸೋಂಕು ಕೂಡ ದೃಢಪಟ್ಟಿತ್ತು.
ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 2 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ ಎಸ್ಡಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಡಾ. ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಕೂಡ ಮಾಡಿದ್ದರು.
ಇದನ್ನೂ ಓದಿ: Chennaveera Kanavi Health Update: ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ
ಇದನ್ನೂ ಓದಿ: ಶಾಸಕ ಅರವಿಂದ ಬೆಲ್ಲದಗೆ ಸಚಿವ ಸ್ಥಾನ ನೀಡುವಂತೆ ಪತ್ರ ಬರೆದ ಹಿರಿಯ ಸಾಹಿತಿ ಚನ್ನವೀರ ಕಣವಿ
Published On - 3:24 pm, Fri, 28 January 22