ಧಾರವಾಡ: ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಬಗ್ಗೆ ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ನಾಡೋಜ ಚೆನ್ನವೀರ ಕಣವಿ ಅವರ ರಕ್ತದೊತ್ತಡ ಸಹಜ ಸ್ಥಿತಿಗೆ ಬಂದಿದೆ. ಮೂತ್ರಪಿಂಡ ಕಾರ್ಯದಲ್ಲಿ ಸುಧಾರಣೆ ಕಂಡು ಬರುತ್ತಿದೆ. ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ. ಆಮ್ಲಜನಕ ಅಗತ್ಯತೆಯಲ್ಲಿಯೂ ಇಳಿಕೆ ಕಾಣಿಸುತ್ತಿದೆ ಎಂದು ಧಾರವಾಡದ ಎಸ್‌ಡಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಣವಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಧಾರವಾಡದ ಎಸ್‌ಡಿಎಂ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಇದನ್ನೂ ಓದಿ: ಸೀಮಿತ ಸಮಯ, ಸ್ಥಳಾವಕಾಶದ ಕಾರಣದಿಂದ ಗಣರಾಜ್ಯೋತ್ಸವ ಪರೇಡ್ಗೆ ಕೇವಲ 12 ರಾಜ್ಯಗಳ ಸ್ತಬ್ಧಚಿತ್ರಗಳ ಆಯ್ಕೆ: ಕೇಂದ್ರ
ಅಪ್ರಾಪ್ತ ಮಗಳ ಮೇಲೆ ರೇಪ್ ಮಾಡಿದ್ದವನನ್ನು ಗೋರಖ್ಪುರ ಕೋರ್ಟ್ ಆವರಣದಲ್ಲಿಯೇ ಕೊಂದ ಮಾಜಿ ಬಿಎಸ್ಎಫ್ ಯೋಧ