ಭೀಕರ ರಸ್ತೆ ಅಪಘಾತ: ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಸೇರಿ ಇಬ್ಬರ ದುರ್ಮರಣ
ಧಾರವಾಡ: ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಮಧು ಪುಟ್ಟಪ್ಪ (42) ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೆಳಗಾವಿಗೆ ಹೊರಟಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರು ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಧಾರವಾಡ: ಕಾರು ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನ ಅಧಿಕಾರಿ ಮಧು ಪುಟ್ಟಪ್ಪ (42) ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೆಳಗಾವಿಗೆ ಹೊರಟಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಕಾರು ಚಾಲಕನಿಗೆ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.