AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ ಕಾರಾಗೃಹದಲ್ಲಿ ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಹೊಡೆದಾಟ

ಕೈದಿ ಹಾಗೂ ಜೈಲು ಸಿಬ್ಬಂದಿ ನಡುವೆ ಹೊಡೆದಾಟ ನಡೆದ ಘಟನೆ ಧಾರವಾಡ ಕಾರಗೃಹದಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೈದಿ ಪ್ರಶಾಂತ್ ಹಲವು ದಿನಗಳಿಂದ ಧಾರವಾಡ ಕಾರಾಗೃಹದಲ್ಲಿದ್ದು, ಬಾಚಣಿಕೆಯನ್ನೇ ಚೂಪಾಗಿ ಹರಿತಗೊಳಿಸಿ ಚುಚ್ಚಿರುವ ಸಾಧ್ಯತೆ ಇದೆ.

ಧಾರವಾಡ ಕಾರಾಗೃಹದಲ್ಲಿ ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಹೊಡೆದಾಟ
ಧಾರವಾಡ ಜಿಲ್ಲಾ ಕಾರಾಗೃಹದಲ್ಲಿ ಕೈದಿ ಮತ್ತು ಜೈಲು ಸಿಬ್ಬಂದಿ ನಡುವೆ ಹೊಡೆದಾಟ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: Rakesh Nayak Manchi|

Updated on:Oct 17, 2023 | 4:39 PM

Share

ಧಾರವಾಡ, ಅ.17: ಕೈದಿ ಹಾಗೂ ಜೈಲು ಸಿಬ್ಬಂದಿ ನಡುವೆ ಹೊಡೆದಾಟ ನಡೆದ ಘಟನೆ ಧಾರವಾಡ (Dharwad) ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಜೈಲು ಸಿಬ್ಬಂದಿ ಮೋಹನ ಸಿದ್ದಪ್ಪ ಬಡಿಗೇರ ಹಾಗೂ ಅನೇಕ ದಿನಗಳಿಂದ ಕಾರಗೃಹದಲ್ಲಿ ಕೈದಿಯಾಗಿರುವ ಪ್ರಶಾಂತ ಅಲಿಯಾಸ್ ಪಾಚು ಗಾಯಗೊಂಡವರಾಗಿದ್ದಾರೆ.

ಜೈಲಿನಲ್ಲಿ ಚಾಕು ಇಲ್ಲದಿರುವ ಹಿನ್ನೆಲೆ ಬಾಚಣಿಗೆಯನ್ನೇ ಚಾಕೂವಿನಂತೆ ಬಳಸಿ ಸಿಬ್ಬಂದಿ ಮೇಲೆ ಕೈದಿ ಹಲ್ಲೆ ನಡೆಸಿದ್ದಾನೆ ಎನ್ನಲಾಗುತ್ತಿದೆ. ಹೊಡೆದಾಟದಿಂದ ಇಬ್ಬರಿಗೂ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಸಿಬ್ಬಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು, ಬೆಳಗಾವಿ ಕೇಂದ್ರ ಕಾರಾಗೃಹ ಸ್ಪೋಟಿಸುವುದಾಗಿ ಕರೆ ಮಾಡಿದ್ದ ಆರೋಪಿ ಸುಳಿವು ಪತ್ತೆ

ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮರಿ ನಡೆಯುತ್ತಿರುವ ಪ್ರಕರಣಗಳು ಈ ಹಿಂದೆ ಸಾಕಷ್ಟು ನಡೆದಿವೆ. ಜುಲೈ ತಿಂಗಳ ಕೊನೆಯಲ್ಲಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇಬ್ಬರು ಕೈದಿಗಳ ನಡುವೆ ಹೊಡೆದಾಟ ನಡೆದಿತ್ತು. ಗಲಾಟೆ ನಡೆಯದಂತೆ ನೋಡಿಕೊಳ್ಳದ ಇಬ್ಬರು ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:34 pm, Tue, 17 October 23

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More