AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದಾದರೂ ವ್ಯಾಪಕ ರೋಗಕ್ಕೆ ಲಸಿಕಾಕರಣವೇ ಮದ್ದು ಅನ್ನೋದು 100 ವರ್ಷಗಳ ಹಿಂದೆ ಸಾಬೀತಾಗಿದೆ -ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿಯಲ್ಲಿ ನಡೆದ ದೇಶದಲ್ಲಿ 100 ಕೋಟಿ ಡೋಸ್ ಕೊವಿಡ್ ಲಸಿಕೆ ಸಂಭ್ರಮ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಂತೋಷ ವ್ಯಕ್ತಪಡಿಸಿದ್ದಾರೆ. ಲಸಿಕಾಕರಣ ದೇಶದಲ್ಲಿ ಹಲವು ಬಾರಿ ಪ್ರಯೋಗಿಸಿದ್ದೇವೆ. ಯಾವುದಾದರೂ ವ್ಯಾಪಕ ರೋಗಕ್ಕೆ ಲಸಿಕಾಕರಣವೇ ಮದ್ದು ಎಂಬುವುದು 100 ವರ್ಷಗಳ ಹಿಂದೆಯೇ ಸಾಬೀತಾಗಿದೆ.

ಯಾವುದಾದರೂ ವ್ಯಾಪಕ ರೋಗಕ್ಕೆ ಲಸಿಕಾಕರಣವೇ ಮದ್ದು ಅನ್ನೋದು 100 ವರ್ಷಗಳ ಹಿಂದೆ ಸಾಬೀತಾಗಿದೆ -ಸಿಎಂ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 22, 2021 | 11:00 AM

Share

ಹುಬ್ಬಳ್ಳಿ: ಭಾರತದಲ್ಲಿ ಅಕ್ಟೋಬರ್ 21ರಂದು ಕೊವಿಡ್ 19 ಲಸಿಕೆ ಅಭಿಯಾನ 100 ಕೋಟಿ ಡೋಸ್ಗಳ ಮೈಲಿಗಲ್ಲು ತಲುಪಿದೆ. ಜನವರಿಯಿಂದ ಶುರುವಾದ ಅಭಿಯಾನ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಿ ಹೊಸ ದಾಖಲೆ ಬರೆದಿದೆ. ಈ ಸಂಬಂಧ ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ದೇಶದಲ್ಲಿ 100 ಕೋಟಿ ಡೋಸ್ ಕೊವಿಡ್ ಲಸಿಕೆ ಸಂಭ್ರಮ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಂತೋಷ ವ್ಯಕ್ತಪಡಿಸಿದ್ದಾರೆ. ಲಸಿಕಾಕರಣ ದೇಶದಲ್ಲಿ ಹಲವು ಬಾರಿ ಪ್ರಯೋಗಿಸಿದ್ದೇವೆ. ಯಾವುದಾದರೂ ವ್ಯಾಪಕ ರೋಗಕ್ಕೆ ಲಸಿಕಾಕರಣವೇ ಮದ್ದು ಎಂಬುವುದು 100 ವರ್ಷಗಳ ಹಿಂದೆಯೇ ಸಾಬೀತಾಗಿದೆ. ಸರ್ಕಾರ ಕೊವಿಡ್ ಎದುರಿಸಿದ್ದರಿಂದ ಕೊವಿಡ್ ನಿರ್ವಹಣೆಯಾಗಿದೆ. ಖಾಸಗಿಯವರಿಗಿಂತಲೂ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಕೆಲಸ ಮಾಡಲಾಗಿದೆ. ಖಾಸಗಿಯವರು ಮೀನಮೇಷ ಎಣಿಸುತ್ತಾರೆ. ಆದರೆ ಸರ್ಕಾರಿ ಆಸ್ಪತ್ರೆಗಳು ಬಹಳ ಕೆಲಸ ಮಾಡಿವೆ ಎಂದು ಸರ್ಕಾರಿ ಆಸ್ಪತ್ರೆಗಳನ್ನು ಸಿಎಂ ಹೊಗಳಿದ್ದಾರೆ.

ಕೊವಿಡ್ನಿಂದ 24 ಸಾವಿರ ಬೆಡ್, 6 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ ಮಾಡಲಾಗಿದೆ. ಕೊವಿಡ್ನಿಂದ ತಾಲೂಕು ಕೇಂದ್ರಗಳ ಆಸ್ಪತ್ರೆಗಳು ಅಪ್ಡೇಟ್ ಆಗಿವೆ. ಕೊರೊನಾ ವೈರಸ್ ಬಂದಾಗ ಏನೂ ಸಲಕರಣೆ ಇರಲಿಲ್ಲ. ಪಿಪಿಇ ಕಿಟ್ಗಳನ್ನು ಚೀನಾದಿಂದ ತರಿಸಲಾಗುತ್ತಿತ್ತು. ಆದ್ರೆ ಈಗ ನಾವೇ ಎಲ್ಲವನ್ನ ರಫ್ತು ಮಾಡುವಂತಾಗಿದ್ದೇವೆ. ಪ್ರಧಾನಿ ಮಾತನಾಡುವ ಬದಲು ಮಾಡಿ ತೋರಿಸಿದ್ದಾರೆ. ಎಲ್ಲ ಸರ್ಕಾರಿ ಆಸ್ಪತ್ರೆ ಸೇರಿ ಖಾಸಗಿ ಅಸ್ಪತ್ರೆಗಳಿಗೂ ಧನ್ಯವಾದಗಳು ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ: Coronavirus cases in India: ಭಾರತದಲ್ಲಿ 15,786 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

PM Modi Speech: ಭಾರತ ಕೊರೊನಾ ವಿರುದ್ಧ ಹೋರಾಡಲು ಸಾಧ್ಯವೇ ಎಂಬ ಪ್ರಶ್ನೆಗೆ 100 ಕೋಟಿ ಲಸಿಕೆ ನೀಡಿಕೆ ಉತ್ತರ ನೀಡಿದೆ; ಪ್ರಧಾನಿ ಮೋದಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್