AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಾಧಗಳ ತ್ವರಿತ ಪತ್ತೆ, ತನಿಖೆಯ ವೇಗ ಹೆಚ್ಚಿಸಲು 6 ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಸಿಎಂ

ಪ್ರತಿ ವರ್ಷ 100 ಠಾಣೆಗಳಂತೆ ಮುಂದಿನ ಐದು ವರ್ಷದಲ್ಲಿ 500 ಪೊಲೀಸ್ ಠಾಣೆ ನಿರ್ಮಿಸುವ ಗುರಿ ಇದೆ. 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಿಸಲಾಗುವುದು ಎಂದು ಅವರು ತಿಳಿಸಿದರು.

ಅಪರಾಧಗಳ ತ್ವರಿತ ಪತ್ತೆ, ತನಿಖೆಯ ವೇಗ ಹೆಚ್ಚಿಸಲು 6 ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಸಿಎಂ
ಬಸವರಾಜ ಬೊಮ್ಮಾಯಿ
TV9 Web
| Updated By: guruganesh bhat|

Updated on: Sep 27, 2021 | 3:18 PM

Share

ಹುಬ್ಬಳ್ಳಿ: ಪೊಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ, ಹುಬ್ಬಳ್ಳಿ-ಧಾರವಾಡ, ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು 6 ವಿಧಿವಿಜ್ಞಾನ (ಎಫ್ ಎಸ್ ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಸೋಮವಾರ (ಸೆಪ್ಟೆಂಬರ್ 27) ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ ಕಸಬಾ ಪೇಟೆ ಪೊಲೀಸ್ ಠಾಣೆ, ದಕ್ಷಿಣ ಸಂಚಾರಿ ಠಾಣೆ, ಆಳ್ನಾವರ ಪೊಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಛೇರಿ ಮತ್ತು 36 ಪೊಲೀಸ್ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು.

ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗೆ ಚರ್ಚಿಸಲಾಗಿದೆ. ಪುಣೆಯ ಕಡಕ್‌ವಾಸ್ಲಾದಲ್ಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್.ಡಿ.ಎ) ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ಮಧ್ಯಮ ಹಂತದ ಪೊಲೀಸ್ ಅಧಿಕಾರಿಗಳ ತರಬೇತಿಗಾಗಿ ಪ್ರತ್ಯೇಕ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರು ಬಸವರಾಜ ಬೊಮ್ಮಾಯಿ ತಿಳಿಸಿದರು.

ಆಫೀಸರ್ ಆನ್ ಕ್ರೈಂ ಸೀನ್ ಎನ್ನುವ ಕಲ್ಪನೆ ಆಧಾರದ ಮೇಲೆ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. 16 ಸಾವಿರ ಪೊಲೀಸ್ ಪೇದೆ ಹಾಗೂ ಸಬ್ ಇನ್ಸ್‌ಪೆಕ್ಟರುಗಳ ನೇಮಕಾತಿ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು ಡಿವೈ‌ಎಸ್‌ಪಿ ಹಾಗೂ ಮೇಲಿನ ಹಂತದ ಅಧಿಕಾರಿಗಳು ಕೇವಲ ಕಚೇರಿ, ಆಡಳಿತ ಕೆಲಸಗಳಿಗೆ ಮಹತ್ವ ನೀಡದೆ ಪ್ರತಿಯೊಂದು ಠಾಣೆಗೆ ಭೇಟಿ ನೀಡಿ ಮೂಲ ಪೊಲೀಸ್ ವೃತ್ತಿ ನಿರ್ವಹಿಸಬೇಕು. ಎಲ್ಲರೂ ಕ್ಷೇತ್ರಕ್ಕೆ ಇಳಿದು ಕರ್ತವ್ಯ ಮಾಡಬೇಕು ಎಂದು ಸಲಹೆ ನೀಡಿದರು.

ಹುಬ್ಬಳ್ಳಿ ಧಾರವಾಡ ಅವಳಿ ನಗರದ ಕಾನೂನು ಸುವ್ಯವಸ್ಥೆ ಮುಖ್ಯ. ಇಲ್ಲಿನ ಜನ ಶಾಂತಿಪ್ರಿಯರು ಕೆಲವು ಕಿಡಿಗೇಡಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನವಾಗುತ್ತಿದೆ. ಅವುಗಳನ್ನು ನಿಯಂತ್ರಿಸುವುದು ಅಧಿಕಾರಿಗಳಿಂದ ಸಾಧ್ಯವಿದೆ. ಪೊಲೀಸ್ ಆಯುಕ್ತರು ಠಾಣೆಗಳಿಗೆ ತೆರಳಿ ಪರಿಶೀಲನೆ ಮಾಡಬೇಕು ಎಂದು ಸಿಎಂ ಸೂಚಿಸಿದರು.

ಠಾಣೆಗಳಿಗೆ ಮೂಲಭೂತ ಸೌಕರ್ಯ ನೀಡಿ ಸುಧಾರಣೆ ಮಾಡಬೇಕು. ಪ್ರತಿ ವರ್ಷ 100 ಠಾಣೆಗಳಂತೆ ಮುಂದಿನ ಐದು ವರ್ಷದಲ್ಲಿ 500 ಪೊಲೀಸ್ ಠಾಣೆ ನಿರ್ಮಿಸುವ ಗುರಿ ಇದೆ. 10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಿಸಲಾಗುವುದು. ಶ್ವಾನಗಳ ತರಬೇತಿಗೆ ಡಾಗ್ ಕ್ಯಾನಲ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಜಿಲ್ಲೆಯಲ್ಲಿ 21 ಕೋಟಿ ರೂ‌.ವೆಚ್ಚದಲ್ಲಿ ಪೋಲಿಸ್ ಠಾಣೆ, ಸಂಚಾರಿ ಠಾಣೆ, ವಸತಿ ಗೃಹಗಳನ್ನು ನಿರ್ಮಿಸಲು ಶಂಕುಸ್ಥಾಪನೆ ಮಾಡಲಾಗಿದೆ. ಆನ್ಲೈನ್ ಲಾಟರಿ ಹಾಗೂ ಜೂಜಿಗೆ ಇತಿಶ್ರೀ ಹಾಡಲು ಶಾಸನ ಸಭೆಯಲ್ಲಿ ಮಸೂದೆ ಅನುಮೋದನೆ ಆಗಿದೆ. ಕಾಗ್ನಿಜಿಬಲ್ ಪ್ರಕರಣ ಎಂದು ದಾಖಲಿಸಿಕೊಂಡು. ಜಾಮೀನು ರಹಿತವಾಗಿ ತನಿಖೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಜೂಜಾಟ, ಆನ್ ಲೈನ್ ಜೂಜುಕಾರನ್ನು ಜೈಲಿಗೆ ತಳ್ಳಲು ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲಿಯೇ ಇದು ಕಾಯ್ದೆಯಾಗಿ ಜಾರಿಗೆ ಬರಲಿದೆ ಎಂದು ತಿಳಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, 2015 ರಿಂದ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ಇಂದು ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳಿಗೆ ಇಂದು ಭೂಮಿಪೂಜೆಯನ್ನು ಮುಖ್ಯಮಂತ್ರಿಯವರು ನೆರವೇರಿಸಿರುವುದು ಸಂತಸ ತಂದಿದೆ ಎಂದರು.

ಕೈಮಗ್ಗ,ಜವಳಿ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಕರ್ನಾಟಕ ಕೃಷಿ ಉತ್ಪನ್ನಗಳ ಸಂಸ್ಕರಣ ಹಾಗೂ ರಫ್ತು ನಿಗಮದ ಅಧ್ಯಕ್ಷ ಎಸ್.ಐ.ಚಿಕ್ಕನಗೌಡ್ರ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ವಾಕರಸಾಸಂ ಅಧ್ಯಕ್ಷ ವಿ.ಎಸ್.ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಉತ್ತರ ವಲಯ ಐಜಿಪಿ ಎನ್.ಸತೀಶಕುಮಾರ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ದೇಸಾಯಿವಾಡೆ: ಶಂಕರ್ ನಾಗ್ ಅವರ ಜೋಕುಮಾರ ಸ್ವಾಮಿ ಚಿತ್ರ ಶೂಟಿಂಗ್ ನಡೆದದ್ದು ಇಲ್ಲೇ 

Sneha Dubey: ಕಾಶ್ಮೀರದ ಪ್ರಸ್ತಾಪವೆತ್ತಿದ ಪಾಕ್​ ಪ್ರಧಾನಿಗೆ ಕಟು ಉತ್ತರ ಕೊಟ್ಟ ಸ್ನೇಹಾ ದುಬೆ ಯಾರು? ಚಿಕ್ಕವಯಸ್ಸಿನ ಅಧಿಕಾರಿ ಬಗ್ಗೆ ಇಲ್ಲಿದೆ ಮಾಹಿತಿ

(CM Basavaraj Bommai says will start 6 Methodological Laboratories to speed up the detection of crimes speed of investigation)

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ