ಏಪ್ರಿಲ್ 30ರೊಳಗೆ ಇನ್ನಷ್ಟು ಯೋಜನೆಗಳಿಗೆ ಕಾರ್ಯಾದೇಶ; ಹುಬ್ಬಳ್ಳಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ
ನಾಳೆಯಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸರ್ಕಾರ ಸಕಲ ತಯಾರಿ ಮಾಡಿಕೊಂಡಿದೆ ಎಂದು ಹುಬ್ಬಳ್ಳಿಯ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿದ್ಯಾರ್ಥಿಗಳು ಯಾವುದೇ ಭಯ ಇಲ್ಲದೇ ಪರೀಕ್ಷೆ ಬರೆಯಲಿ.
ಹುಬ್ಬಳ್ಳಿ: ಏಪ್ರಿಲ್ ಅಂತ್ಯದೊಳಗೆ ಇನ್ನಷ್ಟು ಯೋಜನೆಗಳಿಗೆ (Projects) ಕಾರ್ಯಾದೇಶ ಮಾಡಲಾಗುವುದು ಅಂತ ಹುಬ್ಬಳ್ಳಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಅಂತಾರಾಜ್ಯ ಜಲವಿವಾದಗಳ ಪರಿಹಾರಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ಏಪ್ರಿಲ್ ಮೊದಲ ವಾರದಲ್ಲಿ ಜಲಶಕ್ತಿ ಸಚಿವರನ್ನು ಭೇಟಿ ಮಾಡಲಾಗುವುದು. ಪರಿಸರ ಇಲಾಖೆ ಅನುಮತಿ ಪಡೆಯಲು ಪ್ರಯತ್ನ ಮಾಡುತ್ತೇವೆ. ಕಲ್ಯಾಣ ಕರ್ನಾಟಕ ಭಾಗದ ಯೋಜನೆಗಳಿಗೆ 3,000 ಕೋಟಿ ರೂ. ನೀಡಲಾಗಿದ್ದು, ಏಪ್ರಿಲ್ 30ರೊಳಗೆ ಯೋಜನೆಗಳಿಗೆ ಅನುಮತಿ ನೀಡಲಾಗುತ್ತದೆ ಎಂದರು.
ನಾಳೆಯಿಂದ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗೆ ಸರ್ಕಾರ ಸಕಲ ತಯಾರಿ ಮಾಡಿಕೊಂಡಿದೆ ಎಂದು ಹುಬ್ಬಳ್ಳಿಯ ನಿವಾಸದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿದ್ಯಾರ್ಥಿಗಳು ಯಾವುದೇ ಭಯ ಇಲ್ಲದೇ ಪರೀಕ್ಷೆ ಬರೆಯಲಿ. ಅತ್ಯಂತ ಸರಳ ರೀತಿಯಲ್ಲಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದರು. ಇದೇ ವೇಳೆ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಈಗಾಗಲೇ ಹೈಕೋರ್ಟ್ ಹಿಜಾಬ್ ಬಗ್ಗೆ ತೀರ್ಪು ನಿಡಿದೆ. ತೀರ್ಪು ಬಂದ ಮೇಲೆ ಈ ರೀತಿ ಅನಾವಶ್ಯಕ ಹೇಳಿಕೆ ನೀಡೋದು ತಪ್ಪು ಎಂದು ಅಭಿಪ್ರಾಯಪಟ್ಟರು.
ಹುಬ್ಬಳ್ಳಿ ನಿವಾಸದಲ್ಲಿ ಸಿಎಂ ಬೊಮ್ಮಾಯಿ ವಾಸ್ತವ್ಯ ಹೂಡಿರುವ ಹಿನ್ನೆಲೆ ಬೊಮ್ಮಾಯಿ ಭೇಟಿಗಾಗಿ ನೂರಾರು ಜನ ಆಗಮಿಸಿದ್ದಾರೆ. ಹುಬ್ಬಳ್ಳಿಯ ಆದರ್ಶ ನಗರಕ್ಕೆ ರೈತರು, ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳ ಆಗಮಿಸಿದ್ದಾರೆ.
ಇದನ್ನೂ ಓದಿ
ನಮ್ಮ ಬಾಳ ಸಂಗಾತಿಯ ಆಯ್ಕೆ ಹೇಗಿರಬೇಕು ಗೊತ್ತಾ..! ಡಾ. ಸೌಜನ್ಯ ವಶಿಷ್ಟ ಹೇಳ್ತಾರೆ ಕೇಳಿ
ದಿನ ಭವಿಷ್ಯ: ಮಿಥುನ ರಾಶಿಯವರಿಗೆ ಧನ ಲಾಭ, ನಿಮ್ಮ ರಾಶಿ ಭವಿಷ್ಯ ಇಲ್ಲಿದೆ